Homeಮುಖಪುಟತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

- Advertisement -
- Advertisement -

ಸೋದರ ಸಂಬಂಧಿಯೊಂದಿಗೆ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ವರನೊಬ್ಬ ವಧುವಿಗೆ ಕಪಾಳಮೋಕ್ಷ ಮಾಡಿದ್ದು, ಸ್ಥಳದಲ್ಲೇ ವಧು ಮದುವೆ ಮುರಿದುಕೊಂಡ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮದುವೆ ಮುರಿದುಕೊಂಡ ಕೆಲವು ಗಂಟೆಗಳ ಅಂತರದಲ್ಲೇ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಮತ್ತೊಬ್ಬರನ್ನು ಯುವತಿ ಮದುವೆಯಾಗಿದ್ದಾರೆ.

ತಮಿಳುನಾಡಿನ ಪನ್ರುಟಿಯದ ವಧು ಸ್ನಾತಕೋತ್ತರ ಪದವೀಧರೆ ಮತ್ತು ಚೆನ್ನೈ ಸಂಸ್ಥೆಯೊಂದರಲ್ಲಿ ಹಿರಿಯ ಇಂಜಿನಿಯರ್ ಆಗಿರುವ ಯುವಕರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 6 ರಂದು ಅವರ ಪೋಷಕರು ಮತ್ತು ಎರಡೂ ಕುಟುಂಬದ ಹಿರಿಯರ ಆಶೀರ್ವಾದದೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜನವರಿ 20 ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ, ಮದುವೆಯ ಮುನ್ನ ದಿನದ ಆರತಕ್ಷತೆಯಲ್ಲಿ ಸಮಸ್ಯೆ ಉದ್ಭವಿಸಿದೆ ಎನ್ನಲಾಗಿದೆ.

ಆರತಕ್ಷತೆಯಲ್ಲಿ ವರ ಮತ್ತು ವಧು ಒಟ್ಟಿಗೆ ಡ್ಯಾನ್ಸ್ ಮಾಡುತ್ತಿದ್ದಾಗ, ವಧುವಿನ ಸೋದರಸಂಬಂಧಿ ಕೂಡ ಸೇರಿಕೊಂಡಿದ್ದಾರೆ. ಸೋದರಸಂಬಂಧಿ ವಧು ಮತ್ತು ವರನ ಭುಜದ ಮೇಲೆ ಕೈಯಿಟ್ಟು ಅವರೊಂದಿಗೆ ನೃತ್ಯ ಮಾಡಲು ಪ್ರಾರಂಭಿಸಿದ್ದಾರೆ. ಇದು ವರನಿಗೆ ಕಿರಿಕಿರಿ ಉಂಟುಮಾಡಿದೆ ಎಂದು ವರದಿಯಾಗಿದೆ. ವರನು ವಧು ಮತ್ತು ಅವಳ ಸೋದರಸಂಬಂಧಿಯನ್ನು ದೂರ ತಳ್ಳಿ, ವಧುವಿನ ಕೆನ್ನೆಗೆ ಎಲ್ಲರ ಮುಂದೆ ಹೊಡೆದಿದ್ದಾರೆ ಎಂದು ವಧುವಿನ ಕುಟುಂಬ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ವರನು ತನ್ನ ಮಗಳಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವಧುವಿನ ತಂದೆ ಕೋಪಗೊಂಡು, ವರ ಮತ್ತು ಆತನ ಕುಟುಂಬವನ್ನು ಸಭಾಂಗಣದಿಂದ ಹೊರಹೋಗುವಂತೆ ಹೇಳಿದ್ದಾರೆ. ಮದುವೆಯನ್ನು ರದ್ದುಗೊಳಿಸುವ ವಧುವಿನ ನಿರ್ಧಾರಕ್ಕೆ ಮನೆಯವರು ಸಹ ಬೆಂಬಲಿಸಿದ್ದಾರೆ. ನಂತರ, ಯುವತಿಯ ಕುಟುಂಬವು ಸಂಬಂಧಿಕರಿಗೆ ಹೇಳಿ ಆಕೆಗೆ ಸೂಕ್ತವಾದ ವರನನ್ನು ಹುಡುಕಿ, ನಿಗದಿತ ದಿನಾಂಕ (ಜನವರಿ 20) ಮತ್ತು ಸಮಯದಲ್ಲಿ  ಬೇರೆ ಸ್ಥಳದಲ್ಲಿ ಮದುವೆ ಮಾಡಿದ್ದಾರೆ.

ಇತ್ತ, ವರನು ಪನ್ರುಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ವಧುವಿನ ಕುಟುಂಬದ ದೂರು ದಾಖಲಿಸಿ, ಅವರ ಕುಟುಂಬವು ಮದುವೆಯ ಸಿದ್ಧತೆ ಮತ್ತು ಸಮಾರಂಭಗಳಿಗೆ ಖರ್ಚು ಮಾಡಿದ 7 ಲಕ್ಷ ರೂಪಾಯಿ ಹಣವನ್ನು ಪರಿಹಾರವಾಗಿ ಕೇಳಿದ್ದಾರೆ.

“ಸೋದರಸಂಬಂಧಿಯೊಂದಿಗೆ ನೃತ್ಯ ಮಾಡಿದ್ದಕ್ಕಾಗಿ ವರ ವಧುವಿಗೆ ಕಪಾಳಮೋಕ್ಷ ಮಾಡಿದ್ದಾನೆಂದು ಆರೋಪಿಸಲಾಗಿದೆ. ನಂತರ ವಧು ವರನನ್ನು ತಿರಸ್ಕರಿಸಿದ್ದಾರೆ. ಆಕೆಯ ಪೋಷಕರು ಅಕೆಯನ್ನು ಬೇರೆ ಯುವಕನೊಂದಿಗೆ ಮದುವೆ ಮಾಡಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ” ಎಂದು ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಎಸ್. ವಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...