Homeಮುಖಪುಟಲಕ್ನೋ-ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ದುರಂತ: 10 ಪ್ರಯಾಣಿಕರು ಸಾವು

ಲಕ್ನೋ-ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ದುರಂತ: 10 ಪ್ರಯಾಣಿಕರು ಸಾವು

- Advertisement -
- Advertisement -

ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಶನಿವಾರ ಪ್ಯಾಸೆಂಜರ್ ರೈಲಿನ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ10 ಜನ  ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

ಶನಿವಾರ ಮುಂಜಾನೆ ಲಕ್ನೋ-ರಾಮೇಶ್ವರಂ ಎಕ್ಸ್‌ಪ್ರೆಸ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಮೂಲಗಳು  ತಿಳಿಸಿದೆ.

ಮೃತರಲ್ಲಿ ಆರು ಮಂದಿ  ಉತ್ತರ ಪ್ರದೇಶದವರಾಗಿದ್ದು, ಇವರು ರಾಮೇಶ್ವರಂಗೆ ತೀರ್ಥಯಾತ್ರೆಗೆ ತೆರಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಬೆಂಕಿ ಕಾಣಿಸಿಕೊಂಡ ಕೋಚ್‌ನಲ್ಲಿ ಒಟ್ಟು 55 ಪ್ರಯಾಣಿಕರಿದ್ದರು. ಅಡುಗೆ ಮಾಡುವ ಉದ್ದೇಶದಿಂದ ಕೋಚ್‌ನೊಳಗೆ ಅಕ್ರಮವಾಗಿ ಸಾಗಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ನ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸದೆ.

ಘಟನೆಯಲ್ಲಿ ಗಾಯಗೊಂಡ 20 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಮಧುರೈ ರೈಲು ನಿಲ್ದಾಣದಿಂದ 1 ಕಿಮೀ ದೂರದಲ್ಲಿ   ರೈಲು ನಿಂತಿದ್ದು, ಪ್ರಯಾಣಿಕರು ಮೀನಾಕ್ಷಿ ದೇವಸ್ಥಾನಕ್ಕೆ ದರ್ಶನಕ್ಕಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಗ್ನಿಶಾಮಕ ಮತ್ತು ರಕ್ಷಣಾ  ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಧುರೈ ಜಿಲ್ಲಾಧಿಕಾರಿ ಸಂಗೀತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೆಂಕಿ ಉದ್ಭವಿಸಲು ಕಾರಣವಾದ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಹಿಂಸಾಚಾರ ಪೀಡಿತ ನುಹ್‌ನಲ್ಲಿ ಶೋಭಾ ಯಾತ್ರೆಗೆ ಕರೆ; ಇಂಟರ್ನೆಟ್,  SMS ಸೇವೆಗಳು ಸ್ಥಗಿತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...