Homeಮುಖಪುಟತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಟಿ-ಶರ್ಟ್ ವಿರುದ್ಧ ಕೋರ್ಟ್‌ಗೆ ಅರ್ಜಿ!

ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಟಿ-ಶರ್ಟ್ ವಿರುದ್ಧ ಕೋರ್ಟ್‌ಗೆ ಅರ್ಜಿ!

- Advertisement -
- Advertisement -

ತಮಿಳುನಾಡು ಸಚಿವರು ಧರಿಸುವ ಬಟ್ಟೆಯ ಬಗ್ಗೆ ಯಾವುದಾದರೂ ನಿಯಮಗಳು ಮತ್ತು ನಿಬಂಧನೆಗಳು ಅಸ್ತಿತ್ವದಲ್ಲಿವೆಯೇ ಎಂದು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ತಮಿಳುನಾಡಿನ ಅಡ್ವೊಕೇಟ್ ಜನರಲ್‌ಗೆ ಕೇಳಿದ್ದು, ಈ ಬಗ್ಗೆ ಉತ್ತರಿಸಲು ಒಂದು ವಾರ ಕಾಲಾವಕಾಶ ನೀಡಿದೆ. ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಅವರು ಟಿ ಶರ್ಟ್‌ ಹಾಕಿಕೊಂಡು ಬರುವುದಕ್ಕೆ ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ನಡೆಸುತ್ತಿದೆ.

ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಕ್ಯಾಶುಯಲ್ ಆಗಿ ಟಿ ಶರ್ಟ್ ಧರಿಸಿ ಬರುವುದರ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿಗಳಾದ ಡಿ ಕೃಷ್ಣಕುಮಾರ್ ಮತ್ತು ಪಿಬಿ ಬಾಲಾಜಿ ಅವರ ಪೀಠ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

 

ವಿಚಾರಣಾ ಪೀಠವು ಇದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ನಿಬಂಧನೆಗಳು ಯಾವುದಾದರೂ ಇದ್ದರೆ, ಅವುಗಳನ್ನು ಮುಂದಿನ ವಿಚಾರಣೆಯ ಸಮಯದಲ್ಲಿ ಪೀಠದ ಮುಂದೆ ಇರಿಸುವಂತೆ ಅರ್ಜಿದಾರರಾದ ಎಂ. ಸತ್ಯ ಕುಮಾರ್ ಮತ್ತು ತಮಿಳುನಾಡು ಅಡ್ವೊಕೇಟ್ ಜನರಲ್ ಪಿ ಎಸ್ ರಾಮನ್ ಅವರಿಗೆ ಸೂಚಿಸಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿಯೂ ಕೂಡಾ ಉಪಮುಖ್ಯಮಂತ್ರಿ ಡಿಎಂಕೆಯ ಚುನಾವಣಾ ಚಿಹ್ನೆ ‘ಉದಯ ಸೂರ್ಯ’ ಟಿ-ಶರ್ಟ್‌ಗಳನ್ನು ಧರಿಸುತ್ತಾರೆ ಎಂದು ದೂರಿ ಚೆನ್ನೈನ ಸೆಲೈಯೂರ್‌ನ ವಕೀಲ ಸತ್ಯಾ ಕುಮಾರ್ ಅವರು ಪ್ರಕರಣ ದಾಖಲಿಸಿದ್ದರು.

ಜೂನ್ 1, 2019 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ (GO) ಬದ್ಧವಾಗಿರಲು ಉದಯನಿಧಿ ಸ್ಟಾಲಿನ್ ಅವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಈ ಆದೇಶವು ಸರ್ಕಾರಿ ನೌಕರರು ಅನುಸರಿಸಬೇಕಾದ ಡ್ರೆಸ್ ಕೋಡ್ ಅನ್ನು ನಿಗದಿಪಡಿಸಿತ್ತು. ಸರ್ಕಾರದ ಈ ಆದೇಶ ಸರ್ಕಾರಿ ನೌಕರರಿಗೆ ಸಂಬಂಧಿಸಿದ್ದಾಗಿದ್ದು, ಸಾರ್ವಜನಿಕ ಸೇವಕರಾದ ಸಚಿವರಿಗಲ್ಲ ಎಂದು ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಲ್ಲದೆ, 2019 ರ ಸರ್ಕಾರಿ ಆದೇಶವು ಕ್ಯಾಶುಯಲ್ ಉಡುಪನ್ನು “ತಪ್ಪಿಸಬೇಕು” ಎಂದು ಮಾತ್ರ ಹೇಳುತ್ತದೆಯೆ ವಿನಃ, ಅದನ್ನು ಸಂಪೂರ್ಣವಾಗಿ ನಿಷೇಧಿಸುವುದಿಲ್ಲ ಎಂದು ಅವರು ನ್ಯಾಯಾಲಯದ ಗಮನಸೆಳೆದಿದ್ದಾರೆ.

ತಮಗೆ ಆರಾಮದಾಯಕವಾಗಿರುವ ಕಾರಣಕ್ಕೆ ಉಪಮುಖ್ಯಮಂತ್ರಿ ಟಿ-ಶರ್ಟ್‌ಗಳನ್ನು ಧರಿಸುತ್ತಾರೆ ಎಂದು ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಹೇಳಿದ್ದಾರೆ. “ಅಲ್ಲದೆ, ಅನೇಕ ಉನ್ನತ ಜಾಗತಿಕ ಕಾರ್ಪೊರೇಟ್ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕ ಕಾರ್ಯಕ್ರಮಗಳಿಗೆ ಟಿ-ಶರ್ಟ್‌ಗಳನ್ನು ಧರಿಸುತ್ತಾರೆ. ಆದ್ದರಿಂದ, ಈ ಉಡುಗೆಯನ್ನು ಸೂಕ್ತವಲ್ಲ ಎಂದು ಪರಿಗಣಿಸಲು ಆಗುವುದಿಲ್ಲ” ಎಂದು ಅವರು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...