Homeಮುಖಪುಟತಮಿಳುನಾಡು: ಹೃದಯಾಘಾತದಿಂದ ಸಾಯುವ ಮೊದಲು 20 ಮಕ್ಕಳನ್ನು ಉಳಿಸಿದ ಚಾಲಕ

ತಮಿಳುನಾಡು: ಹೃದಯಾಘಾತದಿಂದ ಸಾಯುವ ಮೊದಲು 20 ಮಕ್ಕಳನ್ನು ಉಳಿಸಿದ ಚಾಲಕ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ 49 ವರ್ಷದ ಸ್ಕೂಲ್ ವ್ಯಾನ್ ಚಾಲಕನೊಬ್ಬ ವಾಹನವನ್ನು ರಸ್ತೆ ಬದಿಯಲ್ಲಿ ಸುರಕ್ಷಿತವಾಗಿ ನಿಲ್ಲಿಸುವ ಮೂಲಕ, ಸುಮಾರು 20 ವಿದ್ಯಾರ್ಥಿಗಳ ಪ್ರಾಣ ಉಳಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಚಾಲಕ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿಗೆ ಅವರು ಬರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಚಾಲಕ ಸೆಮಲಯ್ಯಪ್ಪನ್ ಶಾಲಾ ಮಕ್ಕಳೊಂದಿಗೆ ಚಾಲಕನ ಸೀಟಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಳಿತಿರುವ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಳಕೆದಾರರು ಚಾಲಕನ ಕೆಚ್ಚೆದೆಯ ಕೃತ್ಯಕ್ಕೆ ಸೆಲ್ಯೂಟ್ ಮಾಡಿದ್ದಾರೆ.

ಜುಲೈ 24ರ ಬುಧವಾರದಂದು ಈ ಘಟನೆ ನಡೆದಿದ್ದು, ವೆಲ್ಲಕೋಯಿಲ್‌ನ ಎಎನ್‌ವಿ ಮೆಟ್ರಿಕ್ ಶಾಲೆಯಿಂದ ವಿದ್ಯಾರ್ಥಿಗಳನ್ನು ಅವರ ಮನೆಗೆ ಬಿಡಲು ಸೆಮಲಯ್ಯಪ್ಪನ್ ಕರೆದುಕೊಂಡು ಹೋಗಿದ್ದರು. ಎದೆನೋವು ಕಾಣಿಸಿಕೊಂಡಿದ್ದು, ಕಷ್ಟಪಟ್ಟು ಸುರಕ್ಷಿತವಾಗಿ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದ್ದಾರೆ.

ವಿಶೇಷವೆಂದರೆ, ಅವರ ಪತ್ನಿ ಕೂಡ ಅದೇ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದು, ಅವರು ಕುಸಿದು ಬಿದ್ದಾಗ ವ್ಯಾನ್‌ನಲ್ಲಿದ್ದರು. ಸಾವಿನ ಅಂಚಿನಲ್ಲಿರುವ ಮಕ್ಕಳ ಪ್ರಾಣ ಉಳಿಸಿದ ಚಾಲಕನ ಸಾಹಸಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಅವರ ಜೀವಕ್ಕೆ ಅಪಾಯವಿದ್ದರೂ ಶಾಲೆಯ ವಿದ್ಯಾರ್ಥಿಗಳ ಅಮೂಲ್ಯ ಜೀವವನ್ನು ಉಳಿಸಿದರು. ಅವರ ಕರ್ತವ್ಯ ಪ್ರಜ್ಞೆ ಮತ್ತು ಸ್ವಯಂ ತ್ಯಾಗಕ್ಕಾಗಿ ನಾವು ಅವರನ್ನು ಅಭಿನಂದಿಸುತ್ತೇವೆ. ಅವರು ತಮ್ಮ ಮಾನವೀಯ ಕಾರ್ಯದ ಮೂಲಕ ಬದುಕುವುದನ್ನು ಮುಂದುವರಿಸುತ್ತಾರೆ” ಎಂದು ಸ್ಟಾಲಿನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸೇಮಲಯ್ಯಪ್ಪನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ. ಡಿಎಂಕೆ ಸಚಿವ ಎಂಪಿ ಸಾಮಿನಾಥನ್ ಮೃತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಶುಕ್ರವಾರ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವ್ಯಾನ್ ಚಾಲಕನಿಗೆ ಗೌರವ ಸಲ್ಲಿಸಿದರು. ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಕುಟುಂಬಸ್ಥರನ್ನು ಭೇಟಿ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ಇದನ್ನೂ ಓದಿ; ಕೇರಳ: ಮೆದುಳು ತಿನ್ನುವ ಅಮೀಬಾ ಕಾಯಿಲೆಯಿಂದ ಚೇತರಿಸಿಕೊಂಡ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...