Homeಮುಖಪುಟತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಕೋಲಾಹಲ : ಭಾಷಣ ಮಾಡದೆ ಹೊರನಡೆದ ರಾಜ್ಯಪಾಲ

- Advertisement -
- Advertisement -

ತಮಿಳುನಾಡು ವಿಧಾನಸಭೆ ಇಂದು (ಜ.6) ಮತ್ತೊಮ್ಮೆ ಕೋಲಾಹಲಕ್ಕೆ ಸಾಕ್ಷಿಯಾಯಿತು. ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲ ಆರ್‌.ಎನ್‌ ರವಿ ಅವರು ಭಾಷಣ ಮಾಡದೆ ಸದನದಿಂದ ಹೊರ ನಡೆದರು.

ವಿಧಾನಸಭೆ ಕಲಾಪ ಆರಂಭಗೊಂಡಾಗ ತಮಿಳುನಾಡು ನಾಡಗೀತೆ ‘ತಮಿಳ್ ತಾಯಿ ವಝುತ್ತು’ ಮಾತ್ರ ನುಡಿಸಲಾಗಿದೆ. ರಾಷ್ಟ್ರಗೀತೆ ನುಡಿಸಿಲ್ಲ. ಈ ಮೂಲಕ ರಾಷ್ಟ್ರಗೀತೆ ಮತ್ತು ಸಂವಿಧಾನಕ್ಕೆ ಸರ್ಕಾರ ಅವಮಾನ ಮಾಡಿದೆ ಎಂದು ರಾಜ್ಯಪಾಲರ ಕಚೇರಿ ಆರೋಪಿಸಿದೆ.

ವರದಿಗಳ ಪ್ರಕಾರ, ಇಂದು ಬೆಳಿಗ್ಗೆ 9.29ಕ್ಕೆ ನಾಡಗೀತೆ ‘ತಮಿಳ್ ತಾಯಿ ವಝುತ್ತು’ ನುಡಿಸುವ ಮೂಲಕ ವಿಧಾನಸಭೆಯ ಕಲಾಪ ಆರಂಭಗೊಂಡಿತು. ಇದಾದ ತಕ್ಷಣ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ವಿಷಯವೊಂದರ ಸಂಬಂಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಎಐಎಡಿಎಂಕೆ ಶಾಸಕರು ಕೂಡ ಬಾವಿಗಿಳಿದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಈ ಗದ್ದಲದ ನಡುವೆಯೇ ರಾಜ್ಯಪಾಲರು ಅಲ್ಲಿದ್ದವರಿಗೆ ಕೇಳಿಸದಂತೆ ಮಾತುಗಳನ್ನು ಹೇಳಿ 9:32ಕ್ಕೆ ವಿಧಾನಸಭೆಯಿಂದ ನಿರ್ಗಮಿಸಿದರು.

ರಾಜ್ಯಪಾಲರ ನಿರ್ಗಮನದ ನಂತರ, ಸ್ಪೀಕರ್ ಎಂ. ಅಪ್ಪಾವು ಅವರು ರಾಜ್ಯ ಸರ್ಕಾರ ಸಾಂಪ್ರದಾಯಿಕವಾಗಿ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ, ಎಐಎಡಿಎಂಕೆ ಶಾಸಕರು ಪ್ರತಿಭಟನೆ ವ್ಯಕ್ತಪಡಿಸುತ್ತ ಹೊರ ಹೋದರು. ಈ ವೇಳೆ ಬಿಜೆಪಿ, ಪಿಎಂಕೆ ಮತ್ತು ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಸದಸ್ಯರು ಕೂಡ ಪ್ರತ್ಯೇಕ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ವ್ಯಕ್ತಪಡಿಸಿ ಸದನದಿಂದ ಹೊರ ನಡೆದರು.

ವಿಧಾನಸಭೆಯ ಕೋಲಾಹಲದ ಕುರಿತು ಎಕ್ಸ್‌ ಪೋಸ್ಟ್‌ ಮೂಲಕ ರಾಜಭವನ ಪ್ರತಿಕ್ರಿಯಿಸಿದ್ದು, “ಇಂದು ತಮಿಳುನಾಡು ವಿಧಾನಸಭೆಯಲ್ಲಿ ಭಾರತದ ಸಂವಿಧಾನ ಮತ್ತು ರಾಷ್ಟ್ರಗೀತೆಯನ್ನು ಮತ್ತೊಮ್ಮೆ ಅವಮಾನಿಸಲಾಗಿದೆ. ರಾಷ್ಟ್ರಗೀತೆಯನ್ನು ಗೌರವಿಸುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೊದಲ ಮೂಲಭೂತ ಕರ್ತವ್ಯವಾಗಿದೆ. ರಾಜ್ಯಪಾಲರ ಭಾಷಣದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿ ಇದನ್ನು ನುಡಿಸಲಾಗುತ್ತದೆ” ಎಂದು ಬರೆದುಕೊಂಡಿದೆ.

ಮುಂದುವರಿದು, ವಿಧಾನಸಭೆಯಲ್ಲಿ ರಾಜ್ಯಪಾಲರ ಆಗಮನದ ನಂತರ ತಮಿಳು ನಾಡಗೀತೆ ಮಾತ್ರ ನುಡಿಸಲಾಗಿದೆ. ರಾಜ್ಯಗೀತೆಯ ಮೊದಲು ರಾಷ್ಟ್ರಗೀತೆಯನ್ನು ನುಡಿಸಬೇಕು ಎಂದು ರಾಜ್ಯಪಾಲರು ಪದೇ ಪದೇ ಒತ್ತಾಯಿಸಿದರು. ರಾಜ್ಯಪಾಲರು ಸದನದ ಸಾಂವಿಧಾನಿಕ ಕರ್ತವ್ಯವನ್ನು ಗೌರವಯುತವಾಗಿ ನೆನಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಸ್ಪೀಕರ್ ಎಂ. ಅಪ್ಪಾವು ಅವರಿಗೆ ರಾಷ್ಟ್ರಗೀತೆ ನುಡಿಸುವಂತೆ ಕೋರಿದ್ದಾರೆ. ಅವರ ನಿರಾಕರಣೆಯು ರಾಜ್ಯಪಾಲರ ಬೇಸರಕ್ಕೆ ಕಾರಣವಾಗಿದೆ. ಹಾಗಾಗಿ, ಅವರು ಸದನದಿಂದ ಹೊರನಡೆದರು” ಎಂದು ಹೇಳಿದೆ.

ತಮಿಳುನಾಡು ವಿಧಾನಸಭೆಯ ಸ್ಥಾಪಿತ ನಿಯಮಗಳ ಪ್ರಕಾರ, ಕಲಾಪಗಳ ಪ್ರಾರಂಭದಲ್ಲಿ ತಮಿಳು ನಾಡಗೀತೆಯನ್ನು ನುಡಿಸಲಾಗುತ್ತದೆ. ಸ್ಪೀಕರ್ ಅವರು ರಾಜ್ಯಪಾಲರ ಭಾಷಣದ ತಮಿಳು ಆವೃತ್ತಿಯನ್ನು ಓದಿದ ನಂತರ ದಿನದ ವ್ಯವಹಾರದ ಮುಕ್ತಾಯದಲ್ಲಿ ಸಾಂಪ್ರದಾಯಿಕವಾಗಿ ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ ಎಂದು ವರದಿಗಳು ಹೇಳಿವೆ.

ತಮ್ಮ ಅನುಮತಿ ಇಲ್ಲದೆ ವಿಧಾನಸಭೆಯೊಳಗೆ ನಡೆದ ಯಾವುದೇ ಬೆಳವಣಿಗೆಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ಸ್ಪೀಕರ್ ಅಪ್ಪಾವು ಸೂಚಿಸಿದ್ದು, ಉಲ್ಲಂಘನೆಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...