Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ' ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರಕಾರ

‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರಕಾರ

- Advertisement -
- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನೀತಿ ಮತ್ತು 2026ರಲ್ಲಿ ನಡೆಯಲಿರುವ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯ ಕುರಿತು ನಿರ್ಣಯವನ್ನು ಸದನದಲ್ಲಿ ಅಂಗೀಕರಿಸಿದ್ದಾರೆ.

ತಮಿಳುನಾಡು ಅಸೆಂಬ್ಲಿಯಲ್ಲಿ ಎರಡು ನಿರ್ಣಯಗಳನ್ನು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮಂಡಿಸಿದ್ದಾರೆ. ಸ್ಟಾಲಿನ್ ತಮ್ಮ ಭಾಷಣದಲ್ಲಿ ಒಂದು ದೇಶ ಒಂದು ಚುನಾವಣೆ ನೀತಿಯನ್ನು ಜಾರಿಗೊಳಿಸದಂತೆ ಈ ಸದನವು ಕೇಂದ್ರ ಸರ್ಕಾರವನ್ನು ಆಗ್ರಹಿಸುತ್ತದೆ. ಈ ನೀತಿಯು ಪ್ರಜಾಪ್ರಭುತ್ವದ ವಿರುದ್ಧವಾಗಿದೆ, ಇದರ ಜಾರಿ ಸಾಧ್ಯವಿಲ್ಲ, ಸಂವಿಧಾನದಲ್ಲಿಯೂ ಈ ಬಗ್ಗೆ ಅಡಕವಾಗಿಲ್ಲ ಎಂದು ಸ್ಟ್ಯಾಲಿನ್‌ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ನೀತಿ ಅಪ್ರಾಯೋಗಿಕ. ವೈವಿಧ್ಯಮಯ ದೇಶದಲ್ಲಿ ಏಕಕಾಲದಲ್ಲಿ ಸ್ಥಳೀಯ ಸಂಸ್ಥೆಗಳು, ರಾಜ್ಯ ವಿಧಾನಸಭೆಗಳು ಮತ್ತು ಸಂಸತ್ತಿಗೆ ಚುನಾವಣೆಗಳನ್ನು ನಡೆಸುವುದು ಪ್ರಜಾಪ್ರಭುತ್ವದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸ್ಟಾಲಿನ್, ತಮ್ಮ ಭಾಷಣದ ಸಂದರ್ಭದಲ್ಲಿ, ಈ ಪ್ರಸ್ತಾಪಗಳನ್ನು ಮೊಗ್ಗಿನಲ್ಲೇ ಚಿವುಟಿ ಹಾಕಬೇಕು. ಕ್ಷೇತ್ರಗಳ ಮರುವಿಂಗಡಣೆ ತಮಿಳುನಾಡಿನಂತಹ ದಕ್ಷಿಣ ರಾಜ್ಯಗಳಿಂದ ಸಂಸತ್ತಿನ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮಾಡಿರುವ ಒಂದು ಪಿತೂರಿಯಾಗಿರಬಹುದು ಎಂದು ಸ್ಟಾಲಿನ್ ಹೇಳಿದ್ದಾರೆ.

ಭಾರತವು ಒಕ್ಕೂಟ ರಚನೆಯೊಂದಿಗೆ ಹಲವಾರು ರಾಜ್ಯಗಳನ್ನು ಹೊಂದಿರುವ ದೇಶವಾಗಿದೆ. ಯಾವುದೇ ರಾಜ್ಯವು ಇತರಕ್ಕಿಂತ ದೊಡ್ಡದು ಅಥವಾ ಮುಖ್ಯವಲ್ಲ. ಪ್ರತಿಯೊಂದು ರಾಜ್ಯವನ್ನು ಸಮಾನವಾಗಿ ಪರಿಗಣಿಸಬೇಕು. ಕೇವಲ ಜನಸಂಖ್ಯೆಯನ್ನು ಆಧರಿಸಿದ ರಾಜಕೀಯ ಪ್ರಾತಿನಿಧ್ಯವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ. ಇಂತಹ ಕ್ರಮವು ದೇಶದಲ್ಲಿ ಮತ್ತಷ್ಟು ಪ್ರತಿರೋಧಕ್ಕೆ ಕಾರಣವಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯು ಅಪ್ರಾಯೋಗಿಕ ಮತ್ತು ಮುಕ್ತ, ನ್ಯಾಯೋಚಿತ ಮತ್ತು ಸ್ವತಂತ್ರ ಚುನಾವಣೆಗಳಿಗೆ ಒತ್ತು ನೀಡುವ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಏಕಕಾಲಿಕ ಚುನಾವಣೆಗಳು ರಾಜ್ಯ ವಿಧಾನಸಭೆಗಳ ವಿಸರ್ಜನೆಗೆ ಕಾರಣವಾಗಬಹುದು. ಇಂತಹ ನಡೆ ಸಂವಿಧಾನ ವಿರೋಧಿಯಾಗಿರುವುದರಿಂದ ಇದನ್ನು ನಾವು ವಿರೋಧಿಸಬೇಕಾಗಿದೆ. ಕೇಂದ್ರದಲ್ಲಿ ಒಂದು ಸರ್ಕಾರ ಪತನವಾದರೆ, ಅವರು ಎಲ್ಲಾ ರಾಜ್ಯ ಸರ್ಕಾರಗಳನ್ನು ವಿಸರ್ಜಿಸುತ್ತಾರೆಯೇ? ಸರ್ಕಾರಗಳ ಪತನದಿಂದಾಗಿ ಕೆಲವು ರಾಜ್ಯಗಳಲ್ಲಿ ಚುನಾವಣೆಗಳು ನಡೆದರೆ ಕೇಂದ್ರದಲ್ಲಿ ಆಡಳಿತ ನಡೆಸುವವರು ತಾವಾಗಿಯೇ ಕೆಳಗಿಳಿಯುತ್ತಾರೆಯೇ? ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕ್ರಮವೂ ರಾಜ್ಯಗಳ  ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನು ಓದಿ: ದಲಿತ ವರನನ್ನು ಬಲವಂತವಾಗಿ ಕುದುರೆ ಮೇಲಿನಿಂದ ಇಳಿಸಿ ಜಾತಿ ನಿಂದನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...