Homeಮುಖಪುಟತಬಲಾ ಮಾಂತ್ರಿಕ ಝಾಕಿರ್ ಹುಸೈನ್ ನಿಧನ : ಖಚಿತಪಡಿಸಿದ ಕುಟುಂಬ

ತಬಲಾ ಮಾಂತ್ರಿಕ ಝಾಕಿರ್ ಹುಸೈನ್ ನಿಧನ : ಖಚಿತಪಡಿಸಿದ ಕುಟುಂಬ

- Advertisement -
- Advertisement -

ತಬಲಾ ಮಾಂತ್ರಿಕ ಝಾಕಿರ್ ಹುಸೈನ್ (73) ಅವರು ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.

ಝಾಕಿರ್ ಹುಸೈನ್ ಸಾವಿನ ಕುರಿತು ನಿನ್ನೆಯೇ (ಡಿ.15) ಸುದ್ದಿ ಹೊರಬಿದ್ದಿತ್ತು. ಆದರೆ, ಅದನ್ನು ಅಲ್ಲಗಳೆದಿದ್ದ ಅವರ ಕುಟುಂಬ. ಝಾಕಿರ್ ಇನ್ನೂ ತೀವ್ರ ನಿಗಾ ಘಟಕ (ಐಸಿಯು)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿತ್ತು. ಆದರೆ, ಇಂದು (ಡಿ.16) ಅವರು ಮೃತಪಟ್ಟಿರುವುದನ್ನು ಕುಟುಂಬಸ್ಥರು ಖಚಿತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಗ್ರ್ಯಾಮಿ ಪ್ರಶಸ್ತಿ ಪುರಸ್ಕತರಾದ ಝಾಕಿರ್ ಹುಸೈನ್ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಝಾಕಿರ್ ಹುಸೈನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ ಅನಿಸಾ ಖುರೇಷಿ ಮತ್ತು ಆಕೆಯ ಕುಟುಂಬ, ಇಸಾಬೆಲ್ಲಾ ಖುರೇಷಿ ಮತ್ತು ಆಕೆಯ ಕುಟುಂಬ, ಸಹೋದರರಾದ ತೌಫಿಕ್ ಮತ್ತು ಫಝಲ್ ಖುರೇಷಿ ಹಾಗೂ ಸಹೋದರಿ ಖುರ್ಷಿದ್ ಔಲಿಯಾ ಅವರನ್ನು ಅಗಲಿದ್ದಾರೆ.

ಮುಂಬೈನ ಮಾಹಿಮ್‌ನಲ್ಲಿ ಪ್ರಸಿದ್ಧ ತಬಲಾ ಮಾಸ್ಟರ್ ಉಸ್ತಾದ್ ಅಲ್ಲಾರಾಖಾ ಅವರ ಮಗನಾಗಿ ಮಾರ್ಚ್ 9, 1951 ರಂದು ಝಾಕಿರ್ ಹುಸೈನ್ ಜನಿಸಿದರು. ಅವರು ಖ್ಯಾತ ಸಂಗೀತ ಸಂಯೋಜಕ ರವಿಶಂಕರ್ ಅವರ ದೀರ್ಘಕಾಲದ ಜೊತೆಗಾರರಾಗಿದ್ದರು. ಹುಸೈನ್ ಅವರಿಗೆ ಚಿಕ್ಕ ವಯಸ್ಸಿನಲ್ಲೇ ತಬಲಾ ನುಡಿಸುವ ಒಲವಿತ್ತು.

ತನ್ನ 3ನೇ ವಯಸ್ಸಿನಲ್ಲಿ ತಂದೆಯಿಂದ ಮೃದಂಗ (ಶಾಸ್ತ್ರೀಯ ತಾಳವಾದ್ಯ) ನುಡಿಸಲು ಕಲಿತ ಝಾಕಿರ್ ಹುಸೈನ್, 12ನೇ ವಯಸ್ಸಿನಲ್ಲಿ ಸಂಗೀತ ಕಚೇರಿಗಳಲ್ಲಿ ಪ್ರದರ್ಶನ ನೀಡಲು ಪ್ರಾರಂಭಿಸಿದರು.

