Homeಮುಖಪುಟಹೊಸ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ಶಿಫಾರಸು ಮಾಡಲು ಸಮಿತಿ ರಚಿಸಿದ ತಮಿಳುನಾಡು ಸರ್ಕಾರ

ಹೊಸ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ಶಿಫಾರಸು ಮಾಡಲು ಸಮಿತಿ ರಚಿಸಿದ ತಮಿಳುನಾಡು ಸರ್ಕಾರ

- Advertisement -
- Advertisement -

ಹೆಸರು ಬದಲಾವಣೆ ಸೇರಿದಂತೆ ಮೂರು ಹೊಸ ಕ್ರಿಮಿನಲ್ ಕಾನೂನುಗಳಿಗೆ ರಾಜ್ಯ ಮಟ್ಟದಲ್ಲಿ ತಿದ್ದುಪಡಿಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಎಂ ಸತ್ಯನಾರಾಯಣನ್ ನೇತೃತ್ವದ ಸಮಿತಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೋಮವಾರ ರಚಿಸಿದ್ದಾರೆ.

ಮೂರು ಕ್ರಿಮಿನಲ್ ಕಾನೂನುಗಳಾದ ಇಂಡಿಯನ್ ಪೀನಲ್ ಕೋಡ್, ದ ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ ಮತ್ತು ಇಂಡಿಯನ್ ಎವಿಡೆನ್ಸ್‌ ಆಕ್ಟ್‌ನ ಹೆಸರನ್ನು ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಎಂದು ಬದಲಾಯಿಸಿ ಜುಲೈ 1ರಂದು ಜಾರಿಗೆ ತರಲಾಗಿದೆ.

ಸಿಎಂ ಸ್ಟಾಲಿನ್ ರಚಿಸಿರುವ ಸಮಿತಿಯು ಮೂರು ಕಾನೂನುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಬಾರ್ ಅಸೋಸಿಯೇಶನ್ ಸೇರಿದಂತೆ ವಿವಿಧ ಸಮಿತಿಗಳೊಂದಿಗೆ ಚರ್ಚಿಸಿ ತಿಂಗಳೊಳಗೆ ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಲಿದೆ.

ಮೂರು ಕ್ರಿಮಿನಲ್ ಕಾನೂನುಗಳ ಹೆಸರನ್ನು ಬದಲಾಯಿಸಿರುವುದು ಮತ್ತು ಕೆಲವೊಂದು ತಿದ್ದುಪಡಿಗಳನ್ನು ತಂದಿರುವುದು ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಕಾನೂನುಗಳ ಹೆಸರನ್ನು ಆಂಗ್ಲ ಭಾಷೆಯಿಂದ ಸಂಸ್ಕೃತಕ್ಕೆ ಬದಲಾಯಿಸಲಾಗಿದೆ. ಇದು ಸಂವಿಧಾನ ವಿರೋಧಿ ಎಂದು ಕೆಲವ ವಿಶ್ಲೇಷಕರು ಹೇಳಿದ್ದಾರೆ.

ಕಾನೂನುಗಳಿಗೆ ಬದಲಾವಣೆ ತರುವಾಗ ಸಂಸತ್ತು ಸೇರಿದಂತೆ ಎಲ್ಲೂ ಚರ್ಚಿಸದೆ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ. ಹೊಸ ಕಾನೂನುಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಾಗ ಸಂಸತ್‌ನಿಂದ 146 ಪ್ರತಿಪಕ್ಷ ಸದಸ್ಯರನ್ನು ಅಮಾನತು ಮಾಡಲಾಗಿತ್ತು.

ಸೋಮವಾರ ಚೆನ್ನೈನ ಸಚಿವಾಲಯದಲ್ಲಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಮಿತಿ ರಚಿಸಿ ಸಿಎಂ ಸ್ಟಾಲಿನ್ ಆದೇಶಿಸಿದ್ದಾರೆ. ಇದಕ್ಕೂ ಮುನ್ನ ಕಾನೂನುಗಳ ಬದಲಾವಣೆ ವಿರೋಧಿಸಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹೊಸ ಕಾನೂನುಗಳ ಕೆಲ ಸೆಕ್ಷನ್‌ಗಳಲ್ಲಿ ತಪ್ಪುಗಳಿವೆ. ಕಾನೂನುಗಳ ಬದಲಾವಣೆ ವೇಳೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಹಾಗಾಗಿ, ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆದು ತಿದ್ದುಪಡಿ ತರಬೇಕು ಎಂದು ಸಿಎಂ ಸ್ಟಾಲಿನ್ ಆಗ್ರಹಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಶಿಫಾರಸು ನೀಡಲು ಸಮಿತಿ ರಚಿಸುವ ಮುನ್ನ ನಡೆದ ಸಭೆಯ ನೇತೃತ್ವನ್ನು ಸಿಎಂ ಸ್ಟಾಲಿನ್ ವಹಿಸಿದ್ದರು. ಜಲ ಸಂಪನ್ಮೂಲ ಸಚಿವ ದುರೈಮುರುಗನ್, ಅಡ್ವೊಕೇಟ್ ಜನರಲ್ ಪಿ.ಎಸ್‌ ರಾಮನ್, ಮುಖ್ಯ ಕಾರ್ಯದರ್ಶಿ ಶಿವ್ ದಾಸ್ ಮೀನಾ, ಗೃಹ ಕಾರ್ಯದರ್ಶಿ ಪಿ ಅಮುಧ, ಡಿಜಿಪಿ ಶಂಕರ್ ಜಿವಾಲ್ ಮತ್ತು ವಕೀಲರು ಮತ್ತು ಸಾರ್ವಜನಿಕರ ಪ್ರತಿನಿಧಿಗಳು ಇದ್ದರು.

ಇದನ್ನೂ ಓದಿ : ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...