Homeಮುಖಪುಟರಜೆ ಹಾಕಿ, ಕುಸ್ತಿಪಟುಗಳ ಹೋರಾಟದಲ್ಲಿ ಪಾಲ್ಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

ರಜೆ ಹಾಕಿ, ಕುಸ್ತಿಪಟುಗಳ ಹೋರಾಟದಲ್ಲಿ ಪಾಲ್ಗೊಳ್ಳಿ: ಅರವಿಂದ್ ಕೇಜ್ರಿವಾಲ್ ಕರೆ

- Advertisement -
- Advertisement -

ನೀವು ಯಾವುದೇ ಪಕ್ಷದ ಸದಸ್ಯರಾಗಿರಿ ಅಥವಾ ಯಾವುದೇ ಪಕ್ಷಕ್ಕೆ ಸೇರದಿದ್ದರೂ ರಜೆ ಹಾಕಿ, ಕುಸ್ತಿಪಟುಗಳ ಹೋರಾಟದಲ್ಲಿ ಪಾಲ್ಗೊಳ್ಳಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟದಲ್ಲಿ ಪಾಲ್ಗೊಂಡ ಅರವಿಂದ್ ಕೇಜ್ರಿವಾಲ್ ಈ ಹೋರಾಟಕ್ಕೆ ಜನರು ಐಕ್ಯಮತ್ಯ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ನಮ್ಮ ದೇಶವನ್ನು ಪ್ರೀತಿಸುವವರು, ಅವರು ಕಾಂಗ್ರೆಸ್, ಎಎಪಿ ಅಥವಾ ಬಿಜೆಪಿಯವರೇ ಆಗಿರಲಿ ಮತ್ತು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲದಿದ್ದರೂ ಸಹ, ಕುಸ್ತಿಪಟುಗಳಿಗೆ ಬೆಂಬಲ ನೀಡಲು ಇಲ್ಲಿಗೆ ಬರಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಅವರು ತಮಗಾಗಿ ಹೋರಾಡುತ್ತಿಲ್ಲ, ಇಡೀ ಕ್ರೀಡಾ ಭ್ರಾತೃತ್ವಕ್ಕಾಗಿ ಹೋರಾಡುತ್ತಿದ್ದಾರೆ. ಆರೋಪಿತ ವ್ಯಕ್ತಿಯ ಮೇಲೆ ಎಫ್‌ಐಆರ್ ಹಾಕಲು ಏಳು ದಿನ ತೆಗೆದುಕೊಂಡಿತು ಮತ್ತು ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಬೇಕಾಯಿತು ಎಂದರೆ ಆ ವ್ಯಕ್ತಿ ಎಷ್ಟು ಶಕ್ತಿಶಾಲಿ ಇರಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.

ಹಲವಾರು ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ತಮ್ಮ ಧರಣಿ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಭಾರತದ ಅಗ್ರ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಕುಸ್ತಿ ಫೆಡರೇಷನ್‌ಗೆ ತಾನು ರಾಜೀನಾಮೆ ನೀಡುವುದಿಲ್ಲ ಎಂದು ಬ್ರಿಜ್ ಭೂಷಣ್ ಪಟ್ಟು ಹಿಡಿದಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಪ್ರಕರಣವನ್ನು ಆಲಿಸಿದ ಕೆಲವು ಗಂಟೆಗಳ ನಂತರ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. ಸುಮಾರು ನಾಲ್ಕು ತಿಂಗಳ ನಂತರ ಕುಸ್ತಿಪಟುಗಳು ಆರೋಪಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ.

“ಇದು ವಿಜಯದತ್ತ ನಮ್ಮ ಮೊದಲ ಹೆಜ್ಜೆಯಾಗಿದೆ, ಆದರೆ ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಮಲಿಕ್ ಹೇಳಿದ್ದಾರೆ. “ನಾವು ಸುದೀರ್ಘ ಯುದ್ಧಕ್ಕಾಗಿ ಇಲ್ಲಿದ್ದೇವೆ. ಆಂತರಿಕ ಸಮಾಲೋಚನೆಯ ನಂತರ ನಾವು ನಮ್ಮ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ; ಬ್ರಿಜ್ ಭೂಷಣ್‌ನನ್ನು ಬಂಧಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ; ಅಗ್ರ ಕುಸ್ತಿಪಟುಗಳ ಪಟ್ಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...