Homeಅಂತರಾಷ್ಟ್ರೀಯತಾಲಿಬಾನ್ ಆಳ್ವಿಕೆಯ ಅಫ್ಘಾನ್‌‌‌‌: ಬೀದಿ ಬದಿ ಆಹಾರ ಮಾರುತ್ತಿರುವ ಟಿವಿ ಪತ್ರಕರ್ತ!

ತಾಲಿಬಾನ್ ಆಳ್ವಿಕೆಯ ಅಫ್ಘಾನ್‌‌‌‌: ಬೀದಿ ಬದಿ ಆಹಾರ ಮಾರುತ್ತಿರುವ ಟಿವಿ ಪತ್ರಕರ್ತ!

- Advertisement -
- Advertisement -

ತಾಲಿಬಾನ್ ದೇಶದ ಮೇಲೆ ಹಿಡಿತ ಸಾಧಿಸಿದಾಗಿನಿಂದ ಅಫ್ಘಾನಿಸ್ತಾನವು ಸಾಕಷ್ಟು ಆರ್ಥಿಕ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಎದುರಿಸುತ್ತಿದೆ. ಈ ಹಿಂದಿನ ಹಮೀದ್ ಕರ್ಜಾಯ್ ಸರ್ಕಾರದೊಂದಿಗೆ ಕೆಲಸ ಮಾಡಿದ್ದ ಕಬೀರ್ ಹಕ್ಮಲ್ ಅವರ ಇತ್ತೀಚಿನ ಟ್ವಿಟರ್ ಪೋಸ್ಟ್, ದೇಶದಲ್ಲಿ ಪ್ರತಿಭಾವಂತ ವೃತ್ತಿಪರರು ಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂಬುದನ್ನು ನಿರೂಪಿಸಿದೆ.

ಟ್ವಿಟರ್‌ನಲ್ಲಿ ಹಕ್ಮಲ್ ಅವರು ಅಫ್ಘಾನ್ ಪತ್ರಕರ್ತ ಮೂಸಾ ಮೊಹಮ್ಮದಿ ಅವರ ಫೋಟೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ, ಮೊಹಮ್ಮದಿ ವರ್ಷಗಳ ಕಾಲ ಮಾಧ್ಯಮ ಕ್ಷೇತ್ರದ ಭಾಗವಾಗಿದ್ದರು. ಆದರೆ ಅಫ್ಘಾನಿಸ್ತಾನದ ಭೀಕರ ಆರ್ಥಿಕ ಪರಿಸ್ಥಿತಿಯಿಂದಾಗಿ ಅವರು ಈಗ ತಮ್ಮ ಜೀವನ ನಡೆಸಲು ಬೀದಿ ಬದಿಯಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೂಸಾ ಮೊಹಮ್ಮದಿ ಅವರು ವಿವಿಧ ಟಿವಿ ಚಾನೆಲ್‌ಗಳಲ್ಲಿ ಆಂಕರ್ ಮತ್ತು ವರದಿಗಾರರಾಗಿ ವರ್ಷಗಳ ಕಾಲ ಕೆಲಸ ಮಾಡಿದರು. ಈಗ ಅವರ ಕುಟುಂಬವನ್ನು ಪೋಷಿಸಲು ಯಾವುದೇ ಆದಾಯವಿಲ್ಲದ ಕಾರಣ ಅವರು ಬೀದಿ ಆಹಾರವನ್ನು ಮಾರಾಟ ಮಾಡುತ್ತಾರೆ. ಗಣರಾಜ್ಯದ ಪತನದ ನಂತರ ಆಫ್ಘನ್ನರು ಅಭೂತಪೂರ್ವ ಬಡತನವನ್ನು ಅನುಭವಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಮೊಹಮ್ಮದಿ ಅವರ ದುರಂತ ಕತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ರಾಷ್ಟ್ರೀಯ ರೇಡಿಯೋ ಮತ್ತು ದೂರದರ್ಶನದ ಮಹಾನಿರ್ದೇಶಕ ಅಹ್ಮದುಲ್ಲಾ ವಾಸಿಕ್ ಅವರ ಗಮನವನ್ನು ಸೆಳೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೊಹಮ್ಮದಿ ಅವರನ್ನು ತಮ್ಮ ಇಲಾಖೆಗೆ ನೇಮಿಸುವುದಾಗಿ ತಿಳಿಸಿದ್ದಾರೆ.

“ಮೂಸಾ ಮೊಹಮ್ಮದಿ ಅವರ ನಿರುದ್ಯೋಗದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಕಂಡುಬಂದಿದೆ. ರಾಷ್ಟ್ರೀಯ ರೇಡಿಯೋ ಮತ್ತು ದೂರದರ್ಶನದಲ್ಲಿ ಅವರನ್ನು ನೇಮಿಸುತ್ತೇವೆ ಎಂದು ರಾಷ್ಟ್ರೀಯ ರೇಡಿಯೋ ಮತ್ತು ದೂರದರ್ಶನದ ನಿರ್ದೇಶಕರಾಗಿ ನಾವು ಅವರಿಗೆ ಭರವಸೆ ನೀಡುತ್ತೇವೆ. ನಮಗೆ ಎಲ್ಲಾ ಆಫ್ಘನ್ ವೃತ್ತಿಪರರು ಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನ: ಉದ್ಯೋಗ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ 79% ದಷ್ಟು ಪತ್ರಕರ್ತರು

ಈ ಮಧ್ಯೆ, ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಂದಿನಿಂದ, ದೇಶವು ಮಾನವೀಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಪತ್ರಕರ್ತರು, ವಿಶೇಷವಾಗಿ ಮಹಿಳೆಯರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

2021 ರ ಕೊನೆಯ ನಾಲ್ಕು ತಿಂಗಳುಗಳಲ್ಲಿ ಅಫ್ಘಾನಿಸ್ತಾನದ ತಲಾ ಆದಾಯವು ಮೂರನೇ ಒಂದು ಭಾಗದಷ್ಟು ಕುಸಿದಿದ್ದು, ದೇಶದ ಆರ್ಥಿಕತೆ ಹಿನ್ನಡೆ ಭೀಕರವಾಗಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. “ವಿಶ್ವದ ಬಡ ದೇಶಗಳಲ್ಲಿ ಒಂದಾಗಿರುವ ದೇಶವೂ ಮತ್ತಷ್ಟು ಬಡವಾಗಿದೆ” ಎಂದು ಅಫ್ಘಾನಿಸ್ತಾನದ ವಿಶ್ವಬ್ಯಾಂಕ್‌ನ ಹಿರಿಯ ದೇಶದ ಅರ್ಥಶಾಸ್ತ್ರಜ್ಞ ಟೋಬಿಯಾಸ್ ಹಕ್ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...