Homeಮುಖಪುಟ80 ಜಾತಿಯ ಪಕ್ಷಿಗಳನ್ನು ಗುರುತಿಸಿದ ತಮಿಳುನಾಡು

80 ಜಾತಿಯ ಪಕ್ಷಿಗಳನ್ನು ಗುರುತಿಸಿದ ತಮಿಳುನಾಡು

- Advertisement -
- Advertisement -

ತಮಿಳುನಾಡಿನಾದ್ಯಂತ ಏಕಕಾಲದಲ್ಲಿ ನಡೆಯುತ್ತಿರುವ ಪಕ್ಷಿಗಣತಿಯಲ್ಲಿ 80 ವಿವಿಧ ಜಾತಿಯ ಸುಮಾರು ಹತ್ತು ಲಕ್ಷ ಪಕ್ಷಿಗಳನ್ನು ಗುರುತಿಸಲಾಗಿದೆ. ಜನವರಿ 28 ಮತ್ತು 29 ರಂದು ನಡೆದ ಮೊದಲ ಹಂತದ ಸಮೀಕ್ಷೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಫ್ಲೆಮಿಂಗೋ ವಲಸೆ ಪಕ್ಷಿಗಳು ಕಂಡು ಬಂದಿವೆ.

ಕ್ಯಾಲಿಮೆರ್‌, ವಲಿನೋಕ್ಕಂ, ಧನುಷ್ಕೋಡಿ, ತೂತುಕುಡಿ ಮತ್ತು ಕನ್ಯಾಕುಮಾರಿಯಲ್ಲಿ ನಡೆಸಿದ ಗಣತಿಯಲ್ಲಿ ಬಹುಪಾಲು ಫ್ಲೆಮಿಂಗೋ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಪತ್ತೆಯಾಗಿವೆ. ಕ್ಯಾಲಿಮರ್‌ ಮತ್ತು ವಲಿನೋಕ್ಕಂನಲ್ಲಿ (10,000), ಧನುಷ್ಕೋಡಿಯಲ್ಲಿ (2,000), ತುತುಕುಡಿ (2,000) ಹಾಗೂ ಕನ್ಯಾಕುಮಾರಿಯಲ್ಲಿ (600) ಫ್ಲೆಮಿಂಗೋಗಳಿವೆ.

ಇದನ್ನೂ ಓದಿ: ಪಕ್ಷಿಗಳಿಗಾಗಿ ಗೂಡು, ಆಹಾರೋದ್ಯಾನ ನಿರ್ಮಿಸುತ್ತಿರುವ ಬೆಂಗಳೂರಿನ ಸ್ವಯಂ ಸೇವಕರ ತಂಡ

‘2020 ಮತ್ತು 2021ರಲ್ಲಿ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಿಗಳು ಕಂಡುಬಂದಿವೆ. ಹೆಚ್ಚು ಮಳೆಯು ಪರಿಸರ ವ್ಯವಸ್ಥೆಯನ್ನು ಪೋಷಿಸಿದ್ದು, ಇದು ಹಕ್ಕಿಗಳು ವಲಸೆ ಬಂದು ಗೂಡು ಕಟ್ಟಲು ಕಾರಣವಾಗಿದೆ’ ಎಂದು ಅರಣ್ಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಅದಲ್ಲದೇ, ಕ್ರೌಂಚ ಪಕ್ಷಿ (ಯುರೇಷಿಯನ್‌ ಕರ್ಲ್ಯೂ), ವಿಂಬ್ರೆಲ್‌ (ಚಿಕ್ಕ ಕ್ರೌಂಚ ) ಮತ್ತು ರುಡ್ಡಿ ಟರ್ನ್‌‌ಸ್ಟೋನ್‌ ಜಾತಿಯ ಅಪರೂಪದ ವಲಸೆ ಪಕ್ಷಿಗಳು ಪತ್ತೆಯಾಗಿವೆ. ಇದರ ಜೊತೆಗೆ ಮಾರ್ಷ್‌ ಸ್ಯಾಂಡ್‌ಪೈಪರ್ಸ್‌, ಲೆಸ್ಸರ್‌ ಸ್ಯಾಂಡ್‌ ಪ್ಲೊವರ್‌, ರೆಡ್‌ಶಾಂಕ್ಸ್‌, ಗ್ರೇಟ್‌ ನಾಟ್ಸ್‌ ಪ್ರಬೇಧದ ಪಕ್ಷಿಗಳು ಕಂಡುಬಂದಿವೆ.

ರೆಡ್‌ಶಾಂಕ್ಸ್ ಹಕ್ಕಿಗಳು ಹೆಚ್ಚಿನ ಸಂಖ್ಯೆಯಲ್ಲಿವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿರುವುದಾಗಿ ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ (BNHS), ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (WII), ಸಲೀಂ ಅಲಿ ಸೆಂಟರ್ ಫಾರ್ ಆರ್ನಿಥಾಲಜಿ ಮತ್ತು ನ್ಯಾಚುರಲ್ ಹಿಸ್ಟರಿ (SACON) ಸಹಯೋಗದಲ್ಲಿ ತಮಿಳುನಾಡು ಅರಣ್ಯ ಇಲಾಖೆಯು ಪಕ್ಷಿ ಗಣತಿಯನ್ನು ನಡೆಸುತ್ತಿದ್ದು, 45 ನಾಗರಿಕ ಸಂಘಗಳು, ಎನ್‌ಜಿಒಗಳು ಮತ್ತು 10 ವಿಶ್ವವಿದ್ಯಾಲಯ ಮತ್ತು ಕಾಲೇಜುಗಳು ಈ ಗಣತಿಯಲ್ಲಿ ಭಾಗವಹಿಸಿವೆ ಎಂದು ವನ್ಯಜೀವಿ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...