Homeಮುಖಪುಟತಮಿಳುನಾಡು: ಲೈಂಗಿಕ ಹಗರಣದಲ್ಲಿ ಬಿಜೆಪಿ ಮುಖಂಡ, ವಿಡಿಯೊ ಪ್ರಸಾರದ ಮಾಡಿದ ಸ್ವಪಕ್ಷದ ಸದಸ್ಯ

ತಮಿಳುನಾಡು: ಲೈಂಗಿಕ ಹಗರಣದಲ್ಲಿ ಬಿಜೆಪಿ ಮುಖಂಡ, ವಿಡಿಯೊ ಪ್ರಸಾರದ ಮಾಡಿದ ಸ್ವಪಕ್ಷದ ಸದಸ್ಯ

- Advertisement -
- Advertisement -

ಮಹಿಳೆಯೊಂದಿಗೆ ಅಶ್ಲೀಲ ಸಂಭಾಷಣೆ ನಡೆಸಿದ ವಿಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಆದ ಬಳಿಕ  ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಮಹಿಳೆಯೊಂದಿಗೆ ಅಶ್ಲೀಲ ಕರೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೊ ಬಹಿರಂಗ ಮಾಡಲಾಗಿದೆ. ಬಿಜೆಪಿಯ ಸದಸ್ಯರೆ ಆಗಿರುವ ಮದನ್ ರವಿಚಂದ್ರನ್ ಈ ವಿಡಿಯೊ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿದ್ದಾರೆ.

ಕಳೆದ ವರ್ಷ ಬಿಜೆಪಿ ಸೇರಿದ್ದ ಮದನ್ ರವಿಚಂದ್ರನ್, 1,41,000 ಚಂದಾದಾರರೊಂದಿಗೆ ಚಾನೆಲ್ ನಡೆಸುತ್ತಿದ್ದು, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಆರೋಪದ ತನಿಖೆಯ ಭಾಗವಾಗಿ ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಸಮ್ಮುಖದಲ್ಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಬಿಜೆಪಿ

15 ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಿಡಿಯೋ ಸಾಕ್ಷ್ಯವಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾಧ್ಯಮಗಳು ರಾಘವನ್ ಅವರನ್ನು ಮಿಸ್ಟರ್‌ ಕ್ಲೀನ್ ಎಂದು ಪ್ರಚಾರ ಮಾಡುತ್ತಿರುವುದರಿಂದ ಅವರ ವಿಡಿಯೊವನ್ನು ಮೊದಲು ಬಿಡುಗಡೆ ಮಾಡಲು ಆಯ್ಕೆ ಮಾಡಿಕೊಂಡೆ ಎಂದು ರವಿಚಂದ್ರನ್ ಹೇಳಿದ್ದಾರೆ.

ರಾಘವನ್ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಜೊತೆಗೆ ಅವುಗಳನ್ನು ಕಾನೂನುಬದ್ಧವಾಗಿ ಎದುರಿಸುವುದಾಗಿ ಹೇಳಿದ್ದಾರೆ.

“ಧರ್ಮ ಗೆಲ್ಲುತ್ತದೆ ಎಂದು ಟ್ವೀಟ್ ಮಾಡಿರುವ ಅವರು, ತಮ್ಮ 30 ವರ್ಷಗಳ ವೃತ್ತಿಜೀವನವನ್ನು ಯಾವುದೇ ತೊಂದರೆಗಳಿಲ್ಲದೆ ನಡೆಸಿರುವುದಾಗಿ, ತಮ್ಮ ಇಮೇಜ್ ಅನ್ನು ಹಾಳುಮಾಡಲು ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ತಮಿಳುನಾಡಿನ ಜನರಿಗೆ ನಾನು ಯಾರೆಂದು ತಿಳಿದಿದೆ. ನನ್ನೊಂದಿಗೆ ಸಂಬಂಧ ಹೊಂದಿರುವವರಿಗೆ ನಾನು ಯಾರೆಂದು ತಿಳಿದಿದೆ” ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ವಿಡಿಯೊವನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ ಬಳಿಕ ವಿಡಿಯೊ ಅಪ್ಲೋಡ್ ಮಾಡಿರುವುದಾಗಿ ಮದನ್ ರವಿಚಂದ್ರನ್ ಹೇಳಿದ್ದಾರೆ. ಅಣ್ಣಾಮಲೈ ಅವರನ್ನು ಭೇಟಿ ಮಾಡಿದ ನಂತರ ರಾಜೀನಾಮೆ ನೀಡಿದ್ದೇನೆ ಎಂದು ರಾಘವನ್ ಹೇಳಿದ್ದಾರೆ.

ಕಾಂಗ್ರೆಸ್ ಸಂಸದೆ ಜೋತಿಮಣಿ ಅವರು ರಾಘವನ್ ವಿರುದ್ಧ ಪೊಲೀಸರಿಗೆ ದೂರು ನೀಡಲಿದ್ದೇವೆ ಎಂದು ಹೇಳಿದ್ದಾರೆ. “ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬುದಕ್ಕೆ ವಿಡಿಯೋ ಸಾಕ್ಷ್ಯವಿದೆ. ಅದರ ಕುರಿತು ತನಿಖೆ ಮಾಡಬೇಕು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮುಖಂಡರ ತಿರುಚಿ‌ದ ಟ್ವೀಟ್ ಅವಲಂಬಿಸಿ ಪೊಲೀಸರಿಂದ ಎಫ್‌ಐಆರ್‌ ದಾಖಲು: ಉಮರ್ ಖಾಲಿದ್ ವಕೀಲರ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...