Homeಮುಖಪುಟಡಿಎಂಕೆ ನಾಯಕರ ವಿರುದ್ಧ ಅವಹೇಳನಾಕಾರಿ ಪೋಸ್ಟ್: ಬಿಜೆಪಿ ನಾಯಕ ಅರೆಸ್ಟ್

ಡಿಎಂಕೆ ನಾಯಕರ ವಿರುದ್ಧ ಅವಹೇಳನಾಕಾರಿ ಪೋಸ್ಟ್: ಬಿಜೆಪಿ ನಾಯಕ ಅರೆಸ್ಟ್

- Advertisement -
- Advertisement -

ತಮಿಳುನಾಡಿನ ಅರಿಯಲೂರಿನಲ್ಲಿ ಬಿಜೆಪಿ ನಾಯಕನೋರ್ವನನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಡಿಎಂಕೆಯ ಕೆಲವು ನಾಯಕರ ಬಗ್ಗೆ ಅವಹೇಳನಕಾರಿ ಪೋಟೋಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ಬಿಜೆಪಿ ನಾಯಕ ವಡುಗಪಾಳ್ಯಂ ನಿವಾಸಿ ಸುರೇಶ್ ಬಂಧಿತರು.

ಡಿಎಂಕೆ ನಾಯಕರಾದ ಉದಯನಿಧಿ ಸ್ಟಾಲಿನ್, ಸೆಂಥಿಲ್ ಬಾಲಾಜಿ, ಮನೋ ತಂಗರಾಜ್, ಪಿಟಿಆರ್ ತ್ಯಾಗರಾಜನ್, ತಮಿಳುನಾಡು ಸಿಎಂ ಸಂಬಂಧಿ ಶಬರೇಶನ್, ಡಿಎಂಕೆ ಸಂಸದ ಟಿಆರ್ ಬಾಲು ಮತ್ತು ಸಂಸದ ತಿರುಮಾವಲವನ್ ವಿರುದ್ಧ ಈತ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಟೋವನ್ನು ಹಂಚಿಕೊಂಡಿದ್ದರು ಎಂದು ಹೇಳಲಾಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಮಧುರೈ ಪೊಲೀಸರು ಬಿಜೆಪಿ ನಾಯಕ ಸುರೇಶ್‌ನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಳು ನಡೆಯುತ್ತಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಂಚಿ: ಮೋದಿ ಭೇಟಿ ವೇಳೆ ಭದ್ರತಾ ಲೋಪ ಆರೋಪ; ಮೂವರು ಪೊಲೀಸರ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...