ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ನಟಿ ಖುಷ್ಬೂ ಸುಂದರ್ ಅವರನ್ನು ಚೆನ್ನೈನ ಚೆಪಾಕ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿ ಮತ್ತು ದಿವಂಗತ ಕರುಣಾನಿಧಿಯವರ ಮೊಮ್ಮಗ ಉದಯನಿಧಿ ಸ್ಟಾಲಿನ್ ಅವರು ಚೆಪಾಕ್‌ನಿಂದ ಸ್ಪರ್ಧಿಸಲು ತಮ್ಮ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಎಂಕೆ ಭದ್ರಕೋಟೆಯಾದ ಚೆಪಾಕ್ ಕ್ಷೇತ್ರವನ್ನು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರು ಮೂರು ಬಾರಿ ಪ್ರತಿನಿಧಿಸಿದ್ದರು. ಹಾಗಾಗಿ ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿ ಉದಯಾನಿಧಿ ಸ್ಟಾಲಿನ್ ಮತ್ತು ಖುಷ್ಬೂ ನಡುವಿನ ಮುಖಾಮುಖಿ ಸ್ಪರ್ಧೆ ಇರುವ ಕಾರಣ ಈ ಕ್ಷೇತ್ರ ಹೆಚ್ಚಿನ ಗಮನ ಸೆಳೆಯಬಹುದು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ನಂತರ ಚುನಾವಣೆ ನಡೆದಾಗ 1991 ರಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿದ್ದರು. ಆಗ ಹೊರತುಪಡಿಸಿ ಉಳಿದ ಎಲ್ಲಾ ವಿಧಾನಸಭಾ ಚುನಾವಣೆಗಳಲ್ಲಿಯೂ ಇಲ್ಲಿ ಡಿಎಂಕೆ ಗೆದ್ದಿದೆ.

ಕರುಣಾನಿಧಿ ಅವರು 1996, 2001 ಮತ್ತು 2006 ರಲ್ಲಿ ಈ ಕ್ಷೇತ್ರದಿಂದ ಗೆದ್ದಿದ್ದರು. ನಂತರ ಕರುಣಾನಿಧಿ ನಿಧನರಾಗುವವರೆಗೂ ಈ ಕ್ಷೇತ್ರವನ್ನು ಡಿಎಂಕೆಯ ಜೆ ಅನ್ಬಳಗನ್ ಪ್ರತಿನಿಧಿಸುತ್ತಿದ್ದರು.

ಕಾಂಗ್ರೆಸ್ ಪಕ್ಷದಿಂದ ದಿಢೀರ್ ಅಂತ ಬಿಜೆಪಿಗೆ ಸೇರಿರುವ ಖುಷ್ಬೂ ಈ ಚುನಾವಣೆಯಲ್ಲಿ ಚೆಪಾಕ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಜೊತೆಗೆ ಇದು ಡಿಎಂಕೆ ಪಕ್ಷದ ಪ್ರತಿಷ್ಟೆಯ ಕ್ಷೇತ್ರವಾಗಿರುವುದರಿಂದ ರಾಜ್ಯದ ಉಳಿದ ಕ್ಷೇತ್ರಗಳಿಗಿಂತ ಇಲ್ಲಿ ಚುನಾವಣೆಯ ಕಾವು ಹೆಚ್ಚಿರಲಿದೆ ಎಂದು ಅಂದಾಜಿಸಲಾಗುತ್ತಿದೆ. ವಿಶೇಷವೆಂದರೆ ಇಬ್ಬರು ಸ್ಪರ್ಧಿಗಳೂ ಕೂಡ ಸಿನಿಮಾ ಕ್ಷೇತ್ರದಲ್ಲಿ ಹೆಚ್ಚಿನ ವರ್ಚಸ್ಸುಳ್ಳವರಾಗಿದ್ದಾರೆ.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here