Homeಮುಖಪುಟಟಿ20 ಕ್ರಿಕೆಟ್: ಪಾಕ್ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ-ಯೋಗಿ ಆದಿತ್ಯನಾಥ್

ಟಿ20 ಕ್ರಿಕೆಟ್: ಪಾಕ್ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ-ಯೋಗಿ ಆದಿತ್ಯನಾಥ್

ಪಾಕ್ ಗೆಲುವು ಸಂಭ್ರಮಿಸಿದ್ದ ಆರೋಪದಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಲಾಗಿದೆ

- Advertisement -
- Advertisement -

ಅಕ್ಟೋಬರ್ 24 ರಂದು ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ದಾಖಲಿಸಿದೆ. ಈ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಬುಧವಾರ ಹಿಂದಿ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಷಯ ತಿಳಿಸಿದ್ದಾರೆ.

ಆ ಸಂದರ್ಶನದ ಪ್ರತಿಯನ್ನು ಆದಿತ್ಯನಾಥ್ ಅವರ ಕಚೇರಿಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಶೇರ್‌ ಮಾಡಲಾಗಿದ್ದು, ಪಾಕಿಸ್ತಾನದ ವಿಜಯವನ್ನು ಆಚರಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಕುರಿತು ಹಿಂದಿಯಲ್ಲಿ ಒಂದು ಸಾಲು ಹಾಕಲಾಗಿದೆ.

ಇದನ್ನೂ ಓದಿ: ವಿ ಲವ್ ಯೂ ಮೊಹಮ್ಮದ್ ಶಮಿ ಎಂದ ಭಾರತದ ಕ್ರಿಕೆಟಿಗರು: ಕಾರಣ?

 

ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕ್ ಪಂದ್ಯದ ನಂತರ ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ, ಪಾಕ್ ಗೆಲುವು ಸಂಭ್ರಮಿಸಿದ್ದ ಆರೋಪದಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಆಗ್ರಾದಲ್ಲಿ ಬಂಧಿಸಲಾಗಿದೆ. ಬಿಜೆಪಿ ಯುವ ಮೋರ್ಚಾ ನಾಯಕ ಗೌರವ್ ರಾಜಾವತ್ ಅವರ ದೂರಿನ ಮೇರೆಗೆ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು ಬಳಿಕ ಮೂವರನ್ನು ಬಂಧಿಸಲಾಗಿದೆ.

“153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಐಪಿಸಿ ಸೆಕ್ಷನ್ 505 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ಎಫ್ (ಸೈಬರ್ ಭಯೋತ್ಪಾದನೆಗೆ ಶಿಕ್ಷೆ)  ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಆಗ್ರಾದ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

UP Says Sedition For Celebrating Pak Win; 3 J&K Students Arrested In Agra
(PC: NDTV) ಬಂಧಿಸಲ್ಪಟ್ಟ ವಿದ್ಯಾರ್ಥಿಗಳು

ಆಗ್ರಾದ ಆರ್‌ಬಿಎಸ್ ಎಂಜಿನಿಯರಿಂಗ್ ಕಾಲೇಜು ಸೋಮವಾರ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲ್‌ನಿಂದ ಅಮಾನತುಗೊಳಿಸಿದೆ.

T20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಿದ ಅಥವಾ ಭಾರತದ ವಿರುದ್ಧ ಪಾಕಿಸ್ತಾನದ ಜಯವನ್ನು ಸಂಭ್ರಮಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಒಟ್ಟು ಐದು ಜಿಲ್ಲೆಗಳಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇತ್ತ ಸಂಭ್ರಮಾಚರಣೆಯ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜೊತೆಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವು ದಾಖಲಿಸಿತ್ತು.


ಇದನ್ನೂ ಓದಿ: ಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು, ಪಂಜಾಬ್‌ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...