Homeಮುಖಪುಟತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

- Advertisement -
- Advertisement -

ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಶ್ ಸಿದ್ದೀಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿಲ್ಲ. ಅವರ ಗುರುತನ್ನು ಪತ್ತೆ ಹಚ್ಚಿದ ಬಳಿಕ ತಾಲಿಬಾನಿಗಳು ಅವರನ್ನು “ಕ್ರೂರವಾಗಿ ಕೊಂದಿದ್ದಾರೆ” ಎಂದು ಅಮೆರಿಕದ ನಿಯತಕಾಲಿಕವೊಂದರಲ್ಲಿ ಗುರುವಾರ ಪ್ರಕಟವಾದ ವರದಿಯಲ್ಲಿ ಹೇಳಲಾಗಿದೆ.

38 ವರ್ಷದ ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ದಾನಿಶ್ ಸಿದ್ದೀಕಿ ಕಸ್ಟಮ್ಸ್ ಪೋಸ್ಟ್‌ ಬಳಿಯಿದ್ದಾಗ ತಾಲಿಬಾನಿಗಳ ದಾಳಿಯಿಂದ ಅವರ ತಂಡ ಬೇರ್ಪಟ್ಟಿತ್ತು. ಅಫ್ಘಾನ್‌‌‌‌ ವಿಶೇಷ ಪಡೆಯ ಕಮಾಂಡರ್ ಮತ್ತು ಇತರ ಸೈನಿಕರು ಸಿದ್ದೀಕಿ ಅವರಿಂದ ಬೇರ್ಪಟ್ಟು, ಅವರು ಇತರ ಮೂರು ಅಫ್ಘಾನ್ ಪಡೆಗಳೊಂದಿಗೆ ಉಳಿದಿದ್ದರು ಎಂದು ವಾಷಿಂಗ್ಟನ್ ಎಕ್ಸಾಮಿನರ್ ವರದಿ ಮಾಡಿದೆ.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ಈ ದಾಳಿಯ ಸಮಯದಲ್ಲಿ, ಸಿದ್ದೀಕಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅವರ ತಂಡವು ಸ್ಥಳೀಯ ಮಸೀದಿಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಆದರೆ, ಒಬ್ಬ ಪತ್ರಕರ್ತ ಮಸೀದಿಯಲ್ಲಿದ್ದನೆಂಬ ಸುದ್ದಿ ಹರಡುತ್ತಿದ್ದಂತೆ, ತಾಲಿಬಾನಿಗಳು ಮಸೀದಿ ಮೇಲೆ ದಾಳಿ ಮಾಡಿದ್ದರು.

ತಾಲಿಬಾನ್‌ಗಳು ಮಸೀದಿಯ ಮೇಲೆ ದಾಳಿ ನಡೆಸಿರುವುದು ಸಿದ್ದಿಕಿಯವರು ಅಲ್ಲಿ ಇದ್ದದ್ದರಿಂದ ಮಾತ್ರವೇ ಎಂದು ಸ್ಥಳೀಯ ತನಿಖೆಯು ವರದಿ ಬಹಿರಂಗ ಪಡಿಸಿದೆ.

“ತಾಲಿಬಾನಿಗಳು ಅವರನ್ನು ಸೆರೆಹಿಡಿದಾಗ ಸಿದ್ದಿಕಿ ಜೀವಂತವಾಗಿದ್ದರು. ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತನ್ನು ಪರಿಶೀಲಿಸಿದ ನಂತರ ಅವರನ್ನು ಮತ್ತು ಅವರ ಜೊತೆಗಿದ್ದವರನ್ನು ಕೊಲ್ಲಲಾಗಿದೆ. ಕಮಾಂಡರ್ ಮತ್ತು ಅವರ ತಂಡದ ಉಳಿದವರು ಸಿದ್ದಿಕಿ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ಸಾವನ್ನಪ್ಪಿದ್ದರು” ಎಂದು ಸ್ಥಳೀಯ ತನಿಖೆಯು ವರದಿ ಹೇಳಿದೆ.

“ವ್ಯಾಪಕವಾಗಿ ವೈರಲ್ ಆದ ಛಾಯಾಚಿತ್ರದಲ್ಲಿ ಸಿದ್ದಿಕಿ ಅವರ ಮುಖವನ್ನು ಗುರುತಿಸಬಹುದು. ಇದರ ಜೊತೆಗೆ ನಾನು ಉಳಿದ ಚಿತ್ರಗಳನ್ನು ಪರಿಶೀಲಿಸಿದ್ದೇನೆ ಮತ್ತು ಸಿದ್ದಿಕಿ ಅವರ ಮೃತದೇಹದ ವಿಡಿಯೊ ಕೂಡ ಪರಿಶೀಲಿಸಿದ್ದು, ತಾಲಿಬಾನಿಗಳು ಸಿದ್ದಿಕಿಯವರ ತಲೆಯ ಸುತ್ತ ಹೊಡೆದು ನಂತರ ಅವರ ದೇಹಕ್ಕೆ ಗುಂಡುಗಳಿಂದ ಹೊಡೆದಿದ್ದಾರೆ” ಎಂದು ಅಮೆರಿಕನ್ ಎಂಟರ್‌ಪ್ರೈಸ್ ಇನ್‌ಸ್ಟಿಟ್ಯೂಟ್‌ನ ಹಿರಿಯ ಬರಹಗಾರ ಮೈಕೆಲ್ ರೂಬಿನ್ ಬರೆದಿದ್ದಾರೆ.

ಸಿದ್ದಿಕಿ ಅವರನ್ನುಈ ರೀತಿಯಲ್ಲಿ ಕೊಲ್ಲುವ ತಾಲಿಬಾನ್ ನಿರ್ಧಾರ ಮತ್ತು ನಂತರ ಅವರ ಮೃತ ದೇಹವನ್ನು ವಿರೂಪಗೊಳಿಸಿರುವುದು, ಯುದ್ಧದ ನಿಯಮಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...