Homeರಾಜಕೀಯತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

- Advertisement -
- Advertisement -

ದ್ರಾವಿಡ ಮುನ್ನೇತ್ರ ಕಳಗಂ ಸರ್ಕಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಭಾರತದ ರಾಷ್ಟ್ರಪತಿಗಳಿಗೆ ಸಲ್ಲಿಸಲಾದ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ರಾಜ್ಯದ ಎಲ್ಲಾ ಪಕ್ಷಗಳಲ್ಲಿರುವ ‘ಸಮಾನ ಮನಸ್ಸಿನ’ ಸಂಸದರನ್ನು ಒತ್ತಾಯಿಸಿದೆ.

ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಸಂಸತ್ತಿನ ನಾಯಕ ಟಿ.ಆರ್.ಬಾಲು ಅವರು ಗುರುವಾರದೊಳಗೆ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಜ್ಞಾಪಕ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದ್ದು, ಇತರೆ ಪಕ್ಷಗಳು ಈ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಯೊಂದು ದೇಶವೂ ಒಂದಲ್ಲ ಒಂದು ಧರ್ಮದ ಮೇಲೆ ಅವಲಂಬಿತವಾಗಿದ್ದು, ಭಾರತ ಕೂಡಾ ಇದಕ್ಕೆ ಹೊರತಾಗಿಲ್ಲ ಎಂಬ ರಾಜ್ಯಪಾಲ ರವಿ ಅವರ ಇತ್ತೀಚಿನ ಹೇಳಿಕೆಯನ್ನು ಟೀಕಿಸಿ 11 ರಾಜಕೀಯ ಪಕ್ಷಗಳು ಜಂಟಿ ಹೇಳಿಕೆ ನೀಡಿದ ಎರಡು ದಿನಗಳ ನಂತರ ದ್ರಾವಿಡ ಮುನ್ನೇತ್ರ ಕಳಗಂ ಇತರೆ ಪಕ್ಷಗಳ ಸಂಸದರನ್ನು ವಿನಂತಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉಚಿತ ಕೊಡುಗೆ ಚರ್ಚೆ; ಅಭಿವೃದ್ಧಿ ಜಿಡಿಪಿ ಮಾತ್ರವಾದಾಗ ಅನ್‌ಪ್ರೊಡಕ್ಟಿವ್ ಆಗುವ ಸವಲತ್ತುಗಳು

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಆರ್.ಎನ್. ರವಿ ಅವರು ತಮಿಳುನಾಡು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದರ ನಂತರ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಸರ್ಕಾರದೊಂದಿಗೆ ಸಂಘರ್ಷದಲ್ಲೆ ನಡೆಸುತ್ತಿದ್ದಾರೆ.

ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಪರೀಕ್ಷೆಯನ್ನು ತಮಿಳುನಾಡು ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ಫೆಬ್ರವರಿಯಲ್ಲಿ ಮರುಪರಿಶೀಲನೆಗಾಗಿ ಅಸೆಂಬ್ಲಿಗೆ ಹಿಂದಿರುಗಿಸಿದ್ದರು. 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳುವಂತೆ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು, ಕೇರಳ; ದನಿಗೂಡಿಸಿದ ಬಂಗಾಳ

NEET ನ ಪ್ರಶ್ನೆ ಪತ್ರಿಕೆಯು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಪಠ್ಯಕ್ರಮವನ್ನು ಆಧರಿಸಿದ್ದು, ಇದು ತಮಿಳುನಾಡು ರಾಜ್ಯ ಮಂಡಳಿಯ ಶೈಕ್ಷಣಿಕ ಪಠ್ಯಕ್ರಮಕ್ಕಿಂತ ಭಿನ್ನವಾಗಿದೆ. ನೀಟ್‌ ಪರೀಕ್ಷೆಯು ರಾಜ್ಯ ಮಂಡಳಿಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಮಾಡುತ್ತದೆ ಎಂಬ ಕಾರಣಕ್ಕಾಗಿ ತಮಿಳುನಾಡು ಈ ಪರೀಕ್ಷೆಯನ್ನು ವಿರೋಧಿಸುತ್ತಿದೆ.

ಜೂನ್‌ ತಿಂಗಳಲ್ಲಿ, “ಸನಾತನ ಧರ್ಮ ವಿವಿಧತೆಯಲ್ಲಿ ಏಕತೆಯನ್ನು ಎತ್ತಿಹಿಡಿಯುತ್ತದೆ” ಎಂದು ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ರವಿ ಅವರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರ್ಬಲಗೊಳಿಸಿದ್ದಾರೆ ಎಂದು ದ್ರಾವಿಡ ಮುನ್ನೇತ್ರ ಕಳಗಂ ಆರೋಪಿಸಿತ್ತು.

ಆಗಸ್ಟ್‌ನಲ್ಲಿ, ಹಿಂಸಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಬಂದೂಕು ಬಳಸುವವ ವಿರುದ್ಧ ಬಂದೂಕಿನಿಂದಲೆ ವ್ಯವಹರಿಸಬೇಕು ಎಂದು ಅವರು ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

ತಮಿಳುನಾಡಿಗೆ ರಾಜ್ಯಪಾಲರಾಗಿ ಆಗಮಿಸುವ ಮೊದಲು, ರವಿ ಅವರು ನಾಗಾಲ್ಯಾಂಡ್‌ನ ರಾಜ್ಯಪಾಲರಾಗಿದ್ದರು ಮತ್ತು ನಾಗಾ ಶಾಂತಿ ಮಾತುಕತೆಗೆ ಕೇಂದ್ರದ ಸಂವಾದಕರಾಗಿ ಕಾರ್ಯನಿರ್ವಹಿಸಿದ್ದರು.  2020 ರಲ್ಲಿ ಕೇಂದ್ರ ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಲಿಮ್ (ಇಸಾಕ್-ಮುಯಿವಾ) ನಡುವೆ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡು, ಸಂವಾದಕರಾಗಿದ್ದ ರವಿಯನ್ನು ತೆಗೆದುಹಾಕಬೇಕೆಂದು ಒತ್ತಾಯಿಸಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...