HomeUncategorizedಅಸೆಂಬ್ಲಿ ಅಂಗೀಕರಿಸಿದ ಆನ್‌ಲೈನ್ ಜೂಜಾಟ ನಿಷೇಧದ ಮಸೂದೆಯನ್ನು ಹಿಂದಿರುಗಿಸಿದ ತಮಿಳುನಾಡು ರಾಜ್ಯಪಾಲ ರವಿ

ಅಸೆಂಬ್ಲಿ ಅಂಗೀಕರಿಸಿದ ಆನ್‌ಲೈನ್ ಜೂಜಾಟ ನಿಷೇಧದ ಮಸೂದೆಯನ್ನು ಹಿಂದಿರುಗಿಸಿದ ತಮಿಳುನಾಡು ರಾಜ್ಯಪಾಲ ರವಿ

- Advertisement -
- Advertisement -

ಅಕ್ಟೋಬರ್ 19ರಂದು ಅಸೆಂಬ್ಲಿ ಅಂಗೀಕರಿಸಿದ ತಮಿಳುನಾಡು ಆನ್‌ಲೈನ್ ಜೂಜಾಟ ಮತ್ತು ಆನ್‌ಲೈನ್ ಗೇಮ್ಸ್ ನಿಯಂತ್ರಣ ಮಸೂದೆಯನ್ನು ರಾಜ್ಯಪಾಲ ಆರ್‌ಎನ್ ರವಿ ಅವರು ಬುಧವಾರ ರಾಜ್ಯ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ.

ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ”ರಾಜ್ಯ ಶಾಸಕಾಂಗವು ಈ ಮಸೂದೆಯನ್ನು ರೂಪಿಸಲು ಯಾವುದೇ ಶಾಸಕಾಂಗ ಸಾಮರ್ಥ್ಯವನ್ನು ಹೊಂದಿಲ್ಲ ಎಂಬುದು ವಾಪಸಾತಿಗೆ ಕಾರಣವಾಗಿದೆ” ಎಂದು ಅವರು ತಿಳಿಸಿದ್ದಾರೆ.

ರಾಜ್ಯಪಾಲರು, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಹೊಣೆಗಾರಿಕೆ ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021ರ ಕರಡು ತಿದ್ದುಪಡಿಗಳನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು

ಆನ್‌ಲೈನ್ ಜೂಜಿನಲ್ಲಿ ಭಾಗವಹಿಸುವವರಿಗೆ ರೂ. 5,000 ದಂಡ ಅಥವಾ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಬಹುದು. ಅಂತಹ ಆಟಗಳನ್ನು ಜಾಹೀರಾತು ಮಾಡುವವರಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು, ಆದರೆ ಅವುಗಳನ್ನು ಆಯೋಜಿಸುವ ವ್ಯಕ್ತಿಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಮಸೂದೆ ಪ್ರಸ್ತಾಪಿಸುತ್ತದೆ.

ಇದೀಗ ಮಸೂದೆ ಅಂಗೀಕಾರಕ್ಕಾಗಿ ಮತ್ತೆ ಅಸೆಂಬ್ಲಿಗೆ ಕಳುಹಿಸುವುದು ಸರ್ಕಾರಕ್ಕಿರುವ ಏಕೈಕ ಆಯ್ಕೆಯಾಗಿದೆ. ಮಾರ್ಚ್ 20ರಂದು ಅಸೆಂಬ್ಲಿ ತನ್ನ ಅಧಿವೇಶನಗಳನ್ನು ಪ್ರಾರಂಭಿಸಲಿದೆ.

ರಾಜ್ಯಪಾಲರು ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಕಾನೂನು ಸಚಿವ ಎಸ್ ರೆಗುಪತಿ, ”ರವಿ ಅವರು ಉಲ್ಲೇಖಿಸಿರುವ ಕಾರಣಗಳನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪರಿಶೀಲಿಸಲಿದ್ದಾರೆ ಎಂದು ಹೇಳಿದ್ದಾರೆ.

ವಿಧಾನಸಭೆ ಮತ್ತೊಮ್ಮೆ ಮಸೂದೆಯನ್ನು ಅಂಗೀಕರಿಸಿದರೆ ರಾಜ್ಯಪಾಲರು ವಿಧೇಯಕವನ್ನು ಅನುಮೋದಿಸಲು ಬದ್ಧರಾಗಿರುತ್ತಾರೆ. 2021ರಲ್ಲಿ ಮದ್ರಾಸ್ ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ಆನ್‌ಲೈನ್ ಜೂಜಾಟವನ್ನು ನಿಷೇಧಿಸುವ ಕಾನೂನನ್ನು ಅಂಗೀಕರಿಸಲು ರಾಜ್ಯ ಸರ್ಕಾರವು ಸಮರ್ಥವಾಗಿದೆ ಎಂದು ಹೇಳಿರುವುದಾಗಿ ರೆಗುಪತಿ ತಿಳಿಸಿದರು.

ಮುಖ್ಯಮಂತ್ರಿ ಎಂ.ಕೆ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 26ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ. ಸ್ಟಾಲಿನ್ ರಮ್ಮಿ ಮತ್ತು ಪೋಕರ್ ಅನ್ನು ನಿಷೇಧಿಸಿದ್ದರು. ಮದ್ರಾಸ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಕೆ.ಚಂದ್ರು ನೇತೃತ್ವದ ಸಮಿತಿಯು ಮಾಡಿದ ಶಿಫಾರಸಿನ ಮುಂದುವರಿದ ಭಾಗವಾಗಿ ಇದನ್ನು ರೂಪಿಸಲಾಗಿದೆ.

ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಈ ಆನ್‌ಲೈನ್ ಜೂಜಾಟದ ನಿಷೇಧವನ್ನು ಬೆಂಬಲಿಸುತ್ತವೆ ಎಂಬುದನ್ನು ಗಮನಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...