Homeಮುಖಪುಟಆರೇ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳು ವಾಪಸ್‌: ಉದ್ಧವ್‌ ಠಾಕ್ರೆ

ಆರೇ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳು ವಾಪಸ್‌: ಉದ್ಧವ್‌ ಠಾಕ್ರೆ

- Advertisement -
- Advertisement -

ಆರೇ ಮೆಟ್ರೋ ಕಾರ್ ಶೆಡ್ ವಿರುದ್ಧದ ಆಂದೋಲನದ ಸಂದರ್ಭದಲ್ಲಿ ಅನೇಕ ಪರಿಸರವಾದಿಗಳ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ನಾನು ಆದೇಶಿಸಿದ್ದೇನೆ “ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಜೊತೆಗೆ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ಮುಂಬೈನ ಆರೇ ಅರಣ್ಯ ಪ್ರದೇಶದಲ್ಲಿ ಮೆಟ್ರೊ ಕಾರ್‌ ಶೆಡ್‌ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಅವರು ಆದೇಶಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಮುಂಬೈ ಮೆಟ್ರೋ ಕಾಮಗಾರಿ ಎಂದಿನಂತೆ ಮುಂದುವರೆಯುತ್ತದೆ ಆದರೆ ಕಾರ್ ಶೆಡ್ ನಿರ್ಮಾಣವನ್ನು ಸಂಬಂಧಪಟ್ಟ ಇಲಾಖೆಯಿಂದ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರೇ ಅರಣ್ಯದಲ್ಲಿ ಒಂದು ಮರದ ಎಲೆಯನ್ನೂ ಸಹ ಕತ್ತರಿಸಲು ಬಿಡುವುದಿಲ್ಲ: ಉದ್ಧವ್ ಠಾಕ್ರೆ

ಆರೇ ಅರಣ್ಯವು ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿದೆ ಮತ್ತು ಐದು ಲಕ್ಷ ಮರಗಳನ್ನು ಹೊಂದಿದೆ. ಈ ಪ್ರದೇಶದಲ್ಲಿ ಮೆಟ್ರೋ ಕಾರ್ ಶೆಡ್ ನಿರ್ಮಿಸಲು ಸುಮಾರು 2100 ಮರಗಳನ್ನು ಎಂಎಂಆರ್‌ಸಿಎಲ್ ಕತ್ತರಿಸಿತ್ತು. ನಂತರ ಯಾವುದೇ ಮರಗಳನ್ನು ಕಡಿಯಬಾರದೆಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಕಾರ್ ಶೆಡ್ ಕಾಮಗಾರಿಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರಲಿಲ್ಲ.

ಆದರೆ ಮಾಜಿ ಸಿಎಂ ಫಡ್ನವಿಸ್‌ ಉದ್ಧವ್‌ ಠಾಕ್ರೆಯವರ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಇದರ ದುಷ್ಪರಿಣಾಮವನ್ನು ಎದುರಿಸಬೇಕಾಗುವುದು ಸಾಮಾನ್ಯ ಮುಂಬೈ ನಿವಾಸಿಗಳು ಎಂದು ಅವರು ತಿಳಿಸಿದ್ದಾರೆ.

ಉದ್ಧವ್‌ ಠಾಕ್ರೆಯವರ ಈ ನಿರ್ಧಾರವನ್ನು ಬಹಳಷ್ಟು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದಾರೆ. ಗುರುವಾರ ಉದ್ಧವ್‌ ಠಾಕ್ರೆಯವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿಯೂ ಸಹ ಬಹಳಷ್ಟು ಆರೇ ಕಾರ್ಯಕರ್ತರು ಭಾಗವಹಿಸಿದ್ದರು. ಜೊತೆಗೆ ಸೇವ್‌ ಆರೆ ಎಂಬ ನಾಮಫಲಕ ಮತ್ತು ಬ್ಯಾನರ್‌ ಪ್ರದರ್ಶಿಸುವ ಮೂಲಕ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಯನ್ನು ನೆನಪಿಸುವ ಕೆಲಸ ಮಾಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...