Homeಮುಖಪುಟತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

ತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

- Advertisement -
- Advertisement -

“ನಾನು ಗರ್ಭಿಣಿಯಾಗಿದ್ದೇನೆ ಎಂದು ಅವನು ಸತ್ತ ಎರಡು ದಿನಗಳ ನಂತರ ನಾನು ತಿಳಿದುಕೊಂಡೆ. ಆದರೆ ಕೆಲವು ವಾರಗಳ ನಂತರ ನಾನು ನನ್ನ ಮಗುವನ್ನು ಸಹ ಕಳೆದುಕೊಂಡೆ. ವೈದ್ಯರು ಹೇಳುವಂತೆ ನನ್ನ ದೇಹವು ಒತ್ತಡವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ನಾವು ನಿಜವಾಗಿಯೂ ಮಗುವನ್ನು ಬಯಸಿದ್ದೆವು” ಈ ರೀತಿ ಅಳುತ್ತಾ ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದು ತಬ್ರೆಜ್ ಅನ್ಸಾರಿ ಅವರ ಪತ್ನಿ ಶಹಿಸ್ತ..

ಏಪ್ರಿಲ್ 27 ರಂದು ತಬ್ರೆಜ್ ಅವರೊಂದಿಗೆ ಶಹಿಸ್ತ ಅವರು ಮದುವೆಯಾದ ದಿನ. ಅವರದು ಪ್ರೇಮ ವಿವಾಹವಾಗಿದ್ದು, ಅವರು ಸಾಯುವ ಎರಡು ತಿಂಗಳ ಮೊದಲು ಏಪ್ರಿಲ್ 27 ರಂದು ಅವರ ವಿವಾಹ ನಡೆದಿತ್ತು. ಮದುವೆಯ ನಂತರ ಹೊಸಬದುಕು ಕಟ್ಟಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಜೂನ್ 17 ರಂದು ತಬ್ರೆಜ್‌ನನ್ನು ಕಂಬಕ್ಕೆ ಕಟ್ಟಿ, ಕಳ್ಳತನದ ಆರೋಪ ಹೊರಿಸಲಾಯಿತು. ಜೈ ಶ್ರೀ ರಾಮ್ ಮತ್ತು ಜೈ ಹನುಮಾನ್ ಘೋಷಣೆ ಕೂಗುವಂತೆ ಒತ್ತಾಯಿಸಲಾಯಿತು ಮತ್ತು ಕನಿಷ್ಠ ಏಳು ಗಂಟೆಗಳ ಕಾಲ ನಿಷ್ಕರುಣೆಯಿಂದ ಹೊಡೆಯಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಹೊಡೆದ ಆರೋಪಿಗಳ ಬದಲಾಗಿ ಕಳ್ಳತನದ ಆರೋಪ ಹೊರಿಸಿ ತಬ್ರೆಜ್ ನನ್ನು ಬಂಧಿಸಿದ್ದರು. ತದನಂತರ ಆತನನ್ನು ಆಸ್ಪತ್ರೆಗೆ ಸೇರಿಸಿತ್ತಾದರೂ ವೈದ್ಯರು ಸಮರ್ಪಕ ಚಿಕಿತ್ಸೆ ನೀಡಿರಲಿಲ್ಲ. ತಲೆಗೆ ತೀವ್ರ ಪೆಟ್ಟಾಗಿದ್ದರೂ ವೈದ್ಯರು ಅದನ್ನು ಗುರುತಿಸಿರಲಿಲ್ಲ ಮತ್ತು ಸಿಟಿ ಸ್ಕ್ಯಾನ್ ಸಹ ಮಾಡಿರಲಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವೈದ್ಯರೊಬ್ಬರು ತಿಳಿಸಿದ್ದರು. ಆದಾದ ಐದು ದಿನಗಳ ನಂತರ ಜೂನ್ 22 ರಂದು ತಬ್ರೆಜ್ ಸಾವನಪ್ಪಿದ್ದರು.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವ್ಯಾಪಕ ಖಂಡನೆಗೊಳಗಾದ ಈ ಪ್ರಕರಣವೀಗ ದಾರಿ ತಪ್ಪುತ್ತಿದೆ ಎಂದು ತಬ್ರೆಜ್ ಪತ್ನಿ ಶಹಿಸ್ತ ವಕೀಲರು ದೂರಿದ್ದಾರೆ.

ನಾನೀಗ ಪೊಲೀಸ್ ತನಿಖೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದಾನೆ. “ದಯವಿಟ್ಟು ನನಗೆ ನ್ಯಾಯ ಪಡೆಯಲು ಸಹಾಯ ಮಾಡಿ. ದಯವಿಟ್ಟು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಿ. ದಯವಿಟ್ಟು ನನ್ನ ಶಾಂತಿಯನ್ನು ಮರಳಿ ಪಡೆಯಲು ಸಹಾಯ ಮಾಡಿ.”ಎಂದು ಶಹಿಸ್ತ ಅವಲತ್ತುಕೊಂಡಿದ್ದಾಳೆ. ಕಾರಣವೆಂದರೆ ಜುಲೈ 29 ರಂದು ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಆಕೆಯ ಗಂಡನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕೊಲೆ ಆರೋಪವನ್ನು ಕೈಬಿಟ್ಟಿದೆ. ಇದು ಅವಳನ್ನು ಚಿಂತಾಕ್ರಾಂತಳನ್ನಾಗಿಸಿದೆ.

ಇದೇ ಸಂದರ್ಭದಲ್ಲಿ ಪೊಲೀಸ್ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಕೆಯ ವಕೀಲ ಅಲ್ತಾಫ್ ಹುಸೇನ್ ಆಗಸ್ಟ್ 31 ರಂದು ನ್ಯಾಯಾಲಯದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 341 (ತಪ್ಪಾದ ಸಂಯಮ), 342 (ತಪ್ಪಾಗಿ ಬಂಧನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 325 (ತೀವ್ರ ನೋವನ್ನುಂಟುಮಾಡುವುದು), 304 (ಅಪರಾಧಿ ನರಹತ್ಯೆ ಕೊಲೆಗೆ ಸಮನಾಗಿಲ್ಲ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಇವುಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳನ್ನಾಗಿ ಪ್ರಕಾಶ್ ಮಂಡಲ್ ಅಲಿಯಾಸ್ ಪಪ್ಪು ಮಂಡಲ್, ಕಮಲ್ ಮಹತೋ, ಸುನಮೋ ಪ್ರಧಾನ್, ಪ್ರೇಮ್‌ಚಂದ್ ಮಹಾಲಿ, ಸುಮಂತ್ ಮಹತೋ, ಮದನ್ ನಾಯಕ್, ಚಾಮು ನಾಯಕ್, ಮಹೇಶ್ ಮಹಾಲಿ, ಕುಶಾಲ್ ಮಹಾಲಿ, ಸತ್ಯನಾರಾಯಣ್ ನಾಯಕ್ ಮತ್ತು ಭೀಮ್ ಸೇನ್ ಮಂಡಲ್ ಎಂದು ಗುರುತಿಸಲಾಗಿದೆ.

ಕೊಲೆ ಆರೋಪವನ್ನು ತೆಗೆದುಹಾಕಲು ಏನು ಕಾರಣ?
“ತಬ್ರೆಜ್ ಹಠಾತ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವರದಿಗಳನ್ನು ನಾವು ಕೇಳುತ್ತಿದ್ದೇವೆ. ಆದರೆ ಅವರ ತಲೆಗೆ ದೊಡ್ಡ ಗಾಯವಾಗಿತ್ತು, ಹೊಡೆತದಿಂದ ಅವನ ತಲೆಬುರುಡೆ ಬಿರುಕು ಬಿಟ್ಟಿತ್ತು. ಸಾವಿಗೆ ಕಾರಣ ಕೇವಲ ಹೃದಯ ಸ್ತಂಭನ ಎಂದು ಅವರು ಹೇಗೆ ಹೇಳಬಹುದು?” ಎಂದು ವಕೀಲರಾದ ಅಲ್ತಾಫ್ ಪ್ರಶ್ನಿಸಿದ್ದಾರೆ. ಪೊಲೀಸರು ತಮ್ಮದೇ ಆದ ಬೇಜವಾಬ್ದಾರಿಯನ್ನು ಮರೆಮಾಡಲು ಮತ್ತು ಆರೋಪಿಗಳನ್ನು ರಕ್ಷಿಸಲು ‘ಹಠಾತ್ ಹೃದಯ ಸ್ತಂಭನ’ ವನ್ನು ಬಳಸುತ್ತಿದ್ದಾರೆ ಎಂದು ಶಹಿಸ್ತ ಅವರ ವಕೀಲ ಅಲ್ತಾಫ್ ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣದ ತನಿಖಾ ಅಧಿಕಾರಿ ಆರ್. ನಾರಾಯಣ್ ಅವರು “ಸಾವಿಗೆ ಕಾರಣವೆಂದರೆ ಹಠಾತ್ ಹೃದಯ ಸ್ತಂಭನ. “ನಾವು ಇದನ್ನು ದೃಢೀಕರಿಸಿದ ಇಬ್ಬರು ವೈದ್ಯರ ಅಭಿಪ್ರಾಯವನ್ನು ಪಡೆದಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...