Homeಮುಖಪುಟಟಿ20 ವಿಶ್ವಕಪ್ ಸೆಮಿಫೈನಲ್: ಇಂಗ್ಲೆಂಡ್‌ ಗೆಲುವಿಗೆ 169 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

ಟಿ20 ವಿಶ್ವಕಪ್ ಸೆಮಿಫೈನಲ್: ಇಂಗ್ಲೆಂಡ್‌ ಗೆಲುವಿಗೆ 169 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

- Advertisement -
- Advertisement -

ಬಹುನಿರೀಕ್ಷಿತ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳದುಕೊಂಡು 168 ರನ್ ಗಳಿಸುವ ಮೂಲಕ ಸವಾಲಿನ ಮೊತ್ತ ಪೇರಿಸಿದೆ. ವಿರಾಟ್ ಕೊಹ್ಲಿಯ ಸೊಗಸಾದ ಮತ್ತು ಹಾರ್ದಿಕ್ ಪಾಂಡ್ಯರವರ ಬಿರುಸಿನ ಅರ್ಧಶಕತಗಳಿಂದ ಭಾರತ ತಂಡ ಇಂಗ್ಲೆಂಡ್ ಗೆಲುವಿನ 169 ರನ್‌ಗಳ ಗುರಿ ನೀಡಿದೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರೀಕ್ಷೆಯಂತೆ ವೋಕ್ಸ್ ಕೆ.ಎಲ್ ರಾಹುಲ್ ವಿಕೆಟ್ ತೆಗೆದು ಶುಭಾರಂಭ ಮಾಡಿದರು. ನಂತರ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಅಲ್ಪ ಜೊತೆಯಾಟ ನೀಡಿದರೂ ಶರ್ಮಾ ಬೇಗನೆ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನೂ ಸಿಕ್ಸ್‌ ಬಾರಿಗೆ ಭರವಸೆ ಮೂಡಿಸಿದ್ದ ಸೂರ್ಯಕುಮಾರ್ ಯಾದವ್ ಆಟವೂ ಹೆಚ್ಚು ಹೊತ್ತು ನಡೆಯಲಿಲ್ಲ. ಪರಿಣಾಮ ಭಾರತ ಒಂದು ಹಂತದಲ್ಲಿ 9 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ 60 ಅಷ್ಟೇ ಗಳಿಸಿತ್ತು.

ಆದರೆ, ನಾಲ್ಕನೇ ವಿಕೆಟ್‌ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಜೊತೆಯಾಟಕ್ಕೆ ಮುಂದಾದರು. 4 ಬೌಂಡರಿ 1 ಸಿಕ್ಸರ್ ಸಹಾಯದಿಂದ ವಿರಾಟ್ ಕೊಹ್ಲಿ 40 ಎಸೆತಕ್ಕೆ 50 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 4 ಬೌಂಡರಿ 5 ಸಿಕ್ಸರ್ ಸಹಾಯದಿಂದ 33 ಎಸೆತಕ್ಕೆ ಬಿರುಸಿನ 63 ರನ್ ಬಾರಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...