Homeಕರ್ನಾಟಕನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ಟ್ಯಾಬ್ಲೊ ಕುರಿತಂತೆ ಬಿಜೆಪಿ ನಾಯಕರ ಹೇಳಿಕೆಗಳು ತಾಳೆಯಾಗುತ್ತಿಲ್ಲ ಎಂದು ಹೋರಾಟಗಾರರು, ಪತ್ರಕರ್ತರು ಹೇಳಿದ್ದಾರೆ

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗುಳಿಯಲಿದ್ದು, ದೇಶದಾದ್ಯಂತ ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ರಾಜ್ಯದ ವಿರೋಧ ಪಕ್ಷಗಳು ಕೂಡಾ ಬಗ್ಗೆ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದೆ. ಆದರೆ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಕಾರ್ಕಾಳ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅವರು ಒಕ್ಕೂಟ ಸರ್ಕಾರದ ಕ್ರಮವನ್ನು ಸಮರ್ಥಿಸುತ್ತಿದ್ದಾರೆ.

ಈ ಮಧ್ಯೆ ಟ್ಯಾಬ್ಲೊ ಕುರಿತಂತೆ ನಳಿನ್ ಕುಮಾರ್ ಮತ್ತು ಸುನಿಲ್ ಕುಮಾರ್ ಅವರ ಹೇಳಿಕೆಗಳಿಗೆ ಯಾವುದೆ ಸಾಮ್ಯತೆಯಿಲ್ಲದೆ ಇರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪತ್ರಕರ್ತರು, ಹೋರಾಟಗಾರರು ಸೇರಿದಂತೆ ಹಲವಾರು ಜನರು ಗುರುತಿಸಿದ್ದು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊವನ್ನು ಒಕ್ಕೂಟ ಸರ್ಕಾರ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, “ಪ್ರತಿ ವರ್ಷ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ 12 ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಅಂದರೆ 3 ವರ್ಷಕ್ಕೊಮ್ಮೆ ಪ್ರತಿ ರಾಜ್ಯಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ” ಎಂದು ಹೇಳಿದ್ದರು.

ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಟ್ಯಾಬ್ಲೊ ಸತತವಾಗಿ 13ನೇ ಬಾರಿಗೆ ಆಯ್ಕೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ಅವರು ತಮ್ಮ ಟ್ವೀ‌ಟ್‌ನಲ್ಲಿ, “ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ಆದರೆ ಸಚಿವ ಸುನಿಲ್ ಕುಮಾರ್ ಅವರು, 3 ವರ್ಷಕ್ಕೊಮ್ಮೆ ಪ್ರತಿ ರಾಜ್ಯಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ ಎಂದು ಹೇಳಿದ್ದಾರೆ. ಅವರ ಹೇಳಿಕೆ ಸುಳ್ಳು ಎಂದು ಹೇಳಿರುವ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಅವರು, “ಸಚಿವ ಸುನಿಲ್‌ ಕುಮಾರ್ ಅವರು ನಾರಾಯಣ ಗುರುಗಳ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿದ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ವಿದ್ರೋಹವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಸತತ ಐದು ವರ್ಷಗಳ ಕಾಲ ಕರ್ನಾಟಕದ ಸ್ತಬ್ದಚಿತ್ರಗಳು ಗಣರಾಜ್ಯೋತ್ಸವದ ಪರೇಡ್ ನಲ್ಲಿ ಭಾಗವಹಿಸಿರುವುದನ್ನು ಸುನೀಲ್ ಕುಮಾರ್ ಮರೆತುಬಿಟ್ಟಂತೆ ಕಾಣುತ್ತಿದೆ” ಎಂದು ಹೇಳಿದ್ದಾರೆ.

