Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಟಿ20 ವಿಶ್ವಕಪ್ ಸೋಲು: ತಂಡದ ಆಯ್ಕೆ ಕುರಿತು ಅಪಸ್ವರ, ಹಿರಿಯರಿಗೆ ಕೋಕ್ ಬಗ್ಗೆ ಚಿಂತನೆ

ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

- Advertisement -
- Advertisement -

ಗುರುವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋಲುತ್ತಿದ್ದಂತೆ ತಂಡದ ಆಯ್ಕೆಯ ಬಗ್ಗೆಯೇ ಇದೀಗ ಅಪಸ್ವರ ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಸೇರಿದಂತೆ ಯಾವುದೇ ಪ್ರಮುಖ ಟೂರ್ನಿಗಳಲ್ಲಿ ಭಾರತ ಲೆಗ್ ಸ್ಪಿನ್ನರ್ ಇಲ್ಲದೆ ಕಣಕ್ಕೆ ಇಳಿಯುವುದೇ ಇಲ್ಲ. ಆದರೆ, ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಒಂದು ಪಂದ್ಯದಲ್ಲೂ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸದ ಬಗ್ಗೆ ಹಲವರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಫರೂಕ್ ಇಂಜಿನಿಯರ್, “ನಾನು ಭಾರತ ತಂಡದ ನಾಯಕನಾಗಿದ್ದರೆ ಖಚಿತವಾಗಿ ಎಲ್ಲ ಪಂದ್ಯದಲ್ಲೂ ಯಜುವೇಂದ್ರ ಚಹಲ್ ಅವರನ್ನು ಕಣಕ್ಕಿಳಿಸುತ್ತಿದ್ದೆ. ಆದರೆ, ಆತನನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಲಾಯಿತೇ ವಿನಃ ಪ್ರಮುಖ ಪಂದ್ಯಗಳಲ್ಲಿ ಕೈಬಿಡಲಾಗಿತ್ತು. ಭಾರತದ ಸೋಲಿಗೆ ಪರಿಣತ ಲೆಗ್ ಸ್ಪಿನ್ನರ್ ಆಡುವ ಹನ್ನೊಂದರ ಬಳಗದಲ್ಲಿ ಇಲ್ಲದೇ ಇದ್ದುದ್ದೇ ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ, ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯನ್ನೇ ಅಲ್ಲಗೆಳೆದಿರುವ ಅವರು, “ಯಜುವೇಂದ್ರ ಚಹಲ್ ಮತ್ತು ಯುವ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಇಬ್ಬರೂ ಪ್ರತಿಭಾನ್ವಿತರು. ಈ ಹಿಂದೆ ಅನೇಕ ಪಂದ್ಯಗಳಲ್ಲಿ ಅವರು ತಮ್ಮ ವಿಕೆಟ್ ತೆಗೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬಿಸಿಸಿಐ ಆಯ್ಕೆ ಮಂಡಳಿ ಈ ಇಬ್ಬರೂ ಬೌಲರ್‌ಗಳನ್ನು ಆಯ್ಕೆ ಮಾಡಬೇಕಿತ್ತು. ಕನಿಷ್ಟ ಒಬ್ಬರನ್ನಾದರೂ ಎಲ್ಲ ಪಂದ್ಯದಲ್ಲಿ ಕಣಕ್ಕಿಳಿಸಬೇಕಾಗಿತ್ತು. ಇಂತಹ ಪ್ರಮಾದಗಳಿಂದಲೇ ಇಂದು ಭಾರತ ತಂಡ ಸವಾಲೊಡ್ಡದೆ ಸೋಲೊಪ್ಪಲು ಕಾರಣವಾಗಿದೆ” ಎಂದು ಫಾರೂಕ್ ಇಂಜಿನಿಯರ್ ಅಸಮಾಧಾನ ಹೊರಹಾಕಿದ್ದಾರೆ.

ಅಶ್ವಿನ್ ಆಯ್ಕೆಯ ಬಗ್ಗೆಯೂ ಪ್ರಶ್ನೆ:

ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭಾರತದ ಪಾಲಿನ ಅನುಭವಿ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಅವರು ಭಾರತದ ನೆಲದಲ್ಲಿ ಸಾಕಷ್ಟು ಯಶಸ್ಸು ಗಳಿಸಿದ್ದಾರೆ ವಿನಃ ವಿದೇಶಿ ನೆಲದಲ್ಲಿ ಅವರ ಸಾಧನೆ ಅಷ್ಟಕ್ಕಷ್ಟೆ. ಇದೇ ಕಾರಣಕ್ಕೆ ಈ ಹಿಂದೆ ಭಾರತ ತಂಡ ಹಲವು ವಿದೇಶಿ ಟೂರ್ನಿಗಳಿಗೆ ಅವರನ್ನು ಫಾರ್ಮ್‌ನಲ್ಲಿ ಇದ್ದಾಗ್ಯೂ ಆಯ್ಕೆ ಮಾಡದೆ ಕೈಬಿಟ್ಟ ಉದಾಹರಣೆಗಳಿವೆ.

ಇನ್ನೂ ಆಸ್ಟ್ರೇಲಿಯಾ ನೆಲದಲ್ಲಿ ಅಶ್ವಿನ್ ಚುಟುಕು ಮಾದರಿ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆರು ಪಂದ್ಯಗಳಲ್ಲಿ ಅವರ ಆರು ವಿಕೆಟ್‌ಗಳಲ್ಲಿ ಮೂರು ಜಿಂಬಾಬ್ವೆ ಪಂದ್ಯದಲ್ಲಿ ಬಂದಿವೆ. ಆದರೆ ಅವರ ಎಕಾನಮಿ 8.15 ಇದೆ. ಆದರೂ, ಅವರನ್ನು ಈ ವಿಶ್ವಕಪ್‌ಗೆ ಏಕೆ ಆಯ್ಕೆ ಮಾಡಲಾಯಿತು? ಎಂದು ಹಲವು ಹಿರಿಯ ಕ್ರಿಕೆಟಿಗರು ಸಾಲು ಸಾಲು ಪ್ರಶ್ನೆಗಳನ್ನು ಮುಂದಿಡುತ್ತಿದ್ದಾರೆ.

ಈ ನಡುವೆ ರವೀಂದ್ರ ಜಡೇಜ ಅನುಪಸ್ಥಿತಿಯ ಕಾರಣಕ್ಕೆ ಆಲ್‌ರೌಂಡರ್‌ ಕೋಟಾದ ಅಡಿಯಲ್ಲಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರನ್ನೂ ಸಹ ವಿಶ್ವಕಪ್‌ನ ಪಂದ್ಯಗಳಲ್ಲೂ ಕಣಕ್ಕಿಳಿಸಲಾಗಿತ್ತು. ಆದರೆ, ಅವರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸತತ ವಿಫಲರಾದರು. ಆದರೂ, ಸಹ ಸೆಮಿಫೈನಲ್ ಪಂದ್ಯದಲ್ಲಿ ಅವರನ್ನು ಏಕೆ ಆಡಿಸಲಾಯಿತು. ಅವರ ಬದಲಿಗೆ ಬೇರೆ ಆಟಗಾರರನ್ನು ಆಡಿಸಬಹುದಿತ್ತಲ್ಲ? ಎಂದೂ ಸಹ ಹಲವರು ಕಿಡಿಕಾರುತ್ತಿದ್ದಾರೆ.

ಹಿರಿಯ ಆಟಗಾರರಿಗೆ ಕೋಕ್

ಸದ್ಯಕ್ಕೆ 2023ರಲ್ಲಿ ನಡೆಯುವ ಏಕದಿನ ವಿಶ್ವಕಪ್ ಮೇಲೆ ಭಾರತ ಕಣ್ಣಿಟ್ಟಿದೆ. ಅದಕ್ಕಾಗಿ ಮುಂದಿನ ವರ್ಷದವರೆಗೆ ಸುಮಾರು 25 ಏಕದಿನ ಪಂದ್ಯಗಳನ್ನಾಡಲಿದೆ. ಆದರೆ ತೊಂದರೆ ಇರುವುದು 2024 ರ ಟಿ20 ವಿಶ್ವಕಪ್ ಆಗಿದೆ. ಆ ಸಮಯಕ್ಕೆ ಈ ಬಾರಿ ಆಡಿದ ಹಲವು ಆಟಗಾರರು ಇರುವುದಿಲ್ಲ ಎನ್ನಲಾಗುತ್ತಿದೆ.

2024ರ ವಿಶ್ವಕಪ್‌ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಆದರೂ ಆ ವೇಳೆಗೆ ಹಲವು ಹಿರಿಯ ಆಟಗಾರರಿಗೆ ಕೋಕ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ. ಮುಖ್ಯವಾಗಿ ರೋಹಿತ್ ಶರ್ಮಾ, ಆರ್ ಅಶ್ವಿನ್ ಮತ್ತು ದಿನೇಶ್ ಕಾರ್ತಿಕ್ ಆ ಪಟ್ಟಿಯಲ್ಲಿದ್ದು ವಿರಾಟ್ ಕೊಹ್ಲಿಯವರನ್ನು ಸಹ ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಇನ್ನು ಭಾರತ ತಂಡದ ಆರಂಭಿಕ ಆಟಗಾರರಾಗಿ ಶುಭ್‌ಮನ್ ಗಿಲ್, ಪೃಥ್ವಿ ಶಾ ರನ್ನು ಹೆಚ್ಚು ಆಡಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ರಿಷಬ್ ಪಂತ್ ಎಡಗೈ ಬ್ಯಾಟ್ಸ್‌ಮನ್ ಆಗಿದ್ದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಸದ್ಯಕ್ಕೆ ಕಳಪೆ ಪ್ರದರ್ಶನ ನೀಡಿರುವ ಕೆ.ಎಲ್ ರಾಹುಲ್ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ಟಿ20 ವಿಶ್ವಕಪ್ ವೇಳೆಗೆ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸುವ ಕುರಿತು ಚರ್ಚೆಗಳಾಗುತ್ತಿವೆ.

ಪೈಪೋಟಿಯಿಲ್ಲದೆ ಸೋಲೊಪ್ಪಿಕೊಂಡ ಭಾರತ

ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 168ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಆದರೆ, ಬೌಲಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಆಂಗ್ಲರು ಒಂದು ವಿಕೆಟ್ ಸಹ ನಷ್ಟವಿಲ್ಲದೆ ಕೇವಲ 16 ಓವರ್ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು. ಈ ಸೋಲಿನಿಂದ ಭಾರತ ತಂಡ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...