Homeಮುಖಪುಟತಮಿಳುನಾಡು ಸರ್ಕಾರ VS ರಾಜ್ಯಪಾಲ: ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

ತಮಿಳುನಾಡು ಸರ್ಕಾರ VS ರಾಜ್ಯಪಾಲ: ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

- Advertisement -
- Advertisement -

ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರಗೊಂಡ 10 ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಯ ಕಾರಣ ಹೇಳಿ ಸುದೀರ್ಘ ಸಮಯ ತಡೆಹಿಡಿದು ಇರಿಸಿಕೊಂಡಿದ್ದ ರಾಜ್ಯಪಾಲ ಆರ್‌. ಎನ್‌. ರವಿ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ (ಏ.8) ಮಹತ್ವದ ತೀರ್ಪು ನೀಡಿದೆ.

ತೀರ್ಪು ಪ್ರಕಟಿಸುವ ವೇಳೆ, ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಂವಿಧಾನದ 200ನೇ ವಿಧಿಯಡಿ ಹೇಳಲಾದ ರಾಜ್ಯಪಾಲರ ಅಧಿಕಾರ ಮತ್ತು ಜವಾಬ್ದಾರಿಗಳನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು, ರಾಜ್ಯಪಾಲರು ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ದುರ್ಬಲಗೊಳಿಸಬಾರದು ಎಂದಿದೆ. ಮಸೂದೆಗಳಿಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ತಡೆಯಲು ಕೆಲವು ನಿರ್ದೇಶನಗಳನ್ನು ನೀಡಿದೆ. ರಾಜ್ಯಪಾಲರು ತಮಗೆ ಕಳುಹಿಸಲಾದ ಮಸೂದೆಗಳ ಮೇಲೆ ಕ್ರಮ ಕೈಗೊಳ್ಳಲು ನಿರ್ದಿಷ್ಟ ಸಮಯ ನಿಗದಿಪಡಿಸಿದೆ.

ವಿಧಿ 200ರ ಅಡಿಯಲ್ಲಿ ರಾಜ್ಯಪಾಲರ ಪಾತ್ರ

ಭಾರತೀಯ ಸಂವಿಧಾನದ 200ನೇ ವಿಧಿಯು ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ ರಾಜ್ಯಪಾಲರು ಅನುಸರಿಸಬೇಕಾದ ಕಾರ್ಯವಿಧಾನವನ್ನು ವಿವರಿಸುತ್ತದೆ. ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ಸಹಿಗಾಗಿ ಕಳುಹಿಸಿದರೆ, ರಾಜ್ಯಪಾಲರ ಮುಂದೆ ಮೂರು ಆಯ್ಕೆಗಳಿರುತ್ತವೆ:    1. ಮಸೂದೆಗೆ ಒಪ್ಪಿಗೆ ನೀಡುವುದು, 2. ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸುವುದು ಮತ್ತು 3. ಮಸೂದೆಯನ್ನು ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸುವುದು.

ರಾಜ್ಯಪಾಲರು ಸಹಿ ಹಾಕದೆ ವಾಪಸ್‌ ಕಳುಹಿಸಿದ ಮಸೂದೆಯನ್ನು, ರಾಜ್ಯಪಾಲರ ಸಲಹೆಗಳ ಆಧಾರದ ಮೇಲೆ ಶಾಸಕಾಂಗ ಮರುಪರಿಶೀಲಿಸಿ, ಮರು-ಅಂಗೀಕಾರ ಮಾಡದ ಹೊರತು ಮಸೂದೆಯು ರದ್ದಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಯಾವುದೇ ಮಸೂದೆಗೆ ಸಹಿ ಹಾಕದೆ ವಾಪಸ್ ಕಳುಹಿಸುವಾಗ ರಾಜ್ಯಪಾಲರು ಸರಿಯಾದ ಕಾರ್ಯವಿಧಾನವನ್ನು ಅನುಸರಿಸಬೇಕು. ಅನಗತ್ಯ ವಿಳಂಬ ಮಾಡಬಾರದು. ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಮಸೂದೆಯನ್ನು ತಡೆಹಿಡಿಯುವುದು ಆಯ್ಕೆಯಲ್ಲ. ವಿಧಿ 200ರ ಅಡಿಯಲ್ಲಿರುವ ಮೂರು ಆಯ್ಕೆಗಳಲ್ಲಿ ಯಾವುದಾದರು ಒಂದನ್ನು ರಾಜ್ಯಪಾಲರು ಅನುಸರಿಸಲೇಬೇಕು ಎಂದಿದೆ.

ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ

ರಾಜ್ಯಪಾಲರು ‘ವೀಟೋ’ ಅಧಿಕಾರ ಹೊಂದಿಲ್ಲ, ಅಂದರೆ ಅವರು ಶಾಸಕಾಂಗ ಅಂಗೀಕರಿಸಿದ ಮಸೂದೆಗಳ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಸುಮ್ಮನೆ ತಡೆ ಹಿಡಿದು ಇರಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ವಿಧಿ 200 ಮೊದಲ ನಿಬಂಧನೆಯ ‘ಸಾಧ್ಯವಾದಷ್ಟು ಬೇಗ’ ಎಂಬ ಪದವು ರಾಜ್ಯಪಾಲರು ಮಸೂದೆಯ ಕುರಿತು ತುರ್ತು ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದನ್ನು ಹೇಳುತ್ತದೆ ಎಂದಿದೆ.

ಮಾನ್ಯವಾದ ಸಾಂವಿಧಾನಿಕ ಕಾರಣಗಳಿಲ್ಲದೆ ಮಸೂದೆಯ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡುವ ಅಥವಾ ಮಸೂದೆಯನ್ನು ಸುಖಾ ಸುಮ್ಮನೆ ತಡೆಹಿಡಿಯುವ ‘ಪಾಕೆಟ್ ವೀಟೋ’ ಅಧಿಕಾರ ಚಲಾಯಿಸಲು ರಾಜ್ಯಪಾಲರಿಗೆ ಅವಕಾಶ ಇಲ್ಲ. ಒಂದಾ ಮಸೂದೆಗೆ ಸಹಿ ಹಾಕಬೇಕು ಅಥವಾ ಹಿಂದಿರುಗಿಸಬೇಕು, ಇಲ್ಲದಿದ್ದರೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಳುಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಜ್ಯಪಾಲರು ಹಿಂದಿರುಗಿಸಿದ ಮಸೂದೆಯನ್ನು ಶಾಸಕಾಂಗ ಪರಿಶೀಲನೆ ನಡೆಸಿ ಮತ್ತೆ ಕಳುಹಿಸಿದರೆ ರಾಜ್ಯಪಾಲರು ಅದಕ್ಕೆ ಸಹಿ ಹಾಕಬೇಕು, ಮತ್ತೆ ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಲು ಸಾಧ್ಯವಿಲ್ಲ ಎಂದಿದೆ.

ಶಾಸಕಾಂಗ ಮರು ಪರಿಶೀಲನೆ ಮಾಡಿ ಕಳುಹಿಸಿದ ಬಳಿಕವೂ 10 ಮಸೂದೆಗಳನ್ನು ರಾಷ್ಟ್ರಪತಿಗಳ ಪರಿಶೀಲನೆಗೆಂದು ತಡೆ ಹಿಡಿದು ಇರಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರ ನಡೆ ‘ಅಸಂವಿಧಾನಿಕ’ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಇದು ‘ಅಧಿಕಾರದ ದುರ್ಬಳಕೆ’ ಎಂದಿದೆ.

ಆ ಮಸೂದೆಗಳ ಕುರಿತು ರಾಷ್ಟ್ರಪತಿಗಳು ತೆಗೆದುಕೊಂಡ ಯಾವುದೇ ನಂತರದ ಕ್ರಮವು ನಿಲ್ಲುವುದಿಲ್ಲ ಎಂದು ಆದೇಶಿಸಿದೆ. ಶಾಸಕಾಂಗವು ಮಸೂದೆಗಳನ್ನು ಮರುಪರಿಶೀಲಿಸಿದ ದಿನಾಂಕದಂದು ರಾಜ್ಯಪಾಲರು ಈ ಮಸೂದೆಗಳಿಗೆ ಒಪ್ಪಿಗೆ ನೀಡಿದ್ದಾರೆ ಎಂದು ಪರಿಗಣಿಸಲಾಗಿದೆ. ಈ ನಿರ್ಧಾರವನ್ನು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯದ ಅಂತರ್ಗತ ಅಧಿಕಾರವನ್ನು ಬಳಸಿಕೊಂಡು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.

ರಾಜ್ಯಪಾಲರಿಗೆ ಕಾಲಮಿತಿ

ಸಂವಿಧಾನದ 200ನೇ ವಿಧಿಯಡಿ ರಾಜ್ಯಪಾಲರು ಮಸೂದೆಗಳ ಕುರಿತು ಇಂತಿಷ್ಟೇ ಸಮಯದೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಸ್ಪಷ್ಟವಾಗಿ ಇಲ್ಲ. ಆದರೂ, ‘ಸಾಧ್ಯವಾದಷ್ಟು ಬೇಗ’ ಎಂಬ ಪದವು ತುರ್ತು ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದನ್ನು ಸೂಚಿಸುತ್ತದೆ. ಹಾಗಾಗಿ, ಅನಗತ್ಯ ವಿಳಂಬ ಮಾಡಬಾರದು ಎಂದಿರುವ ಸುಪ್ರೀಂ ಕೋರ್ಟ್, ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವಲ್ಲಿ ಅನಗತ್ಯ ವಿಳಂಬ ಮಾಡುವುದನ್ನು ತಡೆಯಲು ರಾಜ್ಯಪಾಲರಿಗೆ ಕಾಲಮಿತಿಗಳನ್ನು ನಿಗದಿಪಡಿಸಿದೆ.

ರಾಜ್ಯಪಾಲರು ಮಸೂದೆಯನ್ನು ಹಿಂದಿರುಗಿಸಿದರೆ ಅಥವಾ ರಾಷ್ಟ್ರಪತಿಗಳಿಗೆ ಮಸೂದೆಯನ್ನು ಕಾಯ್ದಿರಿಸಿದರೆ, ರಾಜ್ಯ ಸಚಿವ ಸಂಪುಟದ ಸಲಹೆಯ ಆಧಾರದ ಮೇಲೆ ಗರಿಷ್ಠ ಒಂದು ತಿಂಗಳೊಳಗೆ ಈ ಕುರಿತು ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು.

ರಾಜ್ಯ ಸಚಿವ ಸಂಪುಟದ ಸಲಹೆಗೆ ವಿರುದ್ಧವಾಗಿ ರಾಜ್ಯಪಾಲರು ಮಸೂದೆಯನ್ನು ತಡೆ ಹಿಡಿದರೆ, ಮೂರು ತಿಂಗಳೊಳಗೆ ಮಸೂದೆಯನ್ನು ಸಂದೇಶದೊಂದಿಗೆ ಹಿಂದಿರುಗಿಸಬೇಕು.

ರಾಜ್ಯ ಸಚಿವ ಸಂಪುಟದ ಸಲಹೆಯ ವಿರುದ್ಧ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಮಸೂದೆಯನ್ನು ಕಾಯ್ದಿರಿಸಿದರೆ, ಮೂರು ತಿಂಗಳೊಳಗೆ ಅದಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಮಾಡಬೇಕು.

ಶಾಸಕಾಂಗವು ಮರುಪರಿಶೀಲನೆಯ ನಂತರ ಮಸೂದೆಯನ್ನು ರಾಜ್ಯಪಾಲರಿಗೆ ಮತ್ತೆ ಕಳುಹಿಸಿದರೆ, ಅವರು ಗರಿಷ್ಠ ಒಂದು ತಿಂಗಳೊಳಗೆ ಅದಕ್ಕೆ ಒಪ್ಪಿಗೆ ನೀಡಬೇಕು.

ಈ ಸಮಯ ಮಿತಿಗಳನ್ನು ಪಾಲಿಸಲು ವಿಫಲವಾದರೆ ರಾಜ್ಯಪಾಲರ ನಿಷ್ಕ್ರಿಯತೆಯನ್ನು ನ್ಯಾಯಾಂಗದ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಈ ಮೂಲಕ ಅನಗತ್ಯ ವಿಳಂಬಗಳಿಂದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಅಡ್ಡಿಯಾಗುವುದನ್ನು ತಪ್ಪಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಜ್ಯಪಾಲರ ವಿವೇಚನೆ ಮತ್ತು ನ್ಯಾಯಾಂಗ ಪರಿಶೀಲನೆ

ಸಂವಿಧಾನದಲ್ಲಿ ವಿವರಿಸಿರುವ ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ರಾಜ್ಯಪಾಲರು ಸಾಮಾನ್ಯವಾಗಿ ರಾಜ್ಯ ಸಚಿವ ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಷ್ಟ್ರಪತಿಗಳ ಪರಿಶೀಲನೆಗೆ ಮಸೂದೆಯನ್ನು ಕಾಯ್ದಿರಿಸುವಂತಹ ಸಂವಿಧಾನದಿಂದ ನಿರ್ದಿಷ್ಟವಾಗಿ ಅಗತ್ಯವಿರುವ ಸಂದರ್ಭಗಳಲ್ಲಿ ಮಾತ್ರ ರಾಜ್ಯಪಾಲರು ವಿವೇಚನೆಯನ್ನು ಚಲಾಯಿಸಬಹುದು. ಈ ವಿಧಾನವು ಔಪಚಾರಿಕ ರಾಜ್ಯದ ಮುಖ್ಯಸ್ಥರಾಗಿ ರಾಜ್ಯಪಾಲರು ಸಚಿವ ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸುತ್ತಾರೆ ಎಂಬ ವಿಶಾಲ ತತ್ವಕ್ಕೆ ಅನುಗುಣವಾಗಿದೆ. ವಿವೇಚನೆಯು ಸ್ಪಷ್ಟವಾಗಿ ಕಡ್ಡಾಯವಾಗಿರುವ ಸ್ಥಳಗಳನ್ನು ಹೊರತುಪಡಿಸಿ ಎಂದು ಸುಪ್ರೀಂ ಕೋರ್ಟ್ ವಿವರಿಸಿದೆ.

ತೀರ್ಪು ಪ್ರಕಟಿಸುವ ವೇಳೆ ಬಿ.ಕೆ ಪವಿತ್ರಾ ಪ್ರಕರಣದಲ್ಲಿ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಮಸೂದೆಗಳನ್ನು ಕಾಯ್ದಿರಿಸುವ ಬಗ್ಗೆ ವಿವೇಚನೆ ಹೊಂದಿರುತ್ತಾರೆ ಎಂದು ಹೇಳಿದ್ದ ಹಿಂದಿನ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ತೀರ್ಪು ಇದಕ್ಕೂ ಮುನ್ನ ನೀಡಿದ ತೀರ್ಪುಗಳಿಗೆ, ವಿಶೇಷವಾಗಿ ಶಂಶೇರ್ ಸಿಂಗ್ ಪ್ರಕರಣದ ತೀರ್ಪಿಗೆ ಹೊಂದಾಣಿಕೆಯಾಗುವುದಿಲ್ಲ. ಶಂಶೇರ್ ಸಿಂಗ್ ಪ್ರಕರಣದ ತೀರ್ಪು ರಾಜ್ಯಪಾಲರ ಅಧಿಕಾರ ರಾಜ್ಯ ಸಚಿವ ಸಂಪುಟದ ಸಲಹೆಯೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದೆ.

ನ್ಯಾಯಾಂಗದ ಪರಿಶೀಲನೆಯು ಲಿಖಿತ ಸಂವಿಧಾನದ ಮೂಲಭೂತ ಲಕ್ಷಣವಾಗಿದೆ ಎಂಬ ತತ್ವವನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಸಂವಿಧಾನದ 200ನೇ ವಿಧಿಯಡಿ ಹೇಳಲಾದ ನಿಯಮಗಳ ಅನುಸಾರ ರಾಜ್ಯಪಾಲರ ಕಾರ್ಯ ವಿಧಾನಗಳು ಇಲ್ಲದಿದ್ದರೆ, ಅದು ನ್ಯಾಯಾಂಗದ ಪರಿಶೀಲನೆಗೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದೆ.

ವಕ್ಫ್‌ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಅರ್ಜಿ: ಕೇಂದ್ರದಿಂದ ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...