ಝಾಕಿರ್ ಹುಸೈನ್ ಅವರು ರವಿಶಂಕರ್, ಅಲಿ ಅಕ್ಬರ್ ಖಾನ್ ಮತ್ತು ಶಿವಕುಮಾರ್ ಶರ್ಮಾ ಸೇರಿದಂತೆ ಭಾರತದ ಎಲ್ಲಾ ಸಂಗೀತ ದಂತಕಥೆ ಕಲಾವಿದರೊಂದಿಗೆ ಪ್ರದರ್ಶನ ನೀಡಿದ್ದಾರೆ.

ದಿ ಬೀಟಲ್ಸ್, ಯೋ-ಯೋ ಮಾ, ಚಾರ್ಲ್ಸ್ ಲಿಯೋಡ್, ಬೆಲಾ ಫ್ಲೆಕ್, ಎಡ್ಗರ್ ಮೆಯೆರ್, ಮಿಕ್ಕಿ ಹಾರ್ಟ್, ಜಾರ್ಜ್ ಹ್ಯಾರಿಸನ್ ಮತ್ತು ಜಾನ್ ಮೆಕ್‌ಲಾಫ್ಲಿನ್‌ರಂತಹ ಕಲಾವಿದರೊಂದಿಗೆ ಪಾಶ್ಚಿಮಾತ್ಯ ಸಂಗೀತದಲ್ಲಿ ಅವರ ಅದ್ಭುತ ಸಾಧನೆಯು ಭಾರತೀಯ ಶಾಸ್ತ್ರೀಯ ಸಂಗೀತವನ್ನು ಜಾಗತಿಕ ಭೂಪಟದಲ್ಲಿ ಇರಿಸಿತು ಮತ್ತು ಝಾಕಿರ್ ಅವರಿಗೆ ಜಾಗತಿಕ ಸಾಂಸ್ಕೃತಿಕ ರಾಯಭಾರಿಯ ಸ್ಥಾನವನ್ನು ತಂದುಕೊಟ್ಟಿತು.

ಸಂಗೀತಕ್ಕೆ ಝಾಕಿರ್ ಹುಸೈನ್ ಅವರ ಕೊಡುಗೆಯನ್ನು ‘ಅನನ್ಯ ಪರಿವರ್ತಿತ’ವೆಂದು(uniquely transformative) ಎಂದು ಪರಿಗಣಿಸಲಾಗಿದೆ. ಅವರ ‘ಲಯದ ಅನನ್ಯ ಪಾಂಡಿತ್ಯ’ವು ಗಡಿಗಳನ್ನು ಮುಕ್ತವಾಗಿ ದಾಟಿ ಸಂಗೀತದ ವಿವಿಧ ಪ್ರಕಾರಗಳ ನಡುವೆ ಅಧಿಕೃತ ಸಂಪರ್ಕ ಸಾಧಿಸಲು ಅವಕಾಶ ಮಾಡಿಕೊಟ್ಟಿತು.

ಝಾಕಿರ್ ಹುಸೈನ್ ಜಾರ್ಜ್ ಹ್ಯಾರಿಸನ್, ಜೋ ಹೆಂಡರ್ಸನ್, ವ್ಯಾನ್ ಮಾರಿಸನ್, ಏರ್ಟೊ ಮೊರೈರಾ, ಫರೋಹ್ ಸ್ಯಾಂಡರ್ಸ್, ಬಿಲ್ಲಿ ಕೋಬ್ಯಾಮ್, ಅಲೋಂಜೊ ಕಿಂಗ್, ಮಾರ್ಕ್ ಮೋರಿಸ್, ರೆನ್ನಿ ಹ್ಯಾರಿಸ್ ಮತ್ತು ಕೊಡೋ ಡ್ರಮ್ಮರ್‌ಗಳೊಂದಿಗೆ ಕೆಲಸ ಮಾಡಿದ್ದಾರೆ.

ಝಾಕಿರ್ ಹುಸೈನ್ ಪೌರಾಣಿಕ ಗಿಟಾರ್ ವಾದಕ ಜಾನ್ ಮೆಕ್ಲಾಫ್ಲಿನ್, ಪಿಟೀಲು ವಾದಕ ಎಲ್. ಶಂಕರ್ ಮತ್ತು ತಾಳವಾದ್ಯ ವಾದಕ ಟಿ.ಹೆಚ್ ಅವರ ಸಹಯೋಗದೊಂದಿಗೆ 1970ರ ದಶಕದಲ್ಲಿ ‘ವಿಕ್ಕು’ ವಿನಾಯಕರಾಮ್ ಜತೆಗೂಡಿ ಶಕ್ತಿ ಫ್ಯೂಶನ್ ಗ್ರೂಪ್ ರಚಿಸಿದರು. ಇದು ಭಾರತದ ಶಾಸ್ತ್ರೀಯ ಸಂಗೀತವನ್ನು ಜಾಝ್‌ನೊಂದಿಗೆ ಬೆಸೆಯಿತು. ಸಮಕಾಲೀನ ಸಂಗೀತ ಕ್ಷೇತ್ರದಲ್ಲಿ ಅಳಿಸಲಾಗದ ಹೊಸ ಮಾದರಿಯ ಸಂಗೀತ ಪ್ರಕಾರವನ್ನು ಸೃಷ್ಟಿಸಿ ತನ್ನದೇ ಛಾಪು ಮೂಡಿಸಿತು.

ಜಾರ್ಜ್ ಹ್ಯಾರಿಸನ್, ರವಿ ಶಂಕರ್ ಮತ್ತು ವ್ಯಾನ್ ಮಾರಿಸನ್ ಅವರಂತಹ ಹೆಸರಾಂತ ಕಲಾವಿದರೊಂದಿಗೆ ಝಾಕಿರ್ ಹುಸೈನ್ ಕೆಲಸ ಮಾಡಿದ್ದರು.  ಗ್ರೇಟ್‌ಫುಲ್ ಡೆಡ್ ಅಂಡ್ ಅರ್ಥ್, ವಿಂಡ್ ಅಂಡ್ ಫೈರ್‌ನ ಆಲ್ಬಂಗಳಲ್ಲಿ ಸಹ ಪ್ರದರ್ಶನ ನೀಡಿದ್ದರು. 1991ರಲ್ಲಿ ಮಿಕ್ಕಿ ಹಾರ್ಟ್ ಅವರೊಂದಿಗೆ ರಚಿಸಲಾದ ಅವರ ಆಲ್ಬಂ ಪ್ಲಾನೆಟ್ ಡ್ರಮ್, ಅತ್ಯುತ್ತಮ ವಿಶ್ವ ಸಂಗೀತ ಆಲ್ಬಮ್‌ಗಾಗಿ ಮೊದಲ ಬಾರಿಗೆ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಝಾಕಿರ್ ಹುಸೈನ್ ಅವರ ಸಂಗೀತ ಲೋಕದ ಸಾಧನೆಯನ್ನು ಗುರುತಿಸಿ ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಝಾಕಿರ್ ಅವರು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ಸಂಗೀತ ನಾಟಕ ಅಕಾಡೆಮಿ ಫೆಲೋಶಿಪ್‌ನ ಜೀವಮಾನದ ಗೌರವ ಪ್ರಶಸ್ತಿಯನ್ನೂ ಪಡೆದಿದ್ದಾರೆ.

2024 ರಲ್ಲಿ ನಡೆದ 66 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಸೇರಿದಂತೆ ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಝಾಕಿರ್ ಹುಸೈನ್ ಗೆದ್ದಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಸಂಗೀತಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದರು.

ಇದನ್ನೂ ಓದಿ : ಉತ್ತರ ಪ್ರದೇಶ: ಭೂ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ನಕಲಿ ನೋಟಿಸ್ ಕಳುಹಿಸಿದ ಅಪರಿಚಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...