Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...