Homeಮುಖಪುಟನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

- Advertisement -
- Advertisement -

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ನಡೆಯುತ್ತಿರುವ ಅಕ್ರಮಗಳು, ಕೋಚಿಂಗ್ ಸೆಂಟರ್‌ಗಳ ಅತಿಯಾದ ಬೆಳವಣಿಗೆ ಮತ್ತು ವಿದ್ಯಾರ್ಥಿಗಳ ಜೀವಹಾನಿಯನ್ನು ಈ ನಿರ್ಣಯದಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಬಿಜೆಪಿಯ ಏಕೈಕ ಶಾಸಕರಾದ ಎಂ. ಭೋಜರಾಜನ್ ಅವರು ಈ ನಿರ್ಣಯವನ್ನು ತೀವ್ರವಾಗಿ ವಿರೋಧಿಸಿದರಲ್ಲದೆ, ಸದನದಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಸಭಾತ್ಯಾಗ (ವಾಕ್‌ಔಟ್) ಮಾಡಿದರು.

ತಮಿಳುನಾಡು ವಿಧಾನಸಭೆಯು ಈ ಹಿಂದೆಯೂ ಸಹ ನೀಟ್ ಪರೀಕ್ಷೆಯಿಂದ ವಿನಾಯಿತಿ ಕೋರಿ ನಿರ್ಣಯಗಳನ್ನು ಅಂಗೀಕರಿಸಿತ್ತು.

ಈ ಹಿಂದೆ, 2021ರಲ್ಲಿ ಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ, ರಾಜ್ಯಕ್ಕೆ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಕೋರಿ ‘ತಮಿಳುನಾಡು ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶ ಮಸೂದೆ’ಯನ್ನು (ಎಲ್.ಎ. ಮಸೂದೆ ಸಂಖ್ಯೆ 43, 2021) ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ಆದರೆ, ಈ ಮಸೂದೆಯನ್ನು ರಾಷ್ಟ್ರಪತಿಗಳ ಪರಿಶೀಲನೆಗಾಗಿ ಕಾಯ್ದಿರಿಸಲಾಗಿತ್ತು ಮತ್ತು ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆಯನ್ನು ತಡೆಹಿಡಿಯಲಾಗಿದೆ.

ನಿರ್ಣಯವನ್ನು ಮಂಡಿಸಿದ ಆರೋಗ್ಯ, ವೈದ್ಯಕೀಯ ಶಿಕ್ಷಣ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಜಿ. ಅರುಣ್‌ರಾಜ್ ಅವರು, ಅಗತ್ಯ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯ್ದೆ 2019 (ಕೇಂದ್ರ ಕಾಯ್ದೆ ಸಂಖ್ಯೆ 33, 2019), ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗ ಕಾಯ್ದೆ 2020 (ಕೇಂದ್ರ ಕಾಯ್ದೆ ಸಂಖ್ಯೆ 14, 2020), ಮತ್ತು ಹೋಮಿಯೋಪತಿ ರಾಷ್ಟ್ರೀಯ ಆಯೋಗ ಕಾಯ್ದೆ 2020 (ಕೇಂದ್ರ ಕಾಯ್ದೆ ಸಂಖ್ಯೆ 15, 2020) ಸೇರಿದಂತೆ ಇತರ ಸಂಬಂಧಿತ ಕೇಂದ್ರ ಶಾಸನಗಳಿಗೆ ತಿದ್ದುಪಡಿಗಳನ್ನು ಮಾಡುವಂತೆ ಆಗ್ರಹಿಸಿದ್ದಾರೆ.

ಇದು ಹನ್ನೆರಡನೇ ತರಗತಿಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ನಿರ್ಣಯದಲ್ಲಿ ತಿಳಿಸಿದ್ದಾರೆ.

ನೀಟ್ ಪರೀಕ್ಷೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ರಾಜ್ಯಗಳ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ತಮಿಳುನಾಡು ಸರ್ಕಾರವು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ತಮಿಳು ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು ಸೇರಿದಂತೆ ಗ್ರಾಮೀಣ ಮತ್ತು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಿಗುವ ಅವಕಾಶಗಳನ್ನು ಈ ಪರೀಕ್ಷೆಯು ಗಂಭೀರವಾಗಿ ಕುಂಠಿತಗೊಳಿಸಿದೆ ಎಂದು ಅದು ಹೇಳಿದೆ.

ನೀಟ್ ಪರೀಕ್ಷೆಯು ಅತಿಯಾದ ಶುಲ್ಕವನ್ನು ವಸೂಲಿ ಮಾಡುವ ಕೋಚಿಂಗ್ ಸೆಂಟರ್‌ಗಳ ಅತಿಯಾದ ಬೆಳವಣಿಗೆಗೆ ಕಾರಣವಾಗಿದೆ ಮತ್ತು ವಿದ್ಯಾರ್ಥಿಗಳ ಗಮನವನ್ನು ಶಾಲಾ ಪಠ್ಯಕ್ರಮದಿಂದ ನೀಟ್-ಕೇಂದ್ರಿತ ತರಬೇತಿಯತ್ತ ತಿರುಗಿಸಿದೆ ಎಂದಿದೆ.

ಹನ್ನೆರಡು ವರ್ಷಗಳ ಶಾಲಾ ಶಿಕ್ಷಣದ ಬದಲು, ಕೇವಲ ಒಂದೇ ಒಂದು ದಿನದ ಪರೀಕ್ಷೆಯು ಈಗ ವಿದ್ಯಾರ್ಥಿಯ ಉನ್ನತ ಶಿಕ್ಷಣದ ಹಾದಿಯನ್ನು ನಿರ್ಧರಿಸುತ್ತಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ನಿರ್ಣಯವು ನೀಟ್ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳನ್ನು ಎತ್ತಿ ತೋರಿಸಿದೆ. ಇದೇ ಅಕ್ರಮಗಳು ನೀಟ್-ಯುಜಿ 2026 ರದ್ದತಿ ಮತ್ತು ನಂತರದ ಮರುಪರೀಕ್ಷೆಗೆ ಕಾರಣವಾಯಿತು ಎಂದು ಹೇಳಿದೆ. ಈ ಬೆಳವಣಿಗೆಗಳು ಲಕ್ಷಾಂತರ ವಿದ್ಯಾರ್ಥಿಗಳಿಗೆ ಹೇಳಲಾಗದ ಮಾನಸಿಕ ಯಾತನೆ ಉಂಟುಮಾಡಿದ್ದು, ಯುವ ವಿದ್ಯಾರ್ಥಿಗಳ ದುರಂತ ಸಾವಿಗೆ ಕಾರಣವಾಗಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ನೀಟ್ ಪರೀಕ್ಷೆಯು ದೇಶದ ವಿದ್ಯಾರ್ಥಿಗಳ ನಂಬಿಕೆಯನ್ನು ಕಳೆದುಕೊಂಡಿದೆ. ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ಶಿಕ್ಷಣವನ್ನು ರಾಜ್ಯ ಪಟ್ಟಿಗೆ ಸೇರಿಸುವಂತೆ ಒತ್ತಾಯ

ಶಿಕ್ಷಣವನ್ನು ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸುವುದೇ ನೀಟ್ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಸಚಿವ ಅರುಣ್‌ರಾಜ್ ಹೇಳಿದ್ದಾರೆ.

“ನೇರ ಪ್ರವೇಶ ಪದ್ಧತಿಯ ಮೂಲಕ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದು, ತರುವಾಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಐದುವರೆ ವರ್ಷಗಳ ಕಾಲ ವೈದ್ಯನಾಗಿ ಸೇವೆ ಸಲ್ಲಿಸಿದ ವೈದ್ಯನಾಗಿ ಈ ಮಸೂದೆಯನ್ನು ಮಂಡಿಸಲು ನಾನು ಹೆಮ್ಮೆಪಡುತ್ತೇನೆ ಮತ್ತು ಸಂತೋಷಪಡುತ್ತೇನೆ” ಎಂದು ಸಚಿವರು ಹೇಳಿದ್ದಾರೆ.

ಸಭಾತ್ಯಾಗ ಮಾಡಿದ ಬಿಜೆಪಿ ಶಾಸಕ ಭೋಜರಾಜನ್ ಮಾತನಾಡಿ, “ನೀಟ್ ಪರೀಕ್ಷೆಯು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತದೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಪಲ್ಲಡಂನಲ್ಲಿ ತಮಿಳು ಮಾಧ್ಯಮದ 10 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಉಲ್ಲೇಖಿಸಿದ ಅವರು, “ಸರ್ಕಾರವೇ ಏಕೆ ಕೋಚಿಂಗ್ ಸೆಂಟರ್‌ಗಳನ್ನು ನಡೆಸಬಾರದು? ತಮಿಳುನಾಡಿನ ವಿದ್ಯಾರ್ಥಿಗಳು ಬುದ್ಧಿವಂತರಾಗಿದ್ದಾರೆ. ಅವರಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿಯನ್ನು ನೀಡಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...