ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ), ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ವಿವಿಧ ಜನಪರ ವಿಚಾರಗಳಿಗೆ ಹೋರಾಡುತ್ತಿದ್ದವರ ಮೇಲೆ ದಾಖಲಿಸಲಾಗಿದ್ದ ಪ್ರಕರಣಗಳನ್ನು ತಮಿಳುನಾಡು ಸರ್ಕಾರ ಹಿಂತೆಗೆದುಕೊಂಡಿದೆ.
ಸಿಎಎ, ಎನ್‌ಆರ್‌ಸಿ, ಮೂರು ವಿವಾದಿತ ಕೃಷಿ ಕಾಯ್ದೆಗಳು, ಸೇಲಂ-ಚೆನ್ನೈ ಎಂಟು ಪಥ ಎಕ್ಸ್ ಪ್ರೆಸ್ ವೇ, ಮಿಥೇನ್ ಹೊರತೆಗೆಯುವಿಕೆ, ನ್ಯೂಟ್ರಿನೊ ಮತ್ತು ಕೂಡಂಕುಳಂ ಅಣು ವಿದ್ಯುತ್ ಸ್ಥಾವರ ವಿರುದ್ಧದ ಹೋರಾಟಗಾರರ ಮೇಲೆ ದಾಖಲಾಗಿದ್ದ ಒಟ್ಟು 5,570 ಪ್ರಕರಣಗಳನ್ನು ಹಿಂಪಡೆಯುವಂತೆ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ. ಮಾಧ್ಯಮಗಳ ವಿರುದ್ಧ ಎಐಎಡಿಎಂಕೆ ಅಧಿಕಾರಾವಧಿಯಲ್ಲಿ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನೂ ಸರ್ಕಾರ ಹಿಂಪಡೆದಿದ್ದು, 5,570 ಪ್ರಕರಣಗಳಲ್ಲಿ 2,831 ಪ್ರಕರಣಗಳು ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿವೆ.
ಸೋಮವಾರ ಸದನದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, 700 ಮಂದಿಯನ್ನು ಸದ್ಭಾವನೆಯ ಆಧಾರದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸಿ.ಎನ್.ಅಣ್ಣಾದುರೈ ಅವರ ಜನ್ಮದಿನ (ಸೆ.15) ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತಿದೆ” ಎಂದು ಹೇಳಿದ್ದರು.
ಇದನ್ನೂ ಓದಿ: NEET ವಿರುದ್ಧ ಮಸೂದೆ ಅಂಗೀಕರಿಸಿದ ತಮಿಳುನಾಡು ಸರ್ಕಾರ; ಸಿಎಂ ಸ್ಟಾಲಿನ್ ಹೇಳಿದ್ದೇನು?