Homeಮುಖಪುಟಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ: ಪ್ರಧಾನಿ ಮೋದಿ

ಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ: ಪ್ರಧಾನಿ ಮೋದಿ

- Advertisement -
- Advertisement -

ಭಾರತವು ಭಯೋತ್ಪಾದನೆ ವಿಷಯದಲ್ಲಿ ಶೂನ್ಯ ಸಹಿಷ್ಣುತೆ ಹೊಂದಿದೆ. ಪರಮಾಣು ಬೆದರಿಕೆಗೆ ಬಗ್ಗುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ಮತ್ತು ಅದರ ನಂತರದ ಬೆಳವಣಿಗೆಗಳ ನಡುವೆ ಮೊದಲ ಬಾರಿಗೆ ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತವು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ವಿಷಯಗಳ ಕುರಿತು ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುತ್ತದೆ” ಎಂದಿದ್ದಾರೆ.

‘ಆಪರೇಷನ್ ಸಿಂಧೂರ’ವನ್ನು ಭಯೋತ್ಪಾದನೆಯ ವಿರುದ್ಧದ ಭಾರತದ ಹೊಸ ಅಧಿಕೃತ ನೀತಿ ಎಂದು ಹೇಳಿದ ಮೋದಿ, ಆ ಕಾರ್ಯಾಚರಣೆಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆಯೇ ಹೊರತು, ಕೊನೆಗೊಳಿಸಿಲ್ಲ ಎಂದು ತಿಳಿಸಿದ್ದಾರೆ.

ಭವಿಷ್ಯದಲ್ಲಿ ಭಯೋತ್ಪಾದಕ ದಾಳಿಗಳು ಮತ್ತು ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ಭರವಸೆಯನ್ನು ಪಾಕಿಸ್ತಾನ ಉಳಿಸಿಕೊಳ್ಳುತ್ತದೆಯೇ ಎಂಬುವುದನ್ನು ಭಾರತ ಗಮನಿಸಲಿದೆ ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ.

ಭಾರತವು ಇನ್ನು ಮುಂದೆ ಭಯೋತ್ಪಾದಕ ನಾಯಕರು ಮತ್ತು ಅವರಿಗೆ ಆಶ್ರಯ ನೀಡುವ ಸರ್ಕಾರಗಳನ್ನು ಪ್ರತ್ಯೇಕ ಘಟಕಗಳಾಗಿ ನೋಡುವುದಿಲ್ಲ. ಇದು ಯುದ್ಧದ ಯುಗವಲ್ಲ, ಹಾಗಂತ ಭಯೋತ್ಪಾದನೆಯ ಯುಗವೂ ಅಲ್ಲ ಎಂದಿದ್ದಾರೆ.

ಭಾರತದ ನಿಲುವು ಬಹಳ ಸ್ಪಷ್ಟವಾಗಿದೆ. ಭಯೋತ್ಪಾದನೆ ಮತ್ತು ದ್ವಿಪಕ್ಷೀಯ ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ; ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ನಡೆಸಲು ಸಾಧ್ಯವಿಲ್ಲ, ಹಾಗೆಯೇ ನೀರು ಮತ್ತು ರಕ್ತ ಕೂಡ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ, ಪ್ರಧಾನಿ ತಮ್ಮ ಭಾಷಣದಲ್ಲಿ ಸಿಂಧೂ ಜಲ ಒಪ್ಪಂದದ ರದ್ದತಿಯನ್ನು ಉಲ್ಲೇಖಿಸಿದ್ದಾರೆ.

ಕದನ ವಿರಾಮಕ್ಕೆ ಮುಂದಾದದ್ದು ಪಾಕಿಸ್ತಾನ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಮಾಡುವಲ್ಲಿ ಯಶಸ್ವಿಯಾದ ನಂತರವೇ ಭಾರತ ಕದನ ವಿರಾಮಕ್ಕೆ ಒಪ್ಪಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಭಯೋತ್ಪಾದಕರು ನಮ್ಮ ಸಹೋದರಿಯರ ಹಣೆಯ ಸಿಂಧೂರ ಅಳಿಸುವ ಧೈರ್ಯ ಮಾಡಿದರು. ಅದಕ್ಕಾಗಿಯೇ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದನೆ ಕೇಂದ್ರಗಳನ್ನು ನಾಶಪಡಿಸಿತು ಎಂದಿದ್ದಾರೆ.

‘ಆಪರೇಷನ್ ಸಿಂಧೂರ’ ಪಾಕಿಸ್ತಾನದಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿ, ಅಲ್ಲಿನ ನಾಯಕರನ್ನು ನಿರಾಶೆಗೊಳಿಸಿದೆ. ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸುವ ಬದಲು, ಪಾಕಿಸ್ತಾನವು ನಮ್ಮ ಧಾರ್ಮಿಕ ಸ್ಥಳಗಳು, ಶಾಲೆಗಳು, ನಾಗರಿಕರು ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ಮೋದಿ ಹೇಳಿದ್ದಾರೆ.

ಭಾರತದ ಮುಂದುವರಿದ, ಬಲಿಷ್ಠ ರಕ್ಷಣಾ ವ್ಯವಸ್ಥೆಗಳು ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಸುಲಭವಾಗಿ ತಟಸ್ಥಗೊಳಿಸುವುದನ್ನು ಜಗತ್ತು ನೋಡುತ್ತಿದೆ. ಪಾಕಿಸ್ತಾನ ಭಾರತದ ಗಡಿಗಳನ್ನು ಗುರಿಯಾಗಿಸಿಕೊಂಡಿದ್ದರೂ, ಭಾರತವು ಕಾರ್ಯತಂತ್ರದಿಂದ ಪ್ರತಿಕ್ರಿಯಿಸಿದೆ. ಅವರ ಪ್ರಮುಖ ಮೂಲಸೌಕರ್ಯಕ್ಕೆ ನಿಖರವಾದ ಹೊಡೆತ ನೀಡಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಪ್ರಧಾನಿ, ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ರೀತಿ ಒಂದು ದಿನ ಆ ರಾಷ್ಟ್ರವನ್ನೇ ನಾಶಪಡಿಸುತ್ತದೆ. ಪಾಕಿಸ್ತಾನ ಬದುಕುಳಿಯಲು ಬಯಸಿದರೆ, ಅದು ತನ್ನಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದ್ದಾರೆ.

ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಭಾರತ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಬಹಾವಲ್ಪುರ್ ಮತ್ತು ಮುರಿಡ್ಕೆ ಮೂಲದ ಭಯೋತ್ಪಾದಕರ ನೆಲೆಗಳು ಭಯೋತ್ಪಾದನೆಯ ವಿಶ್ವವಿದ್ಯಾಲಯಗಳಾಗಿ ಅಭಿವೃದ್ಧಿ ಹೊಂದುತ್ತಿದ್ದರಿಂದ ಅವುಗಳನ್ನು ನಾಶಪಡಿಸಲಾಗಿದೆ. ಈ ಸ್ಥಳಗಳು ಅಮೆರಿಕದ 9/11ರ ದಾಳಿಗಳು, ಲಂಡನ್ ಟ್ಯೂಬ್ ಬಾಂಬ್ ದಾಳಿಗಳು ಮತ್ತು ಭಾರತದಲ್ಲಿ ದಶಕಗಳಿಂದ ನಡೆದ ಭಯೋತ್ಪಾದಕ ಘಟನೆಗಳು ಸೇರಿದಂತೆ ವಿಶ್ವದ ಪ್ರಮುಖ ಭಯೋತ್ಪಾದಕ ದಾಳಿಗಳೊಂದಿಗೆ ಸಂಬಂಧ ಹೊಂದಿವೆ ಎಂದು ಪ್ರಧಾನಿ ವಿವರಿಸಿದ್ದಾರೆ.

‘ಶಾಂತಿ’ ಗಾಗಿ ‘ಶಕ್ತಿ’ಯ ಬಳಕೆಯನ್ನು ಒತ್ತಿ ಹೇಳಿದ ಪ್ರಧಾನಿ, ಭಾರತ ಅದನ್ನು ಅನುಸರಿಸುತ್ತದೆ; ಆದಾಗ್ಯೂ, ಕೆಲವೊಮ್ಮೆ ಶಾಂತಿಗಾಗಿಯೂ ಶಕ್ತಿಯನ್ನು ಬಳಸಬೇಕಾಗುತ್ತದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನಕ್ಕೆ ಉಂಟಾದ ಭಾರಿ ಹಾನಿಯನ್ನು ದೃಢಪಡಿಸಿದ ಪ್ರಧಾನಿ, ಭಾರತವು ಭಯೋತ್ಪಾದಕರ ಭದ್ರಕೋಟೆಗಳನ್ನು ನಾಶಮಾಡಿದೆ. ಇದರಿಂದಾಗಿ ಪಾಕಿಸ್ತಾನವು ತನ್ನ ಕಡೆಯಿಂದ ಯಾವುದೇ ಭಯೋತ್ಪಾದಕ ಚಟುವಟಿಕೆಗಳು ಅಥವಾ ಮಿಲಿಟರಿ ಕಾರ್ಯಾಚರಣೆಗಳು ನಡೆಯುವುದಿಲ್ಲ ಎಂದು ಭರವಸೆ ನೀಡಬೇಕಾಯಿತು ಎಂದು ತಿಳಿಸಿದ್ದಾರೆ.

ಎಚ್ಚರಿಕೆಯಿಂದ ಪಾಕಿಸ್ತಾನದ ಭಯೋತ್ಪಾದಕರ ಕೇಂದ್ರಗಳು ಮತ್ತು ಮಿಲಿಟರಿ ನೆಲೆಗಳ ವಿರುದ್ಧದ ನಮ್ಮ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಾವು ನಿರ್ಧರಿಸಿದ್ದೇವೆ. ಆದಾಗ್ಯೂ, ನಾವು ಜಾಗರೂಕರಾಗಿರುತ್ತೇವೆ. ಭವಿಷ್ಯದಲ್ಲಿಯೂ ಸಹ ಅವರ ಕ್ರಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದೇಶ ಒಗ್ಗಟ್ಟಿನಿಂದ ಇರಬೇಕೆಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ಸಶಸ್ತ್ರ ಪಡೆಗಳು, ಅರೆಸೈನಿಕ ಪಡೆಗಳು, ಬಿಎಸ್‌ಎಫ್, ಗುಪ್ತಚರ ಸಂಸ್ಥೆಗಳು ಮತ್ತು ನಾಗರಿಕರು ಒಟ್ಟಾಗಿ ನಿಂತಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

ಭಯೋತ್ಪಾದಕ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ ಪ್ರಧಾನಿ, ದೇಶದ ಮಹಿಳೆಯರ ಘನತೆಗೆ ಹಾನಿ ಮಾಡಲು ಪ್ರಯತ್ನಿಸಿದ್ದರ ಪರಿಣಾಮಗಳನ್ನು ಎಲ್ಲಾ ಭಯೋತ್ಪಾದಕ ಸಂಘಟನೆಗಳು ಈಗ ಸಂಪೂರ್ಣವಾಗಿ ಅರ್ಥಮಾಡಿಕೊಂಡಿವೆ ಎಂದು ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಕೇವಲ ಹೆಸರಲ್ಲ, ಬದಲಾಗಿ ಲಕ್ಷಾಂತರ ಭಾರತೀಯರ ಭಾವನೆಗಳ ಪ್ರತಿಬಿಂಬವಾಗಿದೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ನಂತರ ಭಾರತ ಇಷ್ಟೊಂದು ದಿಟ್ಟ ಕ್ರಮ ಕೈಗೊಳ್ಳುತ್ತದೆ ಎಂದು ಭಯೋತ್ಪಾದಕರು ಎಂದಿಗೂ ಊಹಿಸಿರಲಿಲ್ಲ ಎಂದಿದ್ದಾರೆ.

ಒಂದು ರಾಷ್ಟ್ರವು ‘ರಾಷ್ಟ್ರ ಮೊದಲು’ ಎಂಬ ತತ್ವವನ್ನು ಮಾರ್ಗದರ್ಶಿ ಸೂತ್ರವಾಗಿಟ್ಟುಕೊಂಡು ಒಗ್ಗಟ್ಟಿನಿಂದ ನಿಂತಾಗ, ಅದು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಪ್ರಭಾವಶಾಲಿ ಫಲಿತಾಂಶಗಳನ್ನು ಪಡೆಯುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ಭಾರತವನ್ನು ಗುರಿಯಾಗಿಸುವ ಪ್ರಯತ್ನ ನಡೆದಾಗಲೆಲ್ಲಾ, ಭಾರತ ತನ್ನದೇ ಆದ ಕ್ರಮಗಳ ಮೂಲಕ ಭಯೋತ್ಪಾದಕ ನೆಲೆಗಳನ್ನು ಬೇರು ಸಹಿತ ಕಿತ್ತು ಹಾಕಿ ಪ್ರತೀಕಾರ ತೀರಿಸಿಕೊಂಡಿವೆ ಎಂದಿದ್ದಾರೆ.

ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...