Homeಮುಖಪುಟತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

- Advertisement -
- Advertisement -

ತಮಿಳುನಾಡಿನಲ್ಲಿ ಬುಧವಾರವೂ ಬಿಜೆಪಿಯ ಪಕ್ಷಾಂತರ ಪರ್ವ ಮುಂದುವರಿದಿದ್ದು, ಐಟಿ ವಿಭಾಗದ ಪದಾಧಿಕಾರಿ ಸೇರಿದಂತೆ ಪಕ್ಷದ 13 ಪದಾಧಿಕಾರಿಗಳು ಕೇಸರಿ ಪಕ್ಷವನ್ನು ತೊರೆದಿದ್ದಾರೆ.

ಬಿಜೆಪಿ ಪಕ್ಷದ ಪಶ್ಚಿಮ ಚೆನ್ನೈ ಘಟಕದಲ್ಲಿ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಓರತಿ ಅನ್ಬರಸು ಮತ್ತು ಇತರ 12 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಸೇರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ Orathi Anbarasu ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಮರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಅವರು ಕೇಸರಿ ಪಕ್ಷಕ್ಕೆ ರಾಜೀನಾಮೆ ನೀಡಿ ಎಐಎಡಿಎಂಕೆ ಸೇರಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿಯಿಂದ 13 ಜನರು ಪಕ್ಷ ತೊರೆದಿದ್ದಾರೆ.

ಈ 13 ಜನರು ಕೂಡ ಈಗ ತಮ್ಮ “ನಾಯಕ” ಮತ್ತು ಮಾಜಿ ರಾಜ್ಯ ಐಟಿ ವಿಭಾಗದ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಅವರ ರಾಜಕೀಯ ಮಾರ್ಗವನ್ನು ಅನುಸರಿಸಿದ್ದಾರೆ. ನಿರ್ಮಲ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ಎಐಎಡಿಎಂಕೆಗೆ ಸೇರಿದ್ದರು. ಪಕ್ಷದ ಇತರ ಕೆಲವು ಪದಾಧಿಕಾರಿಗಳು ಸಹ ಬಿಜೆಪಿ ತೊರೆದು ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಗೆ ಸೇರ್ಪಡೆಗೊಂಡರು, ಇದು ಎರಡು ಮಿತ್ರಪಕ್ಷಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ‘ಕುಂಕುಮ ಯಾಕಿಟ್ಟಿಲ್ಲ, ಗಂಡ ಬದುಕಿದಾನೆ ತಾನೇ’: ಮಹಿಳಾ ದಿನಾಚರಣೆಯಂದೇ ಬಿಜೆಪಿ ಸಂಸದನಿಂದ ಮಹಿಳೆಗೆ ಅವಮಾನ

”ದೀರ್ಘಕಾಲದಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ನಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದ. ಆದರ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ಪಕ್ಷದಲ್ಲಿನ “ಪಿತೂರಿಗಳಿಗೆ” ಬಲಿಯಾಗಲು ಬಯಸುವುದಿಲ್ಲ ಆದ್ದರಿಂದ ಬಿಜೆಪಿಯನ್ನು ತೊರೆಯುತ್ತಿದ್ದೇನೆ” ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಸರಸು ಅವರು ಹೇಳಿದ್ದಾರೆ.

ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ”ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಇತರ ಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತಿರುವುದರಿಂದ, ಕೆಲವು ಎರಡನೇ ಅಥವಾ ಮೂರನೇ ಹಂತದ ನಾಯಕರು ಪಕ್ಷವನ್ನು ತೊರೆಯುವ ವಿಷಯವು ದೊಡ್ಡ ಆಯಾಮವನ್ನು ಪಡೆದುಕೊಂಡಿದೆ” ಎಂದು ಹೇಳಿದರು.

”ಕೆಲವು ದೊಡ್ಡ ನಾಯಕರು ಬಿಜೆಪಿ ತೊರೆದು ಮೂರು ತಿಂಗಳ ನಂತರ ದೊಡ್ಡ ನಾಯಕರು ಪಕ್ಷಕ್ಕೆ ಬರುವ ಸಾಧ್ಯತೆಗಳಿವೆ ಎಂದರು. ನಾನು ಅಣ್ಣಾಮಲೈ ಹೆಸರಿನ ಹಿಂದೆ ಎಂಪಿ ಅಥವಾ ಎಂಎಲ್‌ಎ ಟ್ಯಾಗ್ ಹೊಂದಲು ಬಿಜೆಪಿಗೆ ಸೇರಿಲ್ಲ, ಪಕ್ಷದ ಬೆಳವಣಿಗೆಗಾಗಿ ಸೇರಿದ್ದಾನೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...