Homeಮುಖಪುಟತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

ತಮಿಳುನಾಡು: 6 ವರ್ಷದ ಬಾಲಕನ ಶವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟು ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಆರು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ಜನವರಿ 22 ರ ಭಾನುವಾರದಂದು ನಡೆದಿದೆ. ಮೃತ ಬಾಲಕನನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಎರಡನೇ ತರಗತಿಯ ವಿದ್ಯಾರ್ಥಿಯಾಗಿದ್ದರು ಎಂದು ವರದಿಯಾಗಿದೆ.

ಮೃತ ವಿದ್ಯಾರ್ಥಿ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ವರದಿಗಳು ತಿಳಿಸಿವೆ. ತನ್ನ ತಂದೆಯೊಂದಿಗೆ ಕುಡಿಯುವ ನೀರಿನ ಕ್ಯಾನ್‌ಗಳನ್ನು ತುಂಬಲು ಪ್ರದೀಪ್ ತೆರಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕನ ತಂದೆ ಮಣಿಕಂಡನ್ (35) ಖಾಸಗಿ ಕಂಪನಿಯೊಂದರಲ್ಲಿ ಲಾರಿ ಚಾಲಕನಾಗಿದ್ದು, ತಾಯಿ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಾರೆ. ಪಾಲೂರು ಸಮೀಪದ ವೆಂಕಟಾಪುರ ಗ್ರಾಮದಲ್ಲಿ ಕುಟುಂಬ ವಾಸವಾಗಿದೆ. ಮಣಿಕಂಡನ್ ನೀರು ಸಂಗ್ರಹಿಸಲು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ್ದು, ಈ ವೇಳೆ ಪ್ರದೀಪ್ ಜತೆಗಿದ್ದರು. ಮಣಿಕಂಡನ್ ಕ್ಯಾನ್‌ಗಳಿಗೆ ನೀರಿನ್ನು ತುಂಬಿಸುತ್ತಿದ್ದಾಗ ಪ್ರದೀಪ್ ಆಟವಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಾಗಿ ಸ್ವಲ್ಪ ಸಮಯದ ನಂತರ ಪ್ರದೀಪ್ ನಾಪತ್ತೆಯಾಗಿದ್ದು, ಮಣಿಕಂಡನ್ ಇತರರ ಸಹಾಯದಿಂದ ಆತನನ್ನು ಹುಡುಕಲು ಪ್ರಾರಂಭಿಸಿದ್ದರು. ಆದರೆ ಪ್ರದೀಪ್ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಕಚೇರಿ ಆವರಣದಲ್ಲಿ ಮಣಿಕಂಡನ್‌ ತೆರೆದ ಸೆಪ್ಟಿಕ್ ಟ್ಯಾಂಕ್ ಅನ್ನು ಕಂಡು ಒಳಗೆ ನೋಡಿದಾಗ ಅಲ್ಲಿ ಮಗನನ್ನು ಪತ್ತೆ ಹಚ್ಚಿದ್ದರು.

ನಂತರ ಇತರರ ಸಹಾಯದಿಂದ ಮಣಿಕಂಡನ್ ಪ್ರದೀಪ್‌ನನ್ನು ಟ್ಯಾಂಕ್‌ನಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

“ಸೆಪ್ಟಿಕ್ ಟ್ಯಾಂಕ್ ಬಾಯಿ ಕಿರಿದಾಗಿದೆ. ಪ್ರದೀಪ್ ಆಕಸ್ಮಿಕವಾಗಿ ಟ್ಯಾಂಕ್ ಒಳಗೆ ಬಿದ್ದು ತಲೆಗೆ ಪೆಟ್ಟು ಬಿದ್ದು ಪ್ರಜ್ಞೆ ತಪ್ಪಿರಬಹುದು ಎಂದು ಶಂಕಿಸಿದ್ದೇವೆ. ಪ್ರದೀಪ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ ಪೊಲೀಸರು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿಯನ್ನು ಕಾರ್ಯದರ್ಶಿ ರೇಣುಕಾ ಮತ್ತು ಪಂಪ್ ಆಪರೇಟರ್ ಗುಣಶೇಖರನ್ ನಿರ್ವಹಿಸುತ್ತಿದ್ದಾರೆ. ಘಟನೆಯ ಕುರಿತು ಚೆಂಗಲ್ಪಟ್ಟು ಜಿಲ್ಲಾಧಿಕಾರಿ ಎ.ಆರ್. ರಾಹುಲ್ ನಾಥ್‌ ಅವರಿಗೆ ಮಾಹಿತಿ ನೀಡಲಾಗಿದ್ದು, ರೇಣುಕಾ ಮತ್ತು ಗುಣಶೇಖರನ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಾಲೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿರುವ ವರದಿಗಳು ಲಭ್ಯವಾಗಿಲ್ಲ.

ಇದನ್ನೂ ಓದಿ: ತೆಲಂಗಾಣ: 10ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...