ಸಿಎಎ ವಿರುದ್ಧದ ಪ್ರತಿಭಟನಾಕಾರರ ಮೇಲಿನ 1500 ಪ್ರಕರಣ ಕೈಬಿಟ್ಟ ತಮಿಳುನಾಡು ಸಿಎಂ

ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದವರ ವಿರುದ್ಧದ ಪ್ರಕರಣಗಳು ಮತ್ತು ಸಿಎಎ ವಿರುದ್ಧದ ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಕೈಬಿಟ್ಟಿದ್ದೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ.

ಶುಕ್ರವಾರ ತೆನ್‌ಕಾಸಿಯ ಕಡಯನಲ್ಲೂರಿನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪಳನಿಸ್ವಾಮಿ, “ಮಾರ್ಚ್‌ 25, 2020 ರಂದು ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿದಾಗಿನಿಂದ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ತಮಿಳುನಾಡು ಸಾರ್ವಜನಿಕ ಆರೋಗ್ಯ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಸುಮಾರು 10 ಲಕ್ಷ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ” ಎಂದು ಹೇಳಿದರು.

“ಲಾಕ್‌ಡೌನ್ ನಿಯಮಗಳನ್ನು ಕಾರ್ಯಗತಗೊಳಿಸಲು, ಪೊಲೀಸ್ ಸಿಬ್ಬಂದಿ ಚೆಕ್ ಪೋಸ್ಟ್‌ಗಳನ್ನು ಹಾಕಿದ್ದರು. ಜೊತೆಗೆ ರಾಜ್ಯದಾದ್ಯಂತ ವಾಹನ-ಪರಿಶೀಲನೆ ಮಾಡಿದ್ದರು. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದವರು, ವದಂತಿಗಳು ಮತ್ತು ಸುಳ್ಳು ಸಂದೇಶಗಳನ್ನು ಹರಡಿದವರ ವಿರುದ್ಧ ಅವರು ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ. ನಿರ್ದಿಷ್ಟ ಅಪರಾಧಗಳಲ್ಲಿ ಭಾಗಿಯಾದವರ, ಕಾನೂನುಬಾಹಿರವಾಗಿ ಇ-ಪಾಸ್ ಪಡೆದುಕೊಂಡವರ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಪಡಿಸಿದವರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹೊರತುಪಡಿಸಿ, ಇತರ ಎಲ್ಲ ಪ್ರಕರಣಗಳನ್ನು ಕೈಬಿಡಲಾಗುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪಂಜಾಬ್ ಚುನಾವಣೆ – ಬಿಜೆಪಿಗಿಂತ ಹೆಚ್ಚು ಮತ ಪಡೆದ NOTA

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ವಿರುದ್ಧ ದಾಖಲಾದ ಪ್ರಕರಣಗಳನ್ನೂ ತಮ್ಮ ಸರ್ಕಾರ ಕೈಬಿಟ್ಟಿದೆ ಎಂದು ಮುಖ್ಯಮಂತ್ರಿ ಹೇಳಿದರು.

“ಸಿಎಎ ಅನ್ನು 2019 ರಲ್ಲಿ ಅಂಗೀಕರಿಸಲಾಯಿತು. ಈ ಕಾಯ್ದೆಯನ್ನು ವಿರೋಧಿಸಿ, ಕೆಲವು ಸಂಘಟನೆಗಳ ಜನರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ವಿರುದ್ಧ ತಮಿಳುನಾಡು ಪೊಲೀಸರು ಸುಮಾರು 1500 ಪ್ರಕರಣಗಳನ್ನು ದಾಖಲಿಸಿದ್ದಾರೆ. ನಿರ್ದಿಷ್ಟ ಅಪರಾಧಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಪಡಿಸಿದವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಪ್ರಕರಣಗಳನ್ನು ಸರ್ಕಾರ ಕೈಬಿಟ್ಟಿದೆ” ಎಂದು ಅವರು ಹೇಳಿದರು.

ಇವುಗಳ ಹೊರತಾಗಿ, ಕುಡಂಕುಳಂ ಪರಮಾಣು ವಿದ್ಯುತ್ ಸ್ಥಾವರ ಯೋಜನೆಯ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ತಮ್ಮ ಸರ್ಕಾರ ಯೋಚಿಸಿರುವುದಾಗಿ ಪಳನಿಸ್ವಾಮಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ‘2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ…!’ – ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್ ಬಿದರಿ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here