Homeಮುಖಪುಟಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಪಂಚಾಯಿತಿ ಮಂಡಳಿಯ ಎಲ್ಲಾ ಸಭೆಗಳಲ್ಲಿಯೂ ಉಪಾಧ್ಯಕ್ಷರು, ಪರಿಶಿಷ್ಠ ಜಾತಿಗೆ ಸೇರಿದ ನನ್ನನ್ನು ನೆಲದ ಮೇಲೆಯೇ ಕುಳಿತುಕೊಳ್ಳುವಂತೆ ಮಾಡಿದ್ದಾರೆ’ ಎಂದು  ಗ್ರಾಮಪಂಚಾಯಿತಿ ಅಧ್ಯಕ್ಷೆ ಎಸ್.ರಾಜೇಶ್ವರಿ ಆರೋಪಿಸಿದ್ದಾರೆ.

- Advertisement -
- Advertisement -

ತಮಿಳುನಾಡಿನ ಕಡಲೂರಿನಲ್ಲಿ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನೇ ಜಾತಿ ಆಧಾರದ ಮೇಲೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಪಂಚಾಯಿತಿಯ ಇನ್ನಿತರ ಸದಸ್ಯರಿಗೆ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ.

ಕಡಲೂರಿನ ತೆರ್ಕುತಿಟ್ಟೈ ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆಳವರ್ಗಕ್ಕೆ ಸೇರಿದ ಹಿನ್ನಲೆಯಲ್ಲಿ ಸದಸ್ಯರು ಅವರೊಟ್ಟಿಗೆ ಈ ರೀತಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ’ಪಂಚಾಯಿತಿ ಮಂಡಳಿಯ ಎಲ್ಲಾ ಸಭೆಗಳಲ್ಲಿಯೂ ಉಪಾಧ್ಯಕ್ಷರು, ಪರಿಶಿಷ್ಠ ಜಾತಿಗೆ ಸೇರಿದ ನನ್ನನ್ನು ನೆಲದ ಮೇಲೆಯೇ ಕುಳಿತುಕೊಳ್ಳುವಂತೆ ಮಾಡಿದ್ದಾರೆ’ ಎಂದು  ಗ್ರಾಮಪಂಚಾಯಿತಿ ಅಧ್ಯಕ್ಷೆ ಎಸ್.ರಾಜೇಶ್ವರಿ ಆರೋಪಿಸಿದ್ದಾರೆ.

ಆಗಸ್ಟ್‌ ತಿಂಗಳಲ್ಲಿ ನಡೆದಿದೆ ಎನ್ನಲಾಗುತ್ತಿರುವ ಈ ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಪಂಚಾಯಿತಿ ಉಪಾಧ್ಯಕ್ಷರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಪಂಚಾಯತ್ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಗಿದೆ. ಪಂಚಾಯಿತಿಯಲ್ಲಿ ನಡೆಯುತ್ತಿರುವ ಈ ಘಟನೆಯನ್ನು ನಮ್ಮ ಗಮನಕ್ಕೆ ತರುವಲ್ಲಿ ಅಲ್ಲಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವಿಫಲರಾಗಿದ್ದಾರೆ. ಈ ಹಿನ್ನಲೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಕಡಲೂರು ಜಿಲ್ಲಾಧಿಕಾರಿ ಚಂದ್ರಶೇಖರ್​ ಶಖಾಮುರಿ ತಿಳಿಸಿದ್ದಾರೆ. ಈ ಕುರಿತು ತನಿಖೆಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಗ್ರಾಮಪಂಚಾಯಿತಿ ಅಧ್ಯಕ್ಷೆ ಎಸ್.ರಾಜೇಶ್ವರಿ ’ನನ್ನ ಜಾತಿ ಆಧಾರದಿಂದ ಉಪಾಧ್ಯಕ್ಷರು ನನಗೆ ಸಭೆಯ ಅಧ್ಯಕ್ಷತೆ ವಹಿಸಲು ಬಿಡುವುದಿಲ್ಲ. ಯಾವುದೇ ಸಮಾರಂಭದಲ್ಲಿ ಧ್ವಜಾರೋಹಣಕ್ಕೂ ಅವಕಾಶ ನೀಡುವುದಿಲ್ಲ. ನನ್ನ ಬದಲಾಗಿ ಅವರ ತಂದೆಗೆ ಈ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ ರಾಜೇಶ್ವರಿ ಅಧ್ಯಕ್ಷೆ ಹುದ್ದೆಗೆ ಆಯ್ಕೆಯಾಗಿದ್ದರು. ತೆರ್ಕುತಿಟ್ಟೈ ಗ್ರಾಮವು ಸುಮಾರು 500 ಕುಟುಂಬಗಳನ್ನು ಒಳಗೊಂಡಿದೆ. ಅಲ್ಲಿ ಹೆಚ್ಚಾಗಿ ವನ್ನಿಯರು ಹಾಗೂ ಎಸ್‌ಸಿ ಸಮುದಾಯದ 100 ಕುಟುಂಬಗಳಿವೆ. ಪಂಚಾಯತಿ ಅಧ್ಯಕ್ಷ ಸ್ಥಾನವನ್ನು ಎಸ್‌ಸಿ ಸಮುದಾಯಕ್ಕೆ ಮೀಸಲಿರಿಸಲಾಗಿತ್ತು.

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ಅತುಪಕ್ಕಂ ಪಂಚಾಯತ್ ಅಧ್ಯಕ್ಷ ಅರ್ಮಿಥಾಮ್ ಕೂಡ ಇದೇ ರೀತಿಯ ಅವಮಾನ ಎದುರಿಸಬೇಕಾಗಿತ್ತು. ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜವನ್ನು ಹಾರಿಸಲು ಉಪಾಧ್ಯಕ್ಷರು ಅನುಮತಿ ನೀಡಲಿಲ್ಲ ಎಂದು ಅವರು ಆರೋಪಿಸಿದ್ದರು.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...