Homeಅಂತರಾಷ್ಟ್ರೀಯತಬ್ಲೀಘಿ ಜಮಾತ್ ಕ್ಷಮೆಯಾಚಿಸಿದರೆ ಭಾರತವನ್ನು ತೊರೆಯಬಹುದು: ಕೇಂದ್ರ

ತಬ್ಲೀಘಿ ಜಮಾತ್ ಕ್ಷಮೆಯಾಚಿಸಿದರೆ ಭಾರತವನ್ನು ತೊರೆಯಬಹುದು: ಕೇಂದ್ರ

ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕಾಗಿ ಅವರನ್ನು ಕಪ್ಪುಪಟ್ಟಿಗೆ ಸೇರಿಸುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ 34 ವಿದೇಶಿ ಸಂದರ್ಶಕರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಾರ್ಚ್‌ನಲ್ಲಿ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆರೋಪ ಎದುರಿಸುತ್ತಿರುವ ವಿದೇಶಿಯರು ಕ್ಷಮೆಯಾಚಿಸಿದ ನಂತರ ಭಾರತವನ್ನು ತೊರೆಯಬಹುದು ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕಾಗಿ ಅವರನ್ನು ಕಪ್ಪುಪಟ್ಟಿಗೆ ಸೇರಿಸುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ 34 ವಿದೇಶಿ ಸಂದರ್ಶಕರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ಉನ್ನತ ನ್ಯಾಯಾಲಯದ ನ್ಯಾಯಪೀಠಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ತಬ್ಲೀಘಿ ಜಮಾತ್ ಸದಸ್ಯರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳು ತಮ್ಮ ದೇಶಗಳಿಗೆ ಮರಳುವುದನ್ನು ತಡೆಯುವುದಿಲ್ಲ, ಆದರೆ ಅಂತಹ ಆದೇಶವನ್ನು ವಿಚಾರಣಾ ನ್ಯಾಯಾಲಯವು ಅಂಗೀಕರಿಸಬೇಕು ಎಂದು ಹೇಳಿದರು.

ಸಂಬಂಧಪಟ್ಟ ಕ್ರಿಮಿನಲ್ ಪ್ರಕರಣದಲ್ಲಿ ಸಂಬಂಧಪಟ್ಟ ಅರ್ಜಿದಾರರು ಕ್ಷಮೆಯಾಚಿಸಿದರೆ, ಕ್ರಿಮಿನಲ್ ಪ್ರಕರಣ ಬಾಕಿ ಇರುವಾಗ ಭಾರತವನ್ನು ತೊರೆಯಲು ಅವರಿಗೆ ಅನುಮತಿ ನೀಡಬಹುದು ಎಂದು ಉನ್ನತ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

34 ಅರ್ಜಿದಾರರಲ್ಲಿ 10 ಮಂದಿ ತಮ್ಮ ವಿರುದ್ಧದ ಕ್ರಿಮಿನಲ್ ಆರೋಪಗಳನ್ನು ಪ್ರಶ್ನಿಸುವ ಬದಲು ಮನವಿಯನ್ನು ಮಾಡಿಕೊಳ್ಳುವ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಮೆಹ್ತಾ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅರ್ಜಿದಾರರ ವಿರುದ್ಧದ ಲುಕ್‌ ಔಟ್ ನೋಟಿಸ್‌ಗಳನ್ನು ಹಿಂಪಡೆಯಲಾಗಿದೆ ಎಂದು ಅವರು ಹೇಳಿದರು.

ವಿವಿಧ ವಿಚಾರಣಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ವಿದೇಶಿಯರ ವಿರುದ್ಧದ ಪ್ರಕರಣಗಳನ್ನು ಸಾಕೆಟ್ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಎಂಟು ವಾರಗಳಲ್ಲಿ ವಿಲೇವಾರಿ ಮಾಡಬೇಕೆಂದು ಉನ್ನತ ನ್ಯಾಯಾಲಯ ಆದೇಶಿಸಿದೆ.

ಜುಲೈನಲ್ಲಿ ದೆಹಲಿಯ ನ್ಯಾಯಾಲಯವು ಈ ಕಾರ್ಯಕ್ರಮಕ್ಕೆ ಹಾಜರಾದ 82 ಬಾಂಗ್ಲಾದೇಶಿಗಳಿಗೆ ಜಾಮೀನು ನೀಡಿತ್ತು. ಮತ್ತೊಂದು ಸ್ಥಳೀಯ ನ್ಯಾಯಾಲಯವು ದಂಡ ಪಾವತಿಸಿದ ನಂತರ ಅರವತ್ತೆರಡು ಮಲೇಷಿಯನ್ನರು ಮತ್ತು 11 ಸೌದಿ ಅರೇಬಿಯನ್ನರನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರವು ಜೂನ್‌ನಲ್ಲಿ 2,500 ಕ್ಕೂ ಹೆಚ್ಚು ತಬ್ಲೀಘಿ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸಿ, 10 ವರ್ಷಗಳ ಕಾಲ ದೇಶಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿತ್ತು.

ಮಾರ್ಚ್ 25 ರಂದು ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಆರಂಭಿಕ ವಾರಗಳಲ್ಲಿ ದೇಶಾದ್ಯಂತ  ಕೊರೊನಾ ವೈರಸ್ ಸೋಂಕು ಹರಡಿದ್ದಕ್ಕೆ ತಬ್ಲಿಘಿ ಜಮಾತ್ ಸಭೆಯನ್ನು ದೂಷಿಸಲಾಗಿತ್ತು.

ಈ ಸಭೆಯಲ್ಲಿ ಅನೇಕ ವಿದೇಶಿಯರು ಭಾಗವಹಿಸಿದ್ದರು. ತಬ್ಲೀಘಿ ಜಮಾತ್ ಸುನ್ನಿ ಮುಸ್ಲಿಂ ಪಂಥವಾಗಿದ್ದು, 80 ಕ್ಕೂ ಹೆಚ್ಚು ದೇಶಗಳಲ್ಲಿ ಅನುಯಾಯಿಗಳನ್ನು ಹೊಂದಿದೆ.


ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಬಾಂಡ್‌ ಹಗರಣ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಮನವಿ

0
ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪ್ರೇರಿತ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಶಂಕಿತ ಹಗರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು...