Homeಕರ್ನಾಟಕಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

- Advertisement -
- Advertisement -

“ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರೆ, ರಾಜ್ಯ ಕಾಂಗ್ರೆಸ್‌, “ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ?” ಎಂದು ಪ್ರಶ್ನಿಸಿದೆ.

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ. ಈ ಕುರಿತು ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಯಾವುದೇ ಸಂಘಟನೆಯಾದರೂ ನಿಷೇಧಿಸಬೇಕು. ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಯಾರು ಸಮಾಜದಲ್ಲಿ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ. ದ್ವೇಷದ ರಾಜಕಾರಣ ಮಾಡಿದರೆ ಕ್ರಮ ಜರುಗಿಸಲಿ” ಎಂದು ಒತ್ತಾಯಿಸಿದ್ದಾರೆ.

“ನುಡಿದಂತೆ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದೇವೆ” ಎಂಬ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಪಿಎಫ್ಐ ಜೊತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ ಆರೆಸ್ಸೆಸ್‌ ವಿರುದ್ಧ ಬಿಜೆಪಿ ಯಾವಾಗ ಕ್ರಮಕೈಗೊಳುತ್ತದೆ? ಎಲ್ಲ ರೀತಿಯ ಕೋಮುವಾದ ಮತ್ತು ದ್ವೇಷ ಸಮಾಜದ ರಚನೆ ಹಾನಿಕಾರಕ. ಅದನ್ನು ನಿಗ್ರಹಿಸುವ ಕೆಲಸ ಆಗಬೇಕು’ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಪಿಎಫ್‌ಐ ಹಾಗೂ ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ ಎಸ್‌ಡಿಪಿಐ ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ? ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ? ಪಿಎಫ್‌ಐ ಜೊತೆ ಇದ್ದ ಬಿಜೆಪಿಯ ಹೊಂದಾಣಿಕೆ ಎಂತದ್ದು? ಈ ಆಯಾಮದಲ್ಲಿ ಎನ್‌ಐಎ ತನಿಖೆ ನಡೆಸಬೇಕಿದೆ” ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿರಿ: PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

“ಪಿಎಫ್‌ಐ ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು. ಪಿಎಫ್‌ಐ ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು. ಆ ಬಗ್ಗೆಯೂ ತನಿಖೆಯಾಗಬೇಕು. ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು” ಎಂದಿರುವ ಕಾಂಗ್ರೆಸ್ ಸತ್ಯಜಿತ್‌ ಸುರತ್ಕಲ್ ಅವರ ವಿಡಿಯೊ ತುಣುಕನ್ನು ಹಂಚಿಕೊಂಡಿದೆ.

“ಕಾಂಗ್ರೆಸ್‌ ಸೋಲಿಸಬೇಕಾದರೆ ಎಸ್‌ಡಿಪಿಐ ಬಲವಾಗಬೇಕು ಎಂದು ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಪಕ್ಷ ಬಯಸುತ್ತಿದೆ. ಎಸ್‌ಡಿಪಿಐಗೆ ಹಣವನ್ನು ನೀಡುತ್ತಿದೆ. ಕಾಂಗ್ರೆಸ್‌ನಿಂದ ಮುಸ್ಲಿಮರನ್ನು ದೂರ ತಳ್ಳಬೇಕು ಎಂದು ಎಸ್‌ಡಿಪಿಐಯನ್ನು ಬೆಳೆಸುತ್ತಿದ್ದಾರೆ” ಎಂದು ಸತ್ಯಜಿತ್‌ ಅವರು ಇಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....