Homeದಲಿತ್ ಫೈಲ್ಸ್ತಮಿಳುನಾಡು: ಟಾಯ್ಲೆಟ್‌ ತೊಳೆಯಲು ದಲಿತ ವಿದ್ಯಾರ್ಥಿಗಳನ್ನು ದೂಡುತ್ತಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

ತಮಿಳುನಾಡು: ಟಾಯ್ಲೆಟ್‌ ತೊಳೆಯಲು ದಲಿತ ವಿದ್ಯಾರ್ಥಿಗಳನ್ನು ದೂಡುತ್ತಿದ್ದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ಆರು ದಲಿತ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯವನ್ನು ಸ್ವಚ್ಛಗೊಳಿಸಲು ದೂಡುತ್ತಿದ್ದಾರೆಂಬ ಸಂಗತಿ ಹೊರಬಿದ್ದಿದೆ.

ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ವಿದ್ಯಾರ್ಥಿನಿಯ ಪೋಷಕರೊಬ್ಬರು ದೂರು ನೀಡಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ ಶಿಕ್ಷಕಿ ತಲೆಮರೆಸಿಕೊಂಡಿದ್ದಾಳೆ. ಪೊಲೀಸರು ಆಕೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶೌಚಾಲಯವನ್ನು ಸ್ವಚ್ಛಗೊಳಿಸಲು ಪರಿಶಿಷ್ಟ ಜಾತಿಯ ಮಕ್ಕಳನ್ನು ಮಾತ್ರ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ರಾಣಿ ದೂಡುತ್ತಿದ್ದರು” ಎಂದು 5ನೇ ತರಗತಿ ವಿದ್ಯಾರ್ಥಿಯ ತಾಯಿಯೊಬ್ಬರು ದೂರು ನೀಡಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಇತ್ತೀಚೆಗಷ್ಟೇ ನನ್ನ ಮಗ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದ ನಂತರವಷ್ಟೇ ಶೌಚಾಲಯ ಶುಚಿಗೊಳಿಸುತ್ತಿದ್ದ ವಿಷಯ ನನಗೆ ತಿಳಿಯಿತು” ಎಂದು ಅವರು ಹೇಳಿದ್ದಾರೆ.

“ಡೆಂಗ್ಯೂ ಹೇಗೆ ಬಂತು ಎಂದು ನಾನು ನನ್ನ ಮಗನಲ್ಲಿ ವಿಚಾರಿಸಿದೆ. ಶೌಚಾಲಯಕ್ಕೆ ಬ್ಲೀಚಿಂಗ್ ಪೌಡರ್ ಹಾಕುವ ಕೆಲಸವನ್ನು ಆತ ಮಾಡುತ್ತಿದ್ದನೆಂದು ಆಗ ತಿಳಿಯಿತು. ಪ್ರತಿದಿನ ಶೌಚಾಲಯವನ್ನು ಸ್ವಚ್ಛಗೊಳಿಸುವಾಗ ಸೊಳ್ಳೆಗಳು ಕಚ್ಚುತ್ತವೆ ಎಂದು ನನ್ನ ಮಗ ಹೇಳಿದನು” ಎಂದು ನೊಂದ ತಾಯಿ ತಿಳಿಸಿದ್ದಾರೆ.

“ಕಳೆದ ವಾರ ದಲಿತ ವಿದ್ಯಾರ್ಥಿಗಳು ಕೋಲುಗಳು ಮತ್ತು ಮಗ್‌ಗಳೊಂದಿಗೆ ಶೌಚಾಲಯದಿಂದ ಹೊರಬರುವುದನ್ನು ಪೋಷಕರು ನೋಡಿದೆವು. ಇದನ್ನು ಕಂಡು ಪ್ರಶ್ನಿಸಿದಾಗ ಅವರು, ಶೌಚಾಲಯವನ್ನು ಸ್ವಚ್ಛಗೊಳಿಸಿರುವುದಾಗಿಯೂ, ಮುಖ್ಯಶಿಕ್ಷಕಿ ಈ ಕೆಲಸವನ್ನು ಮಾಡಲು ಹೇಳಿರುವುದಾಗಿಯೂ ತಿಳಿಸಿದರು. ಆ ತರಗತಿಯಲ್ಲಿ 40 ಮಕ್ಕಳು ಓದುತ್ತಿದ್ದು, ಅವರಲ್ಲಿ ಹೆಚ್ಚಿನವರು ನಮ್ಮ ಪರಿಶಿಷ್ಟ ಜಾತಿಯ ಮಕ್ಕಳು. ನಮ್ಮ ಮಕ್ಕಳಿಗೆ ಮಾತ್ರ ಈ ಕೆಲಸ ಮಾಡುವಂತೆ ಒತ್ತಾಯಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲ ನ್ಯಾಯ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. “ಪಾಲಕರೈಯಲ್ಲಿರುವ ಪಂಚಾಯತ್ ಯೂನಿಯನ್ ಶಾಲೆಯ ಮುಖ್ಯಶಿಕ್ಷಕಿ ತಲೆಮರೆಸಿಕೊಂಡಿದ್ದಾರೆ. ಆಕೆಯನ್ನು ಬಂಧಿಸಲು ವಿಶೇಷ ತಂಡ ರಚಿಸಿದ್ದೇವೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...