Homeಮುಖಪುಟತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

- Advertisement -
- Advertisement -

ಶುಕ್ರವಾರ ನವದೆಹಲಿಯಲ್ಲಿ ನಡೆದ ತಾಲಿಬಾನ್ ಪತ್ರಿಕಾಗೋಷ್ಠಿಗೆ ಪತ್ರಕರ್ತೆಯರಿಗೆ ನಿಷೇಧ ಹೇರಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರತಿಕ್ರಿಯಿಸಿ, ‘ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರೊಂದಿಗಿನ ಪತ್ರಿಕಾ ಸಂವಾದಕ್ಕೂ, ನಮಗೂ ಯಾವುದೇ ಪಾತ್ರ ಅಥವಾ ಒಳಗೊಳ್ಳುವಿಕೆ ಇಲ್ಲ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಸ್ಪಷ್ಟೀಕರಣ ನೀಡಿದೆ.

ಮುತ್ತಕಿ ಮತ್ತು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಡುವಿನ ಮಾತುಕತೆಯ ನಂತರ ನವದೆಹಲಿಯ ಅಫ್ಘಾನ್ ರಾಯಭಾರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಯಾವುದೇ ಮಹಿಳಾ ಪತ್ರಕರ್ತರನ್ನು ಆಹ್ವಾನಿಸಲಾಗಿಲ್ಲ ಎಂದು ಬಹಿರಂಗವಾದ ನಂತರ ಟೀಕೆ ಆರಂಭವಾಯಿತು.

2021 ರಲ್ಲಿ ತಾಲಿಬಾನ್ ಗುಂಪು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಮುತ್ತಕಿ ಅವರ ಭಾರತ ಭೇಟಿ ಮೊದಲನೆಯದು. ಭಾರತ ಮತ್ತು ತಾಲಿಬಾನ್ ವಿದೇಶಾಂಗ ಸಚಿವರ ನಡುವಿನ ಮಾತುಕತೆಗಳು ವ್ಯಾಪಾರ, ಮಾನವೀಯ ನೆರವು ಮತ್ತು ಭದ್ರತಾ ಸಹಕಾರ ಸೇರಿದಂತೆ ಪ್ರಮುಖ ದ್ವಿಪಕ್ಷೀಯ ವಿಷಯಗಳನ್ನು ಒಳಗೊಂಡಿವೆ. ಆದರೆ, ಪತ್ರಿಕಾ ಸಂವಾದವು ಭಾರಿ ವಿವಾದಕ್ಕೆ ಕಾರಣವಾಗಿದೆ. ಸುದ್ದಿಗೋಷ್ಠಿಯಲ್ಲಿ ಫೋಟೋ ಜರ್ನಲಿಸ್ಟ್‌ಗಳು ಮತ್ತು ಪುರುಷ ವರದಿಗಾರರು ಮಾತ್ರ ಹಾಜರಿದ್ದರು. ಇದು ತಾಲಿಬಾನ್‌ನ ಲಿಂಗ ಪಕ್ಷಪಾತವನ್ನು ಎತ್ತಿ ತೋರಿಸಿತು.

ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ಸೇರಿಸಿಕೊಳ್ಳಲು ಭಾರತದ ಸ್ಪಷ್ಟ ಸಲಹೆಗಳ ಹೊರತಾಗಿಯೂ, ತಾಲಿಬಾನ್ ನಿಯೋಗವು ಮಾಧ್ಯಮ ಆಹ್ವಾನಿತರನ್ನು ನಿರ್ಧರಿಸಿತು. ಭಾರತದ ಒಳಗೊಳ್ಳುವಿಕೆಯ ಕರೆಗಳನ್ನು ನಿರ್ಲಕ್ಷಿಸಿ ಪುರುಷ ಪತ್ರಕರ್ತರನ್ನು ಆಯ್ಕೆ ಮಾಡಿತು ಎಂದು ಮೂಲಗಳು ಹೇಳುತ್ತವೆ.

ತಾಲಿಬಾನ್ ವಿದೇಶಾಂಗ ಸಚಿವರ ಪ್ರತಿಕ್ರಿಯೆ

ಅಫಘಾನ್ ಮಹಿಳೆಯರ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ, ಅಮೀರ್ ಖಾನ್ ಮುತ್ತಕಿ ಸಮರ್ಥನೆಗಿಳಿದರು. “ಪ್ರತಿಯೊಂದು ದೇಶಕ್ಕೂ ತನ್ನದೇ ಆದ ಪದ್ಧತಿಗಳು, ಕಾನೂನುಗಳು ಮತ್ತು ತತ್ವಗಳಿವೆ” ಎಂದು ಅವರು ಹೇಳಿದರು. ‘ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಿಗೆ ಗೌರವ ಇರಬೇಕು, ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿ ಸುಧಾರಿಸಿದೆ. ನಾವು ಅಧಿಕಾರಕ್ಕೆ ಮರಳುವ ಹಿಂದಿನ ಅವಧಿಗೆ ಹೋಲಿಸಿದರೆ ಸಾವುನೋವುಗಳಲ್ಲಿ ಇಳಿಕೆ ಕಂಡುಬಂದಿದೆ’ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಾಗಿನಿಂದ, ಆರನೇ ತರಗತಿಯ ನಂತರ ಹುಡುಗಿಯರ ಶಿಕ್ಷಣದ ಮೇಲಿನ ನಿಷೇಧ, ಹೆಚ್ಚಿನ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರ ಮೇಲಿನ ನಿರ್ಬಂಧಗಳು ಮತ್ತು ಕಟ್ಟುನಿಟ್ಟಾದ ವಸ್ತ್ರ ಸಂಹಿತೆಗಳ ಜಾರಿ ಸೇರಿದಂತೆ ಮಹಿಳೆಯರ ಹಕ್ಕುಗಳ ಮೇಲೆ ಈ ಗುಂಪು ತೀವ್ರ ನಿರ್ಬಂಧಗಳನ್ನು ವಿಧಿಸಿದೆ. ವಿಶ್ವಸಂಸ್ಥೆಯು ಈ ಕ್ರಮಗಳನ್ನು ಖಂಡಿಸಿದ್ದು, ಅಫ್ಘಾನ್ ಮಹಿಳೆಯರು ಮತ್ತು ಹುಡುಗಿಯರ ಮೇಲಿನ ವ್ಯಾಪಕ, ವ್ಯವಸ್ಥಿತ ದಬ್ಬಾಳಿಕೆಯನ್ನು ಎತ್ತಿ ತೋರಿಸಿದೆ.

ದೆಹಲಿ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಡುವುದು ತಾಲಿಬಾನ್ ಮಹಿಳೆಯರನ್ನು ನಡೆಸಿಕೊಳ್ಳುವ ಬಗ್ಗೆ ಅಂತರರಾಷ್ಟ್ರೀಯ ಸಮುದಾಯದ ಕಳವಳಗಳ ಮೇಲೆ ಮತ್ತೊಮ್ಮೆ ಬೆಳಕು ಚೆಲ್ಲಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...