Homeಕೊರೊನಾತಮಿಳುನಾಡು: 50 ಸಾವಿರ ಕೇಂದ್ರಗಳಲ್ಲಿ 18 ನೇ ಮೆಗಾ ಲಸಿಕಾ ಶಿಬಿರ

ತಮಿಳುನಾಡು: 50 ಸಾವಿರ ಕೇಂದ್ರಗಳಲ್ಲಿ 18 ನೇ ಮೆಗಾ ಲಸಿಕಾ ಶಿಬಿರ

- Advertisement -
- Advertisement -

ತಮಿಳುನಾಡಿನಲ್ಲಿ 18ನೇ ಕೋವಿಡ್ ಮೆಗಾ ಲಸಿಕಾ ಶಿಬಿರವು ಪ್ರಸ್ತುತ 50,000 ಕೇಂದ್ರಗಳಲ್ಲಿ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರ ಶನಿವಾರ ತಿಳಿಸಿದೆ. ರಾಜ್ಯವು ಕಳೆದ ವರ್ಷ ಸೆಪ್ಟೆಂಬರ್‌ನಿಂದ ಪ್ರತಿ ಭಾನುವಾರದಂದು ಇಂತಹ ಶಿಬಿರಗಳನ್ನು ಸರ್ಕಾರ ಆಯೋಜಿಸುತ್ತಿದೆ. ಈ ಬಾರಿ ಭಾನುವಾರ ಲಾಕ್‌ಡೌನ್ ಕಾರಣಕ್ಕೆ ಅದನ್ನು ಶನಿವಾರ ನಡೆಸಲಾಗುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಆರೋಗ್ಯ ಸಚಿವ ಮಾ ಸುಬ್ರಮಣಿಯನ್, “ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಸೂಚನೆಯ ಮೇರೆಗೆ, 18 ನೇ ಮೆಗಾ ಲಸಿಕೆ ಶಿಬಿರವು ಇಂದು 50,000 ಕೇಂದ್ರಗಳಲ್ಲಿ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಚೆನ್ನೈನ ವೆಲಾಚೇರಿ ವಿಧಾನಸಭಾ ಕ್ಷೇತ್ರದ ಇಂದ್ರ ನಗರದಲ್ಲಿನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ರಾಜ್ಯದಲ್ಲಿ ಇದುವರೆಗೆ 87,254,887 ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಒಟ್ಟು 87,254,887 ಡೋಸ್‌ಗಳಲ್ಲಿ 52,234,274 ಫಸ್ಟ್ ಡೋಸ್‌ಗಳು ಮತ್ತು 35,020,613 ಎರಡು ಡೋಸ್‌ ಲಸಿಕೆ ನೀಡಲಾಗಿದೆ.

ರಾಜ್ಯದಲ್ಲಿ ಪ್ರಸ್ತುತ ರಾತ್ರಿ 10 ರಿಂದ ಬೆಳಿಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ. ಭಾನುವಾರದಂದು ಸಂಪೂರ್ಣ ಲಾಕ್‌ಡೌನ್‌ ವಿಧಿಸಲಾಗಿದೆ. 1 ರಿಂದ 9 ನೇ ತರಗತಿಗಳಿಗೆ ಶಾಲೆಗಳನ್ನು ಮುಚ್ಚಲಾಗಿದ್ದು, ವಾಣಿಜ್ಯ ಸಂಸ್ಥೆಗಳು, ಸಾರ್ವಜನಿಕ ಸಾರಿಗೆಯು 50% ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ.

ಶುಕ್ರವಾರ, ರಾಜ್ಯದಲ್ಲಿ 8,981 ಹೊಸ ಕೋವಿಡ್ ಪ್ರಕರಣಗಳು ಮತ್ತು ಎಂಟು ಕೊರೊನಾ ಸಂಬಂಧಿತ ಸಾವುಗಳು ವರದಿಯಾಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ 121 ಒಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿಯಾಗಿದ್ದವು ಅವರೆಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


ಇದನ್ನೂ ಓದಿ: ಜಮ್ಮು ಕಾಶ್ಮೀರದ ನಾಲ್ವರು ಮಾಜಿ ಸಿಎಂಗಳಿಗಿದ್ದ ವಿಶೇಷ ಭದ್ರತಾ ಗುಂಪು (SSG) ರಕ್ಷಣೆ ಹಿಂಪಡೆದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...