Homeಮುಖಪುಟತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

ತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದ ಆರೋಪದ ಘಟನೆ ಮರೆಯಾಗುವ ಮುನ್ನವೇ ತಮಿಳುನಾಡಿನಲ್ಲಿ ನಟ ಕಮಲ್ ಹಾಸನ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಮಕ್ಕಳ್ ನೀಧಿ ಮಯ್ಯಂ ಅಧ್ಯಕ್ಷ ಕಮಲ್ ಹಾಸನ್ ಅವರ ಕಾರಿನ ಕಿಟಕಿ ತೆರೆದು ಹಲ್ಲೆ ನಡೆಸಲು ಯತ್ನಿಸಿದನೆಂದು ಹೇಳಲಾಗಿದೆ. ಘಟನೆಯಲ್ಲಿ ನಟ ಕಮಲ್ ಹಾಸನ್‌ಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ತಮಿಳುನಾಡು ಚುನಾವಣಾ ಪ್ರಚಾರಕ್ಕಾಗಿ ಕಾಂಚೀಪುರಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಚೆನೈಗೆ ಹಿಂತಿರುಗುತ್ತಿದ್ದಾಗ ನಟನ ಮೇಲೆ ಹಲ್ಲೆ ನಡೆಸಲು ಯತ್ನಿಸಲಾಗಿದೆ ಎನ್ನಲಾಗಿದೆ.ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಪಕ್ಷ

ಮೊದಲಿಗೆ ತಾನು ನಟ ಕಮಲ್ ಹಾಸನ್ ಅವರ ಅಭಿಮಾನಿ ಎಂದು ಪೊಲೀಸರ ಬಳಿ ಹೇಳಿದ ವ್ಯಕ್ತಿ, ಜನಸಂದಣಿಯಲ್ಲಿ ಕಾರು ಹಾದುಹೋಗುವಾಗ ಕಿಟಕಿ ತೆರೆದು ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ನಂತರ ಕುಡಿದ ಅಮಲಿನಲ್ಲಿದ್ದ ಈ ವ್ಯಕ್ತಿಯ ಮೇಲೆ ಕೆಲವು ಎಂಎನ್‌ಎಂ ಬೆಂಬಲಿಗರು ಮತ್ತು ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ. ಬಳಿಕ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ “ದಾಳಿಯ” ಹಿಂದಿನ ಉದ್ದೇಶವನ್ನು ಮಕ್ಕಳ್ ನೀಧಿ ಮಯ್ಯಂ ಪಕ್ಷವು ಪರಿಶೀಲಿಸುತ್ತಿದೆ ಎಂದು ಎಂಎನ್ಎಂ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ಉಲ್ಲೆಖಿಸಿದೆ.

ಇತ್ತ ಪೊಲೀಸರು, ಈ ವ್ಯಕ್ತಿಯು ಕಮಲ್ ಹಾಸನ್ ಅಭಿಮಾನಿಯಾಗಿದ್ದು, ಅವರಿಗೆ ಹಾನಿ ಮಾಡುವ ಯಾವುದೇ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ. ಕಮಲ್ ಹಾಸನ್‌ಗೆ ಮತ್ತು ಕಾರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ಘಟನೆ ಕುರಿತು ಟ್ವಿಟ್ ಮಾಡಿರುವ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಕಾರ್ಯದರ್ಶಿ ಮತ್ತು ಮಾಜಿ ಐಪಿಎಸ್ ಅಧಿಕಾರಿ ಎ.ಜಿ.ಮೌರ್ಯ, ’ಕಾಂಚೀಪುರಂನಲ್ಲಿ ನಮ್ಮ ನಾಯಕರ ಕಾರು ಒಡೆಯಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಇಂತಹ ಪ್ರಯತ್ನಗಳಿಗೆ ನಾವು ಹೆದರುವುದಿಲ್ಲ’ ಎಂದಿದ್ದಾರೆ.

ಕಮಲ್ ಹಾಸನ್ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಏಪ್ರೀಲ್ 06 ಕ್ಕೆ ಚುನಾವಣೆ ನಡೆಯಲಿದ್ದು, ಮೇ 02ಕ್ಕೆ ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮಹಿ ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್ ಪಕ್ಷವು...