ತಮಿಳುನಾಡಿನ ವಿರುದನಗರ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಟಾಕಿ ತಯಾರಿಕೆ ವೇಳೆ ರಾಸಾಯನಿಕ ಬೆರೆಸುವ ಪ್ರಕ್ರಿಯೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ ಎಂದು ವರದಿ ಹೇಳಿವೆ. ತಮಿಳುನಾಡು
ಪಟಾಕಿ ಸ್ಪೋಟದ ಪರಿಣಾಮ ಕಾರ್ಖಾನೆಯ ಒಂದು ಕೊಠಡಿ ಧ್ವಂಸವಾಗಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ರಾಸಾಯನಿಕಗಳನ್ನು ಬೆರೆಸುವ ಸಮಯದಲ್ಲಿ ಸ್ಫೋಟ ಸಂಭವಿಸಿದ್ದರಿಂದ ನಾಲ್ಕು ಕೊಠಡಿಗಳನ್ನು ಒಡೆದು ಚೆಲ್ಲಾಪಿಲ್ಲಿಯಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಮಾಹಿತಿ ತಿಳಿದು ಬಂದ ಅಗ್ನಿಶಾಮಕ ಸಿಬ್ಬಂದಿ ಅವಶೇಷಗಳನ್ನು ತೆಗೆದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು
ವಿರುದುನಗರ ಜಿಲ್ಲೆಯ ಚತುರ್ ಬಳಿಯ ಅಪ್ಪನಾಯಕನಪಟ್ಟಿ ಪಂಚಾಯಿತಿ ವ್ಯಾಪ್ತಿಯ ಪೊಮೈಯಾಪುರಂ ಗ್ರಾಮದ ಸಾಯಿನಾಥ್ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಎಂದಿನಂತೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪಟಾಕಿ ತಯಾರಿಸಲು ಬಳಸುವ ರಾಸಾಯನಿಕಗಳನ್ನು ಮಿಶ್ರಣ ಮಾಡುವಾಗ ರಾಸಾಯನಿಕ ಬದಲಾವಣೆ ಮತ್ತು ಘರ್ಷಣೆ ಭೀಕರ ಸ್ಫೋಟಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.
ಭೀಕರ ಅಪಘಾತದಲ್ಲಿ ವೇಲ್ಮುರುಗನ್, ನಾಗರಾಜ್, ಕಣ್ಣನ್, ಕಾಮರಾಜ್, ಶಿವಕುಮಾರ್ ಮತ್ತು ಮೀನಾಕ್ಷಿಸುಂದರಂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮತ್ತೆ ಇಬ್ಬರನ್ನು 90% ಸುಟ್ಟ ಗಾಯಗಳೊಂದಿಗೆ ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ವಿರುದುನಗರ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂಓದಿ: ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ
ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ


