Homeಮುಖಪುಟಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

ಒಂಟಿ ಮಹಿಳೆಯನ್ನು ‘ಕುಟುಂಬ’ ಎಂದು ಗುರುತಿಸಿ ರೇಷನ್ ಕಾರ್ಡ್‌ ನೀಡಲಿರುವ ತಮಿಳುನಾಡು ಸರ್ಕಾರ

- Advertisement -
- Advertisement -

ಪತಿ ಅಥವಾ ಪೋಷಕರಿಂದ ಬೇರ್ಪಟ್ಟ ರಾಜ್ಯದ ಒಂಟಿ ಮಹಿಳೆಯರನ್ನು ‘ಕುಟುಂಬ’ ಎಂದು ಗುರುತಿಸಿ, ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸ ನಿಯಮದಂತೆ ಕಾರ್ಡ್ ಪಡೆಯಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸರ್ಕಾರ ಹೇಳಿದ್ದು, ಅದರ ನಂತರ ತಾಜಾ ಕಾರ್ಡ್‌ಗಳನ್ನು ನೀಡಲಾಗುತ್ತದೆ.

ದಂಪತಿಗಳು ಬೇರೆಯಾಗಲು ಬಯಸಿ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದಾಗ ಪಡಿತರ ಕಾರ್ಡ್‌ನಲ್ಲಿ ಹೆಂಡತಿಯ ಹೆಸರು ಹಾಗೆ ಉಳಿದುಕೊಳ್ಳತ್ತದೆ. ಈ ಸಮಯದಲ್ಲಿ ತನ್ನ ಹೆಂಡತಿಯ ಹೆಸರನ್ನು ತೆಗೆದುಹಾಕಲು ಪತಿ ಸಿದ್ಧನಿಲ್ಲದಿದ್ದರೆ, ಮಹಿಳೆಗೆ ಅರ್ಹವಾದ ಮೂಲಭೂತ ಪ್ರಯೋಜನಗಳು ದಕ್ಕುವುದಿಲ್ಲ. ಆದ್ದರಿಂದ, ಈ ಸಂದರ್ಭದಲ್ಲಿ ಮಹಿಳೆ ಹಿಂದಿನ ಕಾರ್ಡ್‌ನಲ್ಲಿರುವ ಹೆಸರನ್ನು ತೆಗೆದು ಹೊಸ ಕಾರ್ಡ್‌ಗಾಗಿ ಅರ್ಜಿ ಹಾಕಬಹುದು.

ಇದನ್ನೂ ಓದಿ: ‘ಇಂತವನ್ನೆಲ್ಲಾ ಯುಪಿಯಲ್ಲಿ ಇಟ್ಟುಕೊಳ್ಳಿ, ಇಲ್ಲಿ ಅಲ್ಲ’ – ಯುಪಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಛೀಮಾರಿ

ಕಂದಾಯ ನಿರೀಕ್ಷಕರ ಪರಿಶೀಲನೆಯ ನಂತರ, ನಾಗರಿಕ ಸರಬರಾಜು ವಲಯದ ಅಧಿಕಾರಿಯು ಈಗಿರುವ ಹೆಸರನ್ನು ತೆಗೆದುಹಾಕಿ, ಮಹಿಳೆಯನ್ನು ‘ಕುಟುಂಬ’ ಎಂದು ನಮೂದಿಸಿ ಹೊಸ ಕಾರ್ಡ್ ನೀಡುವ ಅಧಿಕಾರವನ್ನು ಹೊಂದಿರುತ್ತಾರೆ. ಈ ಸಡಿಲಿಕೆಯು ಅವಿವಾಹಿತ ಒಂಟಿ ಮಹಿಳೆಯರು ಕೂಡ ಅರ್ಹರಾಗಿದ್ದು, ಜೊತೆಗೆ ಇದಕ್ಕೆ ವಿಚ್ಛೇದನ ಕೂಡಾ ಕಡ್ಡಾಯವಲ್ಲ ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಅಸ್ತಿತ್ವದಲ್ಲಿರುವ Vs ಪರಿಷ್ಕೃತ

ಈ ಹಿಂದೆ, ಬೇರ್ಪಟ್ಟ ಮಹಿಳೆ, ತನ್ನ ಮಕ್ಕಳೊಂದಿಗೆ ಅಥವಾ ಇತರ ಅವಲಂಬಿತರೊಂದಿಗೆ ವಾಸಿಸುತ್ತಿದ್ದರೆ, ಅವರು ಕಾನೂನುಬದ್ಧವಾಗಿ ವಿಚ್ಛೇದನ ಪಡೆಯದ ಹೊರತು ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸದ ಹೊರತು ಪಡಿತರ ಚೀಟಿಗೆ ಅರ್ಹರಾಗಿರಲಿಲ್ಲ.

ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ ಅವಿವಾಹಿತ ಮಹಿಳೆಯರು ಪಡಿತರ ಚೀಟಿ ಪಡೆಯಲು ಅರ್ಹರಲ್ಲ, ಮತ್ತು ಅವರು ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದಾಗ ಮಾತ್ರ ಅವರನ್ನು ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಯುಪಿ: 2 ನೇ ತರಗತಿ ಬಾಲಕನನ್ನು ಶಾಲಾ ಕಟ್ಟಡದ ಮೇಲಿಂದ ತಲೆ ಕೆಳಗಾಗಿಸಿ ನೇತಾಡಿಸಿದ ಶಿಕ್ಷಕ

ಪ್ರತ್ಯೇಕವಾಗಿ ವಾಸಿಸುವ ಒಂಟಿ ಮಹಿಳೆಯರು ಯಾವುದೇ ತೊಂದರೆಯಿಲ್ಲದೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಪರಿಷ್ಕೃತ ನಿಯಮ ಹೇಳುತ್ತದೆ.

ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ (AIDWA) ತಮಿಳುನಾಡು ಸರ್ಕಾರದ ಈ ತೀರ್ಮಾನವನ್ನು ಸ್ವಾಗತಿಸಿದ್ದು, ಈ ನಿರ್ಧಾರವನ್ನು ಪ್ರಗತಿಪರ ಎಂದು ಶ್ಲಾಘಿಸಿದೆ.

AIDWA ರಾಜ್ಯ ಕಾರ್ಯದರ್ಶಿ ಎಸ್‌ಕೆ ಪೊನ್ನುತ್ತಾಯಿ ಮಾತನಾಡಿ, ಪಡಿತರ ಚೀಟಿ ಇಲ್ಲದ ಕಾರಣ ಕೆಳ ಆರ್ಥಿಕ ವರ್ಗದ ಒಂಟಿ ಮಹಿಳೆಯರು ಪೊಂಗಲ್ ಮತ್ತು ಲಾಕ್‌ಡೌನ್ ಸಮಯದಲ್ಲಿ ನೀಡಲಾದ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಆಹಾರ ಭದ್ರತೆಯ ಜೊತೆಗೆ, ಸರ್ಕಾರವು ನೀಡುವ ಎಲ್ಲಾ ಪ್ರಯೋಜನಗಳು ಅಗತ್ಯವಿರುವ ಜನರಿಗೆ ತಲುಪುವುದನ್ನು ಈ ನಿರ್ಧಾರವು ಖಚಿತಪಡಿಸುತ್ತದೆ  ಹೇಳಿದ್ದಾರೆ.

ಒಂಟಿ ಮಹಿಳೆಯರಿಗೆ ಪಡಿತರ ಚೀಟಿ ನೀಡುವಂತೆ ಒತ್ತಾಯಿಸಿ ಹಲವಾರು ಹೋರಾಟಗಳನ್ನು ಸಂಘಟನೆಯು ಮಾಡುತ್ತಾ ಬರುತ್ತಿದೆ.

ಇದನ್ನೂ ಓದಿ: ಅಜೀಂ ಪ್ರೇಮ್‌ಜಿ ದೇಶದ ಅತಿ ದೊಡ್ಡ ದಾನಿ: ದಿನಕ್ಕೆ 27 ಕೋಟಿ ರೂ. ದೇಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...