Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

0
ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ 'ಅಲ್ಪಸಂಖ್ಯಾತರು' ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ...