Homeಅಂತರಾಷ್ಟ್ರೀಯಕಾಬೂಲ್‌: ಗುರುದ್ವಾರಕ್ಕೆ ಭೇಟಿ ನೀಡಿ ಸಿಖ್ಖರು, ಹಿಂದೂಗಳೊಂದಿಗೆ ಮಾತನಾಡಿದ ತಾಲಿಬಾನಿಗಳು

ಕಾಬೂಲ್‌: ಗುರುದ್ವಾರಕ್ಕೆ ಭೇಟಿ ನೀಡಿ ಸಿಖ್ಖರು, ಹಿಂದೂಗಳೊಂದಿಗೆ ಮಾತನಾಡಿದ ತಾಲಿಬಾನಿಗಳು

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಸಿಖ್ಖರು ಮತ್ತು ಹಿಂದೂಗಳಿಗೆ ಭಯ ಅಥವಾ ಆತಂಕ ಇಲ್ಲ ಎಂದು  ಕಾಬೂಲ್ ಗುರುದ್ವಾರದ ಮುಖ್ಯಸ್ಥರು ಭರವಸೆ ನೀಡುತ್ತಿರುವ ವಿಡಿಯೊವನ್ನು ಅಕಾಲಿದಳ ಮತ್ತು ತಾಲಿಬಾನ್ ವಕ್ತಾರರು ಬುಧವಾರ ತಡರಾತ್ರಿ ಹಂಚಿಕೊಂಡಿದ್ದಾರೆ.

ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಅಧ್ಯಕ್ಷ ಅಕಾಲಿದಳದ ಮಂಜಿಂದರ್ ಸಿಂಗ್ ಸಿರ್ಸಾ ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ. ಕಾಬೂಲ್ ಗುರುದ್ವಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು,  ತಾಲಿಬಾನ್ ನಾಯಕರು “ಹಿಂದುಗಳು ಮತ್ತು ಸಿಖ್ಖರನ್ನು ಭೇಟಿಯಾಗಿದ್ದಾರೆ. ಅವರ ಸುರಕ್ಷತೆಯ ಭರವಸೆ ನೀಡಿದ್ದಾರೆ ಎಂದಿದ್ದಾರೆ.

76 ಸೆಕೆಂಡುಗಳ ಈ ವಿಡಿಯೊದಲ್ಲಿ ಹಲವಾರು ತಾಲಿಬಾನ್ ಸದಸ್ಯರು ಎಂದು ನಂಬಲಾಗಿರುವ ವ್ಯಕ್ತಿಗಳು ಗುರುದ್ವಾರಕ್ಕೆ ಭೇಟಿ ನೀಡಿ ಒಳಗೆ ಆಶ್ರಯ ಪಡೆದಿರುವ ಸಿಖ್ಖರ ಜೊತೆಗೆ ಮಾತನಾಡುತ್ತಿದ್ದಾರೆ. ವಿಡಿಯೊದಲ್ಲಿ ಗುರುದ್ವಾರ ಸಮಿತಿಯ ಅಧ್ಯಕ್ಷರ (ಪಾಷ್ಟೋ ಭಾಷೆಯಲ್ಲಿ) ಹೇಳಿಕೆಯೂ ಇದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ‘ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಏನು ಮಾಡಿದ್ದೀರಿ?’ – ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಅಲ್ ಜಜೀರಾ ಸುದ್ದಿ ವರದಿಯ ಭಾಗವಾಗಿರುವಂತೆ ಕಾಣುವ ಈ ವಿಡಿಯೊವನ್ನು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನದ ರಾಜಕೀಯ ಕಚೇರಿಯ ವಕ್ತಾರ ಎಂ.ನಯೀಮ್ ಕೂಡ ಟ್ವೀಟ್ ಮಾಡಿದ್ದಾರೆ.

“ಕಾಬೂಲ್‌ನಲ್ಲಿ ಸಿಖ್ಖರು ಮತ್ತು ಭಾರತೀಯರ ಜೀವನ: ಅವರ ದೇವಾಲಯಗಳ ಮುಖ್ಯಸ್ಥರು ಹೇಳುತ್ತಾರೆ ನಾವು ಸುರಕ್ಷಿತವಾಗಿದ್ದೇವೆ. ನಾವು ಯಾವುದೇ ಭಯ ಅಥವಾ ಆತಂಕವನ್ನು ಅನುಭವಿಸುತ್ತಿಲ್ಲ. ಮೊದಲು ಇಲ್ಲಿನ ಜನರು ಅವರ ಜೀವನ ಮತ್ತು ಹಣದ ಬಗ್ಗೆ ಭಯ ಮತ್ತು ಆತಂಕದಲ್ಲಿದ್ದರು. ಈಗ ಯಾವುದೇ ಸಮಸ್ಯೆಗಳಿಲ್ಲ. ನಮಗೆ ಭರವಸೆ ಇದೆ” ಎಂದು ಗುರುದ್ವಾರದ ಮುಖ್ಯಸ್ಥರು ಹೇಳಿದ್ದಾರೆ ಎಂದು ಎಂ.ನಯೀಮ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ, ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಹೇಳಿದ್ದರು.

20 ವರ್ಷಗಳ ನಂತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದಿದೆ. ಮೇ ತಿಂಗಳಲ್ಲಿ ಯುನೈಟೆಡ್ ಸ್ಟೇಟ್ಸ್ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಂಡಾಗಿನಿಂದ ಆರಂಭವಾದ ಮಾನವೀಯ ಬಿಕ್ಕಟ್ಟು, ಅಲ್ಲಿನ ಜನರಲ್ಲಿ ಭಯ ಮತ್ತು ಆತಂಕವನ್ನು ಹೆಚ್ಚಿಸಿದೆ.


ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...