Homeಕರ್ನಾಟಕಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಹಿಂದಿಗೆ ಮಾತ್ರ ಆದ್ಯತೆ ನೀಡಿ ಉಳಿದ ಭಾಷೆಗಳಿಗೆ ಆದ್ಯತೆ ನೀಡದಿರುವುದು ತಪ್ಪು, ಇಲ್ಲಿ ಎಲ್ಲಾ ರಾಜ್ಯದ ಜನರು ವಾಸಿಸುತ್ತಾರೆ. ಅವರ ಭಾಷೆಯನ್ನೂ ಬಳಸೋಣ ಅಲ್ಲವೇ ಎಂದು ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

- Advertisement -
- Advertisement -

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಾರಿಗೆ ಶುರುವಾಗಿನಿಂದ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಮೆಟ್ರೋ ನಿಲ್ದಾಣಗಳಲ್ಲಿ ನಾಮಫಲಕಗಳ ಬದಲಾವಣೆ ವಿಚಾರವಂತೂ ಪ್ರತಿ ಬಿಎಂಆರ್‌ಸಿಎಲ್ ಸಭೆಯಲ್ಲೂ ಕೇಳಿಬರುವಂತಹದ್ದು. ಇಂತಹ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ ಎಂದು ತಾಕೀತು ಮಾಡಿದ್ದಾರೆ.

ಮೆಟ್ರೋ ರೈಲುಗಳಲ್ಲಿ ಮತ್ತು ಮೆಟ್ರೋ ನಿಲ್ದಾಣಗಳ ನಾಮಫಲಕಗಳಲ್ಲಿ ಹಿಂದಿ ಭಾಷೆಯನ್ನು ತೆಗೆದುಹಾಕಿ ಕೇವಲ ಕನ್ನಡ ಮತ್ತು ಇಂಗ್ಲೀಷ್ ಭಾಷೆ ಬಳಸುವಂತೆ ಕೆಡಿಎ ಒತ್ತಾಯಿಸಿದೆ. ರಾಜ್ಯ ಸರ್ಕಾರ ತ್ರಿಭಾಷಾ ನೀತಿಗೆ ಬದ್ಧವಾಗಿಲ್ಲದೇ ಇರುವಾಗ 3 ಭಾಷೆಯ ಫಲಕಗಳೇಕೆ ಎಂದು ಟಿ.ಎಸ್.ನಾಗಾಭರಣ ಪ್ರಶ್ನಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2 ಆಯ್ಕೆಗಳನ್ನು ಬಿಎಂಆರ್‌ಸಿಎಲ್ ಮುಂದಿಟ್ಟಿದೆ. ಒಂದು ಕೇವಲ ಕನ್ನಡ ಮತ್ತು ಇಂಗ್ಲೀಷ್ ಫಲಕಗಳನ್ನು ಬಳಸುವುದು. ಎರಡನೇಯದು ಹಿಂದಿ ಬೇಕೇಬೇಕು ಎಂದರೆ ದೇಶದ ಎಲ್ಲಾ 22 ಅಧಿಕೃತ ಭಾಷೆಗಳನ್ನು ನಾಮಫಲಕಗಳ ಬಳಸಬೇಕು ಎಂದಿದೆ.

ಹಿಂದಿಗೆ ಮಾತ್ರ ಆದ್ಯತೆ ನೀಡಿ ಉಳಿದ ಭಾಷೆಗಳಿಗೆ ಆದ್ಯತೆ ನೀಡದಿರುವುದು ತಪ್ಪು, ಇಲ್ಲಿ ಎಲ್ಲಾ ರಾಜ್ಯದ ಜನರು ವಾಸಿಸುತ್ತಾರೆ. ಅವರ ಭಾಷೆಯನ್ನೂ ಬಳಸೋಣ ಅಲ್ಲವೇ ಎಂದು ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

ಇನ್ನು ಮೆಟ್ರೋದಲ್ಲಿ ವಿಶೇಷವಾಗಿ ಸ್ವಚ್ಛತೆ ಮತ್ತು ಭದ್ರತಾ ವಿಭಾಗಗಳಲ್ಲಿ ಕನ್ನಡಿಗರನ್ನು ಮಾತ್ರ ಉದ್ಯೋಗಕ್ಕೆ ತೆಗೆದುಕೊಳ್ಳಬೇಕು. ನಮ್ಮ ಜನರಿಗೂ ಕೆಲಸದ ಅವಶ್ಯಕತೆ ಹೆಚ್ಚಾಗಿದೆ ಎಂದು ಕೆಡಿಎ ಸಭೆಗೆ ತಿಳಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸ್ಸುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ನವೆಂಬರ್ ಒಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಹೇಳಿದ್ದಾರೆ.

ಆದರೆ ಇಂತಹ ಭರವಸೆ ಹಲವು ಬಾರಿ ಬಂದಿದ್ದರೂ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ದೇಶಾದ್ಯಂತ ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತವಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಬಿಎಂಆರ್‌ಸಿಎಲ್ ಹೇಗೆ ಕಾರ್ಯನಿವರ್ಹಿಸುತ್ತದೆ ಎಂದು ಕಾದುನೋಡಬೇಕು.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...