Homeಮುಖಪುಟಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

ಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

- Advertisement -
- Advertisement -

ನನಗೆ ಎಲ್ಲಾ ಧರ್ಮಗಳ ಬಗ್ಗೆ ಅಪಾರ ಗೌರವ ಇದೆ. ಯಾವುದೇ ಧರ್ಮವನ್ನು ಅಗೌರವಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಜಾತಿ ತಾರಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ. ಜನರಿಗೆ ತಾರತಮ್ಯ ಮಾಡುವ ಧಾರ್ಮಿಕ ಆಚರಣೆಗಳಿಗೆ ಮಾತ್ರ ತಾವು ವಿರೋಧಿಸಿರುವುದಾಗಿ ತಮಿಳುನಾಡಿನ ಸಚಿವ ಉದಯ್‌ನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಮುನ್ನಾನಿ ಪದಾಧಿಕಾರಿಗಳು ತಮ್ಮ ವಿರುದ್ಧ ಸಲ್ಲಿಸಿರುವ ರಿಟ್ ಅರ್ಜಿಯ ವಿರುದ್ಧ ಉದಯನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ಗೆ ಪ್ರತಿ ಅಫಿಡವಿಟ್ ಸಲ್ಲಿಸಿದ್ದಾರೆ.

ಈ ಸಂಬಂಧ ಉದಯನಿಧಿ ಸ್ಟಾಲಿನ್ ಪರವಾಗಿ ಹಿರಿಯ ವಕೀಲ ಪಿ ವಿಲ್ಸನ್ ನ್ಯಾಯಮೂರ್ತಿ ಅನಿತಾ ಸುಮಂತ್ ಅವರ ಪೀಠದ ಮುಂದೆ ಅಫಿಡವಿಟ್ ಸಲ್ಲಿಸಿದ್ದಾರೆ.

ತಮ್ಮ ಅಫಿಡವಿಟ್‌ನಲ್ಲಿ ಎಲ್ಲಾ ಜಾತಿಗಳ ಸಮಾನತೆ ಬಗ್ಗೆ ಉಪದೇಶಿಸುವುದು ಮತ್ತು ತಾರತಮ್ಯ ನಿರ್ಮೂಲನೆ ಬಗ್ಗೆ ಹೇಳುವುದು ನಿಯಮದ ಉಲ್ಲಂಘನೆಯಲ್ಲ. ನನಗೆ ಎಲ್ಲಾ ಧರ್ಮಗಳ ಬಗ್ಗೆ ಅಪಾರ ಗೌರವವಿದೆ ಮತ್ತು ಯಾವುದೇ ಧರ್ಮವನ್ನು ಅಗೌರವಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಅದೇ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಪನಂಬಿಕೆಗಳು ಮತ್ತು ತಾರತಮ್ಯದ ಬಗ್ಗೆ ಮಾತನಾಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ಧದ ಅರ್ಜಿಯು ಕ್ಷುಲ್ಲಕ ಮತ್ತು ರಾಜಕೀಯ ಪ್ರೇರಿತವಾಗಿದೆ, ಪ್ರಚಾರದ ಸಲುವಾಗಿ ಅರ್ಜಿ ಸಲ್ಲಿಸಲಾಗಿದೆ. ದ್ರಾವಿಡ ಸಿದ್ಧಾಂತಕ್ಕೆ ವಿರುದ್ಧವಾದ ಒಂದು ನಿರ್ದಿಷ್ಟ ಸಿದ್ಧಾಂತವು ರಾಜಕೀಯ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಇತ್ಯರ್ಥಗೊಳಿಸಲು ನ್ಯಾಯಾಲಯದ ಪ್ರಕ್ರಿಯೆಯನ್ನು ಬಳಸಲು ಪ್ರಯತ್ನಿಸುತ್ತಿದೆ. ದ್ರಾವಿಡ ಸಿದ್ಧಾಂತವು ಸ್ವಾಭಿಮಾನ, ಸಮಾನತೆ, ತರ್ಕಬದ್ಧ ಚಿಂತನೆ ಮತ್ತು ಸಹೋದರತ್ವದ ಬಗ್ಗೆ ಮಾತನಾಡುತ್ತದೆ. ವಿರೋಧಿಸುವ ಪಂಗಡವು ಜಾತಿಯ ಆಧಾರದ ಮೇಲೆ ವಿಭಜನೆಯ ಬಗ್ಗೆ ಮಾತನಾಡುತ್ತಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಯಾವುದೇ ವ್ಯಕ್ತಿಯು ನಿರ್ದಿಷ್ಟ ವಿಷಯದ ಬಗ್ಗೆ ದೃಷ್ಟಿಕೋನವನ್ನು ಹೊಂದಿದ್ದಾನೆ ಎಂಬ ಕಾರಣಕ್ಕಾಗಿ ಯಾವುದೇ ವ್ಯಕ್ತಿಯನ್ನು ಸಚಿವ ಸ್ಥಾನದಿಂದ ಅನರ್ಹಗೊಳಿಸಲಾಗುವುದಿಲ್ಲ. ಅದು ನಾಗರಿಕನ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತದೆ ಎಂದು ಉದಯನಿಧಿ ಒತ್ತಿ ಹೇಳಿದರು.

ಜಾತಿ ಶ್ರೇಣೀಕರಣ ಸೇರಿದಂತೆ ಅತಾರ್ಕಿಕ ನಂಬಿಕೆಗಳ ದುಷ್ಪರಿಣಾಮಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ನಾಯಕರು, ರಾಜಕಾರಣಿಗಳು ಮತ್ತು ಸಮಾಜ ಸುಧಾರಕರಷ್ಟೇ ಅಲ್ಲದೆ ಎಲ್ಲರ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಸನಾತನ ಧರ್ಮ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು ಎಂದು ಕಳೆದ ತಿಂಗಳು ಸ್ಟಾಲಿನ್ ಹೇಳಿದ್ದರು. ನಂತರ ತಮಿಳುನಾಡು ಸರ್ಕಾರದ ಸಚಿವರಾದ ಉದಯನಿಧಿ ಸ್ಟಾಲಿನ್, ಎ ರಾಜಾ ಮತ್ತು ಇತರ 12 ಮಂದಿಗೆ ಈ ಕುರಿತು ನೋಟಿಸ್ ಜಾರಿ ಮಾಡಲಾಗಿತ್ತು.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...