Homeಮುಖಪುಟಸಂಸ್ಕೃತ ಮಾತ್ರ ದೇವರ ಭಾಷೆ ಎಂದು ನಂಬಿಸಲಾಗಿದೆ- ತಮಿಳು ’ದೇವರ ಭಾಷೆ’ ಎಂದ ಮದ್ರಾಸ್ ಹೈಕೋರ್ಟ್

ಸಂಸ್ಕೃತ ಮಾತ್ರ ದೇವರ ಭಾಷೆ ಎಂದು ನಂಬಿಸಲಾಗಿದೆ- ತಮಿಳು ’ದೇವರ ಭಾಷೆ’ ಎಂದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ನಾಳೆ (ಸೆ.14) ಒಕ್ಕೂಟ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡಲಿದ್ದು, ದಕ್ಷಿಣದ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ಕೂಡ ವ್ಯಕ್ತವಾಗುತ್ತಿದೆ. ಇದೇ ವೇಳೆ ತಮಿಳು ಭಾಷೆಯನ್ನು “ದೇವರ ಭಾಷೆ” ಎಂದು ಮದ್ರಾಸ್ ಹೈಕೋರ್ಟ್ ಕೊಂಡಾಡಿದೆ.

ದೇಶದಾದ್ಯಂತ ದೇವಾಲಯದ ಪವಿತ್ರೀಕರಣ/ಪ್ರತಿಷ್ಠಾಪನೆಯನ್ನು ಅರುಣಗಿರಿನಾಥರು, ಅಜ್ವರರು ಮತ್ತು ನಾಯನ್ಮಾರ್‌ಗಳಂತಹ ಸಂತರು ರಚಿಸಿದ ತಮಿಳು ಸ್ತೋತ್ರಗಳನ್ನು ಪಠಿಸುವ ಮೂಲಕ ನಡೆಸಬೇಕು ಎಂದು ಹೇಳಿದೆ.

ಇತ್ತೀಚಿಗೆ ಅರ್ಜಿ ವಿಚಾರಣೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎನ್.ಕಿರುಬಾಕರನ್ ಮತ್ತು ನ್ಯಾಯಮೂರ್ತಿ ಬಿ.ಪುಗಲೆಂಧಿ ಅವರ ಪೀಠವು ಆದೇಶದಲ್ಲಿ ಈ ಹೇಳಿಕೆ ನೀಡಿದ್ದು, ನಮ್ಮ ದೇಶದಲ್ಲಿ ಸಂಸ್ಕೃತವನ್ನು ಮಾತ್ರ ದೇವರ ಭಾಷೆ ಎಂದು ನಂಬುವಂತೆ ಮಾಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಖಾಸಗೀಕರಣವನ್ನು ವಿರೋಧಿಸಿ ಮೋದಿಗೆ ಪತ್ರ ಬರೆಯಲಿರುವ ತಮಿಳುನಾಡು ಸಿಎಂ

ತಮಿಳು ಶೈವ ಮಂತ್ರಂ (ಸ್ತುತಿಗೀತೆಗಳು) ಮತ್ತು ಸಂತ ಅಮರಾವತಿ ಆತರಂಗರೈ ಕರೂರರ ಹಾಡುಗಳೊಂದಿಗೆ ಕರೂರು ಜಿಲ್ಲೆಯ ಅರುಲ್ಮಿಗು ಪಶುಪತೇಶ್ವರ ಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪಿಸಲು ಕೋರಿ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

“ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ಭಾಷೆಯಲ್ಲಿ ಆರಾಧನೆ ನಡೆಯುತ್ತದೆ. ನಮ್ಮ ದೇಶದಲ್ಲಿ, ಸಂಸ್ಕೃತವನ್ನು ಮಾತ್ರ ದೇವರ ಭಾಷೆ ಎಂದು ನಂಬುವಂತೆ ಮಾಡಲಾಗಿದೆ. ಬೇರೆ ಯಾವುದೇ ಭಾಷೆ ಅದಕ್ಕೆ ಸಮನಲ್ಲ ಎಂದು ಬಿಂಬಿಸಲಾಗಿದೆ. ನಿಸ್ಸಂದೇಹವಾಗಿ, ಸಂಸ್ಕೃತ ಅಗಾಧವಾದ ಪ್ರಾಚೀನ ಸಾಹಿತ್ಯವನ್ನು ಹೊಂದಿರುವ ಪ್ರಾಚೀನ ಭಾಷೆ. ಆದರೆ, ಸಂಸ್ಕೃತದಲ್ಲಿ ವೇದಗಳನ್ನು ಪಠಿಸಿದರೆ ಮಾತ್ರ ದೇವರುಗಳು ಭಕ್ತರ ಪ್ರಾರ್ಥನೆಯನ್ನು ಕೇಳುತ್ತಾರೆ ಎಂಬ ನಂಬಿಕೆಯನ್ನು ಹರಡಲಾಗಿದೆ” ಎಂದು ಪೀಠ ಹೇಳಿದೆ.

ಜನರು ಮಾತನಾಡುವ ಪ್ರತಿಯೊಂದು ಭಾಷೆಯೂ ದೇವರ ಭಾಷೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. “ಮನುಷ್ಯನು ಭಾಷೆಯನ್ನು ಸೃಷ್ಟಿಸಲು ಸಾಧ್ಯವಿಲ್ಲ. ಭಾಷೆಗಳು ಶತಮಾನಗಳಿಂದ ಅಸ್ತಿತ್ವದಲ್ಲಿವೆ. ಒಂದು ತಲೆಮಾರಿನಿಂದ ಇನ್ನೊಂದು ಪೀಳಿಗೆಗೆ ವರ್ಗಾವಣೆಯಾಗಿವೆ. ಅಸ್ತಿತ್ವದಲ್ಲಿರುವ ಭಾಷೆಗಳಲ್ಲಿ ಮಾತ್ರ ಸುಧಾರಣೆಯಾಗಬಹುದು. ಆದರೆ ಯಾವುದೇ ಭಾಷೆಯ ಸೃಷ್ಟಿ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು, ತಮಿಳುನಾಡಿನ ಜೊತೆ ಒಕ್ಕೂಟ ಸರ್ಕಾರ ಸಂವಹನ ನಡೆಸುವಾಗ ಇಂಗ್ಲಿಷ್ ಭಾಷೆ ಬಳಸಬೇಕು. ಹಿಂದಿ ಬಳಸಕೂಡದು ಎಂದು ಮದ್ರಾಸ್ ಹೈಕೋರ್ಟ್ ಮಧುರೈ ಪೀಠ ಇತ್ತಿಚೆಗೆ ತೀರ್ಪು ನೀಡಿದೆ.

ರಾಜ್ಯಗಳೊಂದಿಗೆ ಸಂವಹನ ನಡೆಸುವಾಗ ಅಧಿಕೃತ ಭಾಷೆಗಳ ಕಾಯ್ದೆ, 1963ರ ನಿಯಮಗಳನ್ನು ಪಾಲಿಸಬೇಕು ಎಂದು ಒಕ್ಕೂಟ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಮಧುರೈ ನ್ಯಾಯಪೀಠ ಸೂಚನೆ ನೀಡಿತ್ತು.


ಇದನ್ನೂ ಓದಿ: ಸಿಎಎ ಹಿಂಪಡೆಯುವಂತೆ ನಿರ್ಣಯ ಅಂಗೀಕರಿಸಿದ ತಮಿಳುನಾಡು ಅಸೆಂಬ್ಲಿ: ಬಿಜೆಪಿ ಮಿತ್ರ ಪಕ್ಷದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...