Homeಮುಖಪುಟ‘ತೂತುಕುಡಿ ಹತ್ಯಾಕಾಂಡ’ ಸಂತ್ರಸ್ತರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಕ ಮಾಡಿದ ತಮಿಳುನಾಡು ಸಿಎಂ

‘ತೂತುಕುಡಿ ಹತ್ಯಾಕಾಂಡ’ ಸಂತ್ರಸ್ತರನ್ನು ಸರ್ಕಾರಿ ಉದ್ಯೋಗಕ್ಕೆ ನೇಮಕ ಮಾಡಿದ ತಮಿಳುನಾಡು ಸಿಎಂ

- Advertisement -
- Advertisement -

2018 ಮೇ ತಿಂಗಳಲ್ಲಿ ನಡೆದ “ತೂತುಕುಡಿ ಹತ್ಯಾಕಾಂಡ”ದಲ್ಲಿ ಸಾವನ್ನಪ್ಪಿದ ಮತ್ತು ತೀವ್ರವಾಗಿ ಗಾಯಗೊಂಡವರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿಯ ಆದೇಶಗಳನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಮಧುರೈನಲ್ಲಿ ಹಸ್ತಾಂತರಿಸಿದರು.

ಸಬೆಯ ಅಧ್ಯಕ್ಷತೆ ವಹಿಸಿದ್ದ ಸ್ಟಾಲಿನ್, ಮಧುರೈನಲ್ಲಿ ಕೊರೊನಾ ಹರಡುವುದನ್ನು ತಡೆಯಲು ಮತ್ತು ತಡೆಗಟ್ಟಲು ಜಾರಿಗೆ ತರಲಾಗುತ್ತಿರುವ ಕ್ರಮಗಳನ್ನು ಪರಿಶೀಲಿಸಿದರು. ನಂತರ, ಸಂತ್ರಸ್ಥರ ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ನೇಮಕಾತಿ ಆದೇಶಗಳನ್ನು ಹೊರಡಿಸಿದರು.

ಈ ಪೈಕಿ 16 ಮಂದಿಗೆ ಕಿರಿಯ ಸಹಾಯಕ ಹುದ್ದೆ ಮತ್ತು ಒಬ್ಬರು ಜೀಪ್ ಚಾಲಕರಾಗಿ ನೇಮಕಗೊಂಡರು. ನೇಮಕಗೊಂಡವರು ತೂತುಕುಡಿ ಜಿಲ್ಲೆಯ ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಈ ನಡುವೆ, ಸ್ಟಾಲಿನ್‌ ಅವರ ತಂದೆ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಪ್ರಾರಂಭಿಸಿದ ‘ಮುಖ್ಯಮಂತ್ರಿ ಆರೋಗ್ಯ ವಿಮಾ ಯೋಜನೆ’ಯಲ್ಲಿ 11 ವರ್ಷಗಳ ಕಾಲ ಕೆಲಸ ಮಾಡುತ್ತಿರುವುದರಿಂದ ತಮ್ಮ ಹುದ್ದೆಗಳನ್ನು ಖಾಯಂಗೊಳಿಸಬೇಕೆಂದು ಕೋರಿ ಆರೋಗ್ಯ ವಿಮಾ ನೌಕರರ ಕಲ್ಯಾಣ ಸಂಘದ ಸದಸ್ಯರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇದರ ನಂತರ ಸ್ಟಾಲಿನ್ ಅವರು ತೊಪ್ಪೂರು ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿನ ಹೆಚ್ಚುವರಿ ಆಮ್ಲಜನಕ ಹಾಸಿಗೆ ಸೌಲಭ್ಯವನ್ನು ಉದ್ಘಾಟಿಸಿದರು.

‘ತೂತುಕುಡಿ ಹತ್ಯಾಕಾಂಡ’ ಎಂದೆ ಕರೆಯಲ್ಪಡುವ ಸ್ಟರ್ಲೈಟ್ ಪ್ರತಿಭಟನಾಕಾರರ ಮೇಲಿನ ಗುಂಡಿನ ದಾಳಿಯು 2018 ರ ಮೇ 22 ಮತ್ತು 23 ರಂದು ತಮಿಳುನಾಡಿನ ತೂತುಕುಡಿಯಲ್ಲಿ ನಡೆಯಿತು. ತೂತುಕುಡಿ ಪಟ್ಟಣದಲ್ಲಿ ಸ್ಟರ್ಲೈಟ್ ಕಾರ್ಪೊರೇಷನ್ ನಡೆಸುತ್ತಿರುವ ತಾಮ್ರ ಕರಗಿಸುವ ಘಟಕವನ್ನು ವಿಸ್ತರಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಈ ಹಿಂಸಾಚಾರ ನಡೆಯಿತು. ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿ, 13 ಜನರನ್ನು ಕೊಂದು ಹಾಕಿದ್ದರು. ಘಟನೆಯಲ್ಲಿ 102 ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ವೇದಾಂತ ಸ್ಟೆರ್‌‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...