“ನಾರಾಯಣ ಗುರುಗಳ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ತಂಡ ಸಚಿವರು ಹೇಳಿರುವ ನಿಯಮವನ್ನು ಯಾಕೆ ಉಲ್ಲೇಖಿಸಿಲ್ಲ? ಯಾಕೆ ಅವರು ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಬದಲಾಗಿ ಶಂಕರಾಚಾರ್ಯರ ಸ್ತಬ್ದಚಿತ್ರವನ್ನು ಸೂಚಿಸಿದ್ದರು?” ಎಂದು ದಿನೇಶ್‌ ಅಮಿನ್ ಕೇಳಿದ್ದಾರೆ.

“ಸುನೀಲ್ ಕುಮಾರ್ ಒಬ್ಬ ಜವಾಬ್ದಾರಿಯುತ ಸಚಿವರಾಗಿದ್ದು. ಅವರು ಇಲ್ಲದ ನಿಯಮಗಳನ್ನು ಸ್ವಯಂ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ‌ ಸಹೋದ್ಯೋಗಿ ಸುನೀಲ್ ಕುಮಾರ್ ಹೇಳಿರುವುದು ಸುಳ್ಳು ಎಂದು ಸಾಬೀತುಪಡಿಸಿದ್ದಾರೆ. ಕರ್ನಾಟಕದ ಸ್ತಬ್ದಚಿತ್ರ ಸತತ 13 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗಿರುವುದನ್ನು ಮುಖ್ಯಮಂತ್ರಿಗಳು ಹೆಮ್ಮೆ-ಸಂತೋಷದಿಂದ ಹೇಳಿಕೊಂಡಿದ್ದಾರೆ. ಸುನೀಲ್ ಕುಮಾರ್ ಮೂರು ವರ್ಷಗಳ ನಿಯಮವನ್ನು ಎಲ್ಲಿಂದ‌ ಅಗೆದು ತೆಗೆದಿದ್ದಾರೆ ಎನ್ನುವುದನ್ನು ತಿಳಿಸಬೇಕು” ಎಂದು ದಿನೇಶ್ ಅಮಿನ್ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಅವರು ನಾರಾಯಣ ಗುರುಗಳ ಟ್ಯಾಬ್ಲೊವನ್ನು ಒಕ್ಕೂಟ ಸರ್ಕಾರ ನಿರಾಕರಿಸಿರುವುದ ಬಗ್ಗೆ ಬೇರೆಯೆ ಹೇಳಿಕೆಯನ್ನು ನೀಡಿದ್ದಾರೆ. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಜಾಪ್ರಭುತ್ವ ದಿನದಂದು ದೆಹಲಿಯ ರಾಜಪಥದಲ್ಲಿ ಚಲಿಸುವ ಟ್ಯಾಬ್ಲೋಗಳಿಗೆ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಒಕ್ಕೂಟ ಸರ್ಕಾರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನಃ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಒಕ್ಕೂಟ ಸರಕಾರ ರದ್ದು ಮಾಡಿಲ್ಲ” ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರವು ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ಮಾಡಿರುವುದರ ಬಗ್ಗೆ ಬಿಜೆಪಿಯ ಮೂವರು ನಾಯಕರ ಹೇಳಿಕೆಯ ನಡುವೆ ಯಾವುದೆ ತಾಳೆಯಾಗುತ್ತಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಸಚಿವ ಸುನಿಲ್ ಕುಮಾರ್‌ ಅವರನ್ನು ಸಂಪರ್ಕಿಸಿತ್ತಾದರೂ ಅವರು ಕರೆಯನ್ನು ಸ್ವೀಕರಿಸಿಲ್ಲ. ಅವರ ಹೇಳಿಕೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ:ಟ್ಯಾಬ್ಲೊಗೆ ತಮಿಳುನಾಡು ಪ್ರಸ್ತಾಪಿಸಿದ ವ್ಯಕ್ತಿಗಳು ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ: ಒಕ್ಕೂಟ ಸರ್ಕಾರದ ತಜ್ಞರ ಸಮಿತಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ನಾರಾಯಣ ಗುರುಗಳ ಟ್ಯಾಬ್ಲೋ ಗಣರಾಜ್ಯೋತ್ಸವ ಪರೇಡ್ ಗೆ ಮೋದಿ ಸರಕಾರದಿಂದ ತಿರಸ್ಕಾರ ಗೊಂಡಿರುವ ವಿಚಾರದಲ್ಲಿ ಸಚಿವ ಸುನಿಲ್ ಕುಮಾರ್ ಸುಳ್ಳು ಹೇಳಿ ಬಹಿರಂಗವಾಗಿ ಸಿಕ್ಕಾಕಿಕೊಂಡಿದ್ದಾರೆ. ಅವರು ಈ ಕುರಿತು ನಾರಾಯಣ ಗುರುಗಳ ಸಮಸ್ತ ಅನುಯಾಯಿಗಳು, ಹಾಗೂ ಕೇರಳದ ಎಡರಂಗ ಸರಕಾರದ ಮುಂದೆ ಕ್ಷಮೆ ಯಾಚಿಸಬೇಕು. ಅದಕ್ಕಿಂತ ಮುಂಚೆ ಅವರು ತಕ್ಷಣ ಒಂದು ಬೈಠಕ್ ಸೇರಿ ನಾರಾಯಣ ಗುರುಗಳ ಟ್ಯಾಬ್ಲೋ ವಿಚಾರಕ್ಕೆ ಸಂಬಂಧಿಸಿ ಕೇರಳದ ಕಮ್ಯುನಿಸ್ಟ್ ಸರಕಾರದ ವಿರುದ್ದ ಒಂದು ಪರಿಣಾಮಕಾರಿ ಆರೋಪ ಸಿದ್ದಪಡಿಸಬೇಕು. ನಳಿನ್ ಕುಮಾರ್ ಒಂದು ಆರೋಪ, ಸುನಿಲ್ ಕುಮಾರ್ ಇನ್ನೊಂದು ಆರೋಪ, ಬೊಮ್ಮಾಯಿಯವರದ್ದು ಮತ್ತೊಂದು ಹೇಳಿಕೆ…ಒಂದಕ್ಕೂ ತಾಳಮೇಳ ಇಲ್ಲ. ಒಳ್ಳೆ ಜೋಕರ್‌ಗಳಂತಾಗಿದ್ದಾರೆ” ಎಂದು ಹೇಳಿದ್ದಾರೆ.

ಈ ಮಧ್ಯೆ, ತಮಿಳುನಾಡಿನ ಟ್ಯಾಬ್ಲೊಗೂ ಒಕ್ಕೂಟ ಸರ್ಕಾರ ಅನುಮತಿ ನಿರಾಕರಿಸಿದೆ. ತಮಿಳುನಾಡು ಸರ್ಕಾರವು ಸ್ವಾತಂತ್ಯ್ರ ಹೋರಾಟಗಾರರಾದ ಸುಬ್ರಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌, ರಾಣಿ ವೇಲು ನಾಚಿಯಾರ್, ಮರುತು ಪಾಂಡಿಯರ್‌ ಸೇರಿದಂತೆ ಹಲವು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರರ ಟ್ಯಾಬ್ಲೊವನ್ನು ಸಿದ್ದಪಡಿಸಿತ್ತು. ಆದರೆ ಒಕ್ಕೂಟ ಸರ್ಕಾರವು ಇವರು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ಹೇಳಿ ನಿರಾಕರಿಸಿದೆ ಎಂದು ವರದಿಯಾಗಿದೆ. ಜೊತೆಗೆ ಸ್ವಾತಂತ್ಯ್ರ ಹೋರಾಟಗಾರ ವಿ.ಒ. ಚಿದಂಬರನಾರ್‌ ಅವರನ್ನು ‘ವ್ಯಾಪಾರಿ’ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...