Homeಅಂತರಾಷ್ಟ್ರೀಯಅಫ್ಘಾನ್: ಪತ್ರಕರ್ತರನ್ನು ಹುಡುಕುವಾಗ ಸಂಬಂಧಿಯನ್ನು ಕೊಂದ ತಾಲಿಬಾನಿಗಳು

ಅಫ್ಘಾನ್: ಪತ್ರಕರ್ತರನ್ನು ಹುಡುಕುವಾಗ ಸಂಬಂಧಿಯನ್ನು ಕೊಂದ ತಾಲಿಬಾನಿಗಳು

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಜರ್ಮನ್ ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿ ಡಾಯ್ಚು ವೆಲ್ಲೆಯ (Deutsche Welle) ಪತ್ರಕರ್ತರನ್ನು ಹುಡುಕುವಾಗ ಅವರ ಸಂಬಂಧಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸುದ್ದಿವಾಹಿನಿ ತಿಳಿಸಿದೆ.

ಈಗ ಜರ್ಮನಿಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗಾಗಿ ತಾಲಿಬಾನ್ ಉಗ್ರರು ಮನೆ-ಮನೆಗೆ ತೆರಳಿ ಶೋಧ ನಡೆಸುತ್ತಿದ್ದಾರೆ ಎಂದು ಡಿಡಬ್ಲ್ಯೂ ಗುರುವಾರ ಹೇಳಿದೆ. ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಎರಡನೇ ಸಂಬಂಧಿ ಗಂಭೀರವಾಗಿ ಗಾಯಗೊಂಡು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ಆದರೆ, ಮೃತರ ವಿವರಗಳನ್ನು ನೀಡಿಲ್ಲ.

ಡಿಡಬ್ಲ್ಯೂ ಡೈರೆಕ್ಟರ್ ಜನರಲ್ ಪೀಟರ್ ಲಿಂಬರ್ಗ್ ಈ ಹತ್ಯೆಯನ್ನು ಖಂಡಿಸಿದ್ದು, ಮಾಧ್ಯಮದ ಸಿಬ್ಬಂದಿ ಮತ್ತು ಅಫ್ಘಾನಿಸ್ತಾನದಲ್ಲಿರುವ ಅವರ ಕುಟುಂಬಗಳಿಗಿರುವ ಅಪಾಯವನ್ನು ಈ ಘಟನೆ ತೋರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

“ನಿನ್ನೆ ತಾಲಿಬಾನ್ ನಮ್ಮ ಸಂಪಾದಕರೊಬ್ಬರ ಹತ್ತಿರದ ಸಂಬಂಧಿಯನ್ನು ಹತ್ಯೆ ಮಾಡಿರುವುದು ದುರಂತ. ಇದು ಅಫ್ಘಾನಿಸ್ತಾನದಲ್ಲಿರುವ ನಮ್ಮ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬಗಳು ತೀವ್ರ ಅಪಾಯಕ್ಕೆ ಸಿಲುಕಿರುವುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಪೀಟರ್ ಲಿಂಬರ್ಗ್ ಹೇಳಿದ್ದಾರೆ.

ತಾಲಿಬಾನ್ ಕನಿಷ್ಠ ಮೂರು ಇತರ ಡಿಡಬ್ಲ್ಯೂ ಪತ್ರಕರ್ತರ ಮನೆಗಳ ಮೇಲೆ ದಾಳಿ ಮಾಡಿದೆ ಎಂದು ಜರ್ಮನ್ ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿ ತಿಳಿಸಿದೆ. “ತಾಲಿಬಾನ್ ಈಗಾಗಲೇ ಪತ್ರಕರ್ತರಿಗಾಗಿ ಕಾಬೂಲ್ ಮತ್ತು  ಹೊರ ಭಾಗಗಳಲ್ಲಿ ಹುಡುಕಾಟಗಳನ್ನು ನಡೆಸುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ತಿಳಿಸಿದೆ.

Deutsche Welle ಮತ್ತು ಇತರ ಜರ್ಮನ್ ಮಾಧ್ಯಮ ಸಂಸ್ಥೆಗಳು ತಮ್ಮ ಅಫ್ಘಾನ್ ಸಿಬ್ಬಂದಿಗೆ ಸಹಾಯ ಮಾಡಲು ತ್ವರಿತ ಕ್ರಮ ಕೈಗೊಳ್ಳುವಂತೆ ಜರ್ಮನ್ ಸರ್ಕಾರಕ್ಕೆ ಮನವಿ ಮಾಡಿವೆ.


ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...