Homeಮುಖಪುಟಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

- Advertisement -
- Advertisement -

ಬೆಳಗಾವಿಯಲ್ಲಿ ಬಜರಂಗದಳದ ಸದಸ್ಯರು ತಲವಾರ್‌ ಪ್ರದರ್ಶನ ಮಾಡುತ್ತಾ ನವರಾತ್ರಿ ಮೆರವಣಿಗೆ ನಡೆಸಿದ್ದು ಕಾನೂನು ಬಾಹಿರ ಕೃತ್ಯವಾಗಿದೆ ಎಂದು ಆರೋಪಿಸಿಸಿರುವ ಆಲ್‌ ಇಂಡಿಯಾ ಲಾಯರ್ಸ್ ‌ಅಸೋಸಿಯೇಷನ್‌ ಫಾರ್‌ ಜಸ್ಟೀಸ್ಸ್ ಸಂಘಟನೆಯು ಬಜರಂಗದಳದ ವಿರುದ್ಧ ಡಿಜಿಪಿಯವರಿಗೆ ದೂರು ಸಲ್ಲಿಸಿದೆ.

ಇಂತಹ ಘಟನೆಗಳಿಂದ ರಾಜ್ಯದಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಮೆರವಣಿಗೆಯಲ್ಲಿ ತಲವಾರ್‌ ಪ್ರದರ್ಶಿಸಿದ ಬಜರಂಗದಳದ ಸದಸ್ಯರ ಮೇಲೆ ಕ್ರಿಮಿನಲ್‌ ಕೇಸು ದಾಖಲಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇಂತಹ ಮತೀಯ ಗೂಂಡಾಗಿರಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೆ ಬೆಳಗಾವಿಯಲ್ಲಿ ತನ್ನ ಸ್ನೇಹಿತೆಯೊಟ್ಟಿಗೆ ಪಾರ್ಕಿಗೆ ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬೆಂಗಳೂರಿನಲ್ಲಿ ಮುಸ್ಲಿಂ ಮಹಿಳಾ ಸಹೋದ್ಯೋಗಿಯನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಅವರಿಬ್ಬರ ಮೇಲೆ ಮತೀಯಾ ಗೂಂಡಾಗಳು ದಾಳಿ ಮಾಡಿದ್ದರು. ಮಂಡ್ಯದಲ್ಲಿಯೂ ಕೂಡ ಇಂತಹದೇ ಘಟನೆ ನಡೆದಿತ್ತು. ನಿನ್ನೆ ಮಂಗಳೂರಿನಲ್ಲಿ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ನಡೆದಿದೆ.

ಇನ್ನು ಇಂತಹ ಘಟನೆಗಳಾಗದಂತೆ ಜಾಗೃತವಹಿಸಬೇಕಿದ್ದ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಸಹ ಇಂತಹ ಘಟನೆಗಳನ್ನು, ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಳ್ಳುತ್ತಲೇ ಬರುತ್ತಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಕಳೆದ ವಾರವಷ್ಟೇ ‘ಕರ್ನಾಟಕದಲ್ಲಿ ಮಾರೆಲ್ ಪೊಲೀಸಿಂಗ್ ಘಟನೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಮತೀಯ ಗೂಂಡಾಗಿರಿ ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾಸ್ ಜಸ್ಟೀಸ್ ಸಂಘಟನೆ ನೋಟೀಸ್ ನೀಡಿದೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...