Homeಮುಖಪುಟತಮಿಳುನಾಡು: NDA ಜೊತೆಗಿನ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದ ಎಐಎಡಿಎಂಕೆ

ತಮಿಳುನಾಡು: NDA ಜೊತೆಗಿನ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದ ಎಐಎಡಿಎಂಕೆ

- Advertisement -
- Advertisement -

2024ರ ಸಾರ್ವತ್ರಿಕ ಚುನಾವಣೆಗು ಮುನ್ನವೇ ತಮಿಳುನಾಡಿನ ಎಐಎಡಿಎಂಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆಗಿನ ಮೈತ್ರಿಯನ್ನು ಅಧಿಕೃತವಾಗಿ ಮುರಿದುಕೊಂಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಸೋಮವಾರ ವರದಿ ಮಾಡಿದೆ.

ಈ ಬಗ್ಗೆ ಎಐಎಡಿಎಂಕೆ ಉಪ ಸಂಯೋಜಕ ಕೆ.ಪಿ. ಮುನುಸಾಮಿ ಅವರು ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ್ದು, ”ಇಂದಿನಿಂದ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದೊಂದಿಗಿನ ಎಲ್ಲಾ ಸಂಬಂಧಗಳನ್ನು ಎಐಎಡಿಎಂಕೆ ಮುರಿದುಕೊಳ್ಳುತ್ತಿದೆ” ಎಂದು ತಿಳಿಸಿದ್ದಾರೆ.

”ಬಿಜೆಪಿಯ ರಾಜ್ಯ ನಾಯಕತ್ವವು ನಮ್ಮ ಮಾಜಿ ನಾಯಕರು, ನಮ್ಮ ಕಾರ್ಯಕರ್ತರು ಮತ್ತು ನಮ್ಮ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅನಗತ್ಯ ಟೀಕೆಗಳನ್ನು ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

”ಈ ಕುರಿತು ನಡೆದ ಸಭೆಯಲ್ಲಿ ಪಕ್ಷದ ಶಾಸಕರು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದ್ದಾರೆ. ಪಕ್ಷವು ಹೊಸ ಮೈತ್ರಿಕೂಟವನ್ನು ರಚಿಸುತ್ತದೆ ಮತ್ತು ಮುಂಬರುವ ಸಂಸತ್ತಿನ ಚುನಾವಣೆಯನ್ನು ಸ್ವತಃ ಎದುರಿಸಲಿದೆ” ಎಂದು ಅವರು ಘೋಷಿಸಿದ್ದಾರೆ.

ಕಳೆದ ಸೋಮವಾರ, ಎಐಎಡಿಎಂಕೆ ಹಿರಿಯ ನಾಯಕ ಡಿ.ಜಯಕುಮಾರ್ ಅವರು ಬಿಜೆಪಿಯೊಂದಿಗೆ ಮೈತ್ರಿ ಮುರಿಯುವುದಾಗಿ ಹೇಳಿದ್ದರು. ಎಐಎಡಿಎಂಕೆಯ ಮಾಜಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕಾಗಿ ಬಿಜೆಪಿ ತಮಿಳುನಾಡು ರಾಜ್ಯ ಮುಖ್ಯಸ್ಥ ಕೆ.ಅಣ್ಣಾಮಲೈ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

2019ರಿಂದ ಎಐಎಡಿಎಂಕೆ – ಬಿಜೆಪಿ ಮೈತ್ರಿ ಮಾಡಿಕೊಂಡಿದ್ದವು. ದ್ರಾವಿಡ ನೇತಾರ ಮತ್ತು ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಕುರಿತು ಅಣ್ಣಾಮಲೈ ಹೇಳಿಕೆಯ ನಂತರ ಬಿಜೆಪಿ ಮತ್ತು ಎಐಎಡಿಎಂಕೆಯೊಂದಿಗಿನ ಮೈತ್ರಿಯಲ್ಲಿ ಅಂತರ ಕಾಣಿಸಿಕೊಂಡಿತ್ತು.

ಇದನ್ನೂ ಓದಿ:

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

0
ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎವರೆಸ್ಟ್ ಮತ್ತು ಎಂಡಿಎಂಹೆಚ್‌ಗಳ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಅಲ್ಲದೆ ಈ ಮಸಾಲೆಗಳಲ್ಲಿನ ಎಥಿಲೀನ್ ಆಕ್ಸೈಡ್...