Homeಮುಖಪುಟತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

ತಮಿಳುನಾಡು | ಜಾತಿ ತಾರತಮ್ಯ ಆರೋಪ : ಡಿಎಂಕೆ ಬೆಂಬಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಆರೋಪಿಸಿ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಪ್ಪಕುಡಿ ಗ್ರಾಮ ಪಂಚಾಯತ್‌ನ ಡಿಎಂಕೆ ಬೆಂಬಲಿತ ಅಧ್ಯಕ್ಷೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿನ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ತಾರತಮ್ಯ ಆರೋಪ ಮಾಡಿರುವ ಬಗ್ಗೆ ಸುದ್ದಿಯಾಗಿರುವ ಎರಡನೇ ಪ್ರಕರಣ ಇದಾಗಿದೆ.

ಪಪ್ಪಕುಡಿ ಪಂಚಾಯತ್‌ನ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಅಧ್ಯಕ್ಷೆ ಪೂಂಗೊಥೈ ಶಶಿಕುಮಾರ್ ಅವರು ಇತ್ತೀಚೆಗೆ ತಿರುನಲ್ವೇಲಿ ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಮತ್ತು ಡಿಎಂಕೆ ನಾಯಕರಿಗೆ ತನ್ನ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಅತಿ ಹಿಂದುಳಿದ ವರ್ಗದವರಾದ ಪಂಚಾಯತ್ ಉಪಾಧ್ಯಕ್ಷರು ಜಾತಿ ಆಧಾರಿತ ತಾರತಮ್ಯ ಮಾಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

ಪೂಂಗೊಥೈ ಶಶಿಕುಮಾರ್ ಅವರು ಜಾತಿ ತಾರತಮ್ಯ ಆರೋಪಿಸಿ ಎರಡು ವರ್ಷಗಳ ಹಿಂದೆ ತಮ್ಮ ಹುದ್ದೆಯನ್ನು ತ್ಯಜಿಸಲು ಮುಂದಾಗಿದ್ದರು. ಅಂದಿನ ಕಲೆಕ್ಟರ್ ವಿ ವಿಷ್ಣು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಆದರೆ, ಡಿಎಂಕೆ ಪಕ್ಷದ ನಾಯಕತ್ವವು ಪೂಂಗೊಥೈ ಅವರ ಮನವೊಲಿಸಿ ಮುಂದುವರೆಯಲು ಹೇಳಿತ್ತು. ಆದರೆ, ಈಗ ದೌರ್ಜನ್ಯ ಹೆಚ್ಚಾಗಿರುವ ಕಾರಣ ಪೂಂಗೊಥೈ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

“ಪಂಚಾಯತ್ ಅಧ್ಯಕ್ಷೆ ಪೂಂಗೊಥೈ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಅದರಲ್ಲಿ, ಅಧ್ಯಕ್ಷರು, ಅವರ ಪತಿ ಮತ್ತು ಉಪಾಧ್ಯಕ್ಷರ ನಡುವಿನ ಜಗಳದ ಆರೋಪಗಳಿವೆ. ವಿವರವಾದ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕವಷ್ಟೇ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯ” ಎಂದು ಜಿಲ್ಲಾಧಿಕಾರಿ ಡಾ. ಕೆಪಿ ಕಾರ್ತಿಕೇಯನ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾವು ಪೂಂಗೊಥೈಯನ್ನು ಸಂಪರ್ಕಿಸಿದ್ದು, ಅವರ ಪತಿ ಶಶಿಕುಮಾರ್ ಕರೆ ಸ್ವೀಕರಿಸಿ “ಆಕೆ ಖಿನ್ನತೆಗೆ ಒಳಗಾಗಿದ್ದಾಳೆ. ಮಾತನಾಡುವ ಸ್ಥಿತಿಯಲ್ಲಿ ಇಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪಂಚಾಯತ್ ಉಪಾಧ್ಯಕ್ಷ ಹಾಗೂ ಡಿಎಂಕೆ ಯೂನಿಯನ್ ಕಾರ್ಯದರ್ಶಿ ಮರಿವಣ್ಣಮುತ್ತು ಅವರು ಜಾತಿಯ ಕಾರಣಕ್ಕಾಗಿ ಪೂಂಗೊಥೈ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಆಕೆಗೆ ಕಚೇರಿಯಲ್ಲಿ ಕೂರಲು ಸರಿಯಾದ ಕುರ್ಚಿ, ಮೇಜು ಕೂಡ ನೀಡಿಲ್ಲ. ಇತ್ತೀಚೆಗೆ ಮರಿವಣ್ಣಮುತ್ತು ಅವರ ಬೆಂಬಲಿಗರೊಬ್ಬರು ಪಂಚಾಯತ್ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದರು. ನಮ್ಮ ಪಕ್ಷದ ಅಧ್ಯಕ್ಷ ಎಂಕೆ ಸ್ಟಾಲಿನ್, ಸಂಸದೆ ಕನಿಮೊಳಿ ಮತ್ತು ಪಕ್ಷದ ಜಂಟಿ ಸಂಘಟನಾ ಕಾರ್ಯದರ್ಶಿ ಅನ್ಬಗಂ ಕಲೈ ಅವರ ಬಳಿ ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ” ಎಂದು ಶಶಿಕುಮಾರ್ ವಿವರಿಸಿದ್ದಾರೆ ಎಂದು ವರದಿ ಹೇಳಿದೆ.

ಆದರೆ, ಎಲ್ಲಾ ಆರೋಪಗಳನ್ನು ಪಂಚಾಯತ್ ಉಪಾಧ್ಯಕ್ಷ ಮರಿವಣ್ಣಮುತ್ತು ನಿರಾಕರಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅವರು “ನಾನು ಕಳೆದ 25 ವರ್ಷಕ್ಕಿಂತ ಹೆಚ್ಚು ಕಾಲ ಡಿಎಂಕೆಯ ಯೂನಿಯನ್ ಕಾರ್ಯದರ್ಶಿಯಾಗಿದ್ದೇನೆ ಮತ್ತು ಎರಡು ಬಾರಿ ಪಪ್ಪಕುಡಿ ಪಂಚಾಯತ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಸಾಮಾಜಿಕ ನ್ಯಾಯದ ತತ್ವವನ್ನು ಅನುಸರಿಸುತ್ತೇನೆ. ಪೂಂಗೊಥೈ ಅಥವಾ ಯಾರನ್ನೂ ಅವರ ಜಾತಿಯ ಆಧಾರದ ಮೇಲೆ ಕೆಟ್ಟದಾಗಿ ನಡೆಸಿಕೊಂಡಿಲ್ಲ” ಎಂದಿದ್ದಾರೆ.

“ಕೌನ್ಸಿಲರ್‌ಗಳು ಯಾವುದೇ ಆರ್ಥಿಕ ಪ್ರತಿಫಲವನ್ನು ನಿರೀಕ್ಷಿಸದೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಆದರೆ, ಅವರ ಪತಿ ಅವರ ಅಧಿಕೃತ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಕೆಲವು ಕೈಗಾರಿಕೆಗಳಿಂದ ಹಣಕ್ಕಾಗಿಯೂ ಬೇಡಿಕೆ ಇಟ್ಟಿದ್ದರು. ನಾನು ಅವರ ಕ್ರಮವನ್ನು ವಿರೋಧಿಸಿದ್ದರಿಂದ ಅವರು ಈಗ ನನ್ನ ವಿರುದ್ಧ ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ” ಎಂದು ಮರಿವಣ್ಣಮುತ್ತು ಹೇಳಿದ್ದಾರೆ.

ಎರಡು ವಾರದೊಳಗೆ ಎರಡು ಪ್ರಕರಣ :

ಕಳೆದ ಎರಡು ವಾರಗಳಲ್ಲಿ ತಮಿಳುನಾಡಿ ಪಂಚಾಯತ್ ಅಧ್ಯಕ್ಷರೊಬ್ಬರು ಜಾತಿ ದೌರ್ಜನ್ಯ ಆರೋಪದ ಮಾಡಿದ ಎರಡನೇ ಪ್ರಕರಣ ಇದಾಗಿದೆ.

ಅಕ್ಟೋಬರ್ 3ರಂದು ವಿಲ್ಲುಪುರಂ ಜಿಲ್ಲೆ ಗಿಂಗೀ ತಾಲೂಕಿನ ಅಣಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ಅವರು, ಅದೇ ಗ್ರಾ.ಪಂ ಉಪಾಧ್ಯಕ್ಷೆ ಚಿತ್ರಾ ಗುಣಶೇಖರನ್ ಮತ್ತು ಆಕೆಯ ಪತಿ ಸ್ಥಳೀಯ ಡಿಎಂಕೆ ಶಾಖಾ ಕಾರ್ಯದರ್ಶಿ ಗುಣಶೇಖರನ್‌ ಅವರ ವಿರುದ್ದ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಆರೋಪ ಮಾಡಿದ್ದರು.

ಆ ಕುರಿತ ವರದಿ ಇಲ್ಲಿದೆ- ